Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!

July 25, 2025 | Siddesh
Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!
Share Now:

ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ(Karnataka Cabinet Meeting) ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರ ಅಧ್ಯಕ್ಷತೆಯಲ್ಲಿ ಜುಲೈ 24, 2025 ರಂದು ನಡೆದ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಆರೋಗ್ಯ, ಕಾನೂನು, ರಂಗಭೂಮಿ, ಕೃಷಿ, ಮತ್ತು ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದಂತೆ (Gig Workers Welfare)ಇತರೆ ಕ್ಷೇತ್ರಗಳ ಅಭಿವೃದ್ದಿಗೆ ಅಡಿಪಾಯವನ್ನು ಹಾಕಿವೆ.

ಇದನ್ನೂ ಓದಿ: Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ! ₹35,000 ವಿದ್ಯಾರ್ಥಿವೇತನ!

ಇಂದಿನ ಈ ಲೇಖನದಲ್ಲಿ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಎಲ್ಲಾ ಪ್ರಮುಖ ನಿರ್ಧಾರಗಳನ್ನು ಸರಳವಾಗಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ.

1) ಆಂಬ್ಯುಲೆನ್ಸ್ ನಿರ್ವಹಣೆಗೆ ತಿದ್ದುಪಡಿ ವಿಧೇಯಕ:

ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ 2025 (Karnataka Private Medical Establishments Amendment Bill) ಕ್ಕೆ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಆಂಬ್ಯುಲೆನ್ಸ್ ಸೇವೆಗಳ (Ambulance Services) ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ.

2) ಔಷಧ ಖರೀದಿಗೆ 880 ಕೋಟಿ ರೂ. ಅನುಮೋದನೆ:

2025-26ನೇ ಸಾಲಿಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ (Public Health Institutions) 890 ಔಷಧಗಳು, ಉಪಭೋಗ್ಯ ವಸ್ತುಗಳು, ಮತ್ತು ರಾಸಾಯನಿಕಗಳನ್ನು ಖರೀದಿಸಲು 880.68 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಇದಕ್ಕಾಗಿ ಕೆಟಿಪಿಪಿ ಕಾಯ್ದೆ 1999 (KTPP Act) ಮತ್ತು 2000 ಕಾಯ್ದೆ ಅಡಿಯಲ್ಲಿ ಟೆಂಡರ್ ಮೂಲಕ ಔಷಧಿಗಳನ್ನು ಸಂಗ್ರಹಿಸಿ ಸರಬರಾಜು ಮಾಡಲು ಹಾಗೂ ಅಗತ್ಯ ವಿರುವ ಅನುದಾನವನ್ನು ಒದಗಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಇದನ್ನೂ ಓದಿ: UPI Payment-ಆಗಸ್ಟ್ 1, 2025 ರಿಂದ UPI ಪಾವತಿಗೆ ಹೊಸ ನಿಯಮಗಳು: ಏನೆಲ್ಲ ಬದಲಾವಣೆ?

3) ಜೀವಾವಧಿ ಶಿಕ್ಷಾ ಬಂದಿಗಳ ಬಿಡುಗಡೆ:

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ (Karnataka Prisons) ಇರುವ 46 ಜೀವಾವಧಿ ಶಿಕ್ಷಾ ಬಂದಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೊಳಿಸಲು (Early Release of Prisoners) ನಿರ್ಧರಿಸಲಾಗಿದೆ. ಇದರ ಜೊತೆಗೆ, ಕೇಂದ್ರ ಗೃಹ ಮಂತ್ರಾಲಯದ ಸಹಮತದೊಂದಿಗೆ ಭಾರತ ಸಂವಿಧಾನದ ಅನುಚ್ಛೇದ 161 ರಡಿ ಮೂವರು ಬಂದಿಗಳನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

4) ಫೈರ್ ಸೆಸ್ ವಿಧಿಸಲು ಕಾನೂನು:

ಕರ್ನಾಟಕ ಅಗ್ನಿಶಾಮಕ (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ ನೀಡಿದೆ.

ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮೊದಲು Karnataka Fire Force Act, 1964ರ ಕಲಂ 15ಕ್ಕೆ ತಿದ್ದುಪಡಿ ತಂದು ನಂತರ ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1ರ ದರದಲ್ಲಿ ಫೈರ್ ಸೆಸ್ ಅನ್ನು ವಿಧಿಸಲು ಕ್ರಮವಹಿಸಲು ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

5) ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ:

ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ವಿಧೇಯಕ 2025 (Gig Workers Social Security Bill) ಅನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ (Karnataka Legislative Session) ಮಂಡಿಸಲು ಸಂಪುಟ ಒಪ್ಪಿಗೆ ನೀಡಿದೆ. ಈ ವಿಧೇಯಕವು ಗಿಗ್ ಕಾರ್ಮಿಕರಿಗೆ (Gig Economy Workers) ಸಾಮಾಜಿಕ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.

6) ರಂಗಶಂಕರ ಸಂಸ್ಥೆಗೆ ಗುತ್ತಿಗೆ ವಿಸ್ತರಣೆ:

ಬೆಂಗಳೂರಿನ ಜೆ.ಪಿ.ನಗರದಲ್ಲಿ ರಂಗಶಂಕರ (Rangashankara Theatre) ಸಂಸ್ಥೆಗೆ ಒಡಂಬಡಿಕೆಯ ಮೌಲ್ಯದ ಶೇ.25% ಮತ್ತು ಜಿಎಸ್‌ಟಿಯನ್ನು (GST Payment) ಪಾವತಿಸಿ ಗುತ್ತಿಗೆಯನ್ನು ನವೀಕರಿಸಲು ಸಂಪುಟ ಒಪ್ಪಿಗೆ ನೀಡಿದೆ. ಇದು ರಂಗಕಲೆಯ (Performing Arts) ಅಭಿವೃದ್ಧಿಗೆ ಸಹಾಯಕವಾಗಲಿದೆ.

7) ಅಲ್ಲೀಪುರ ಗ್ರಾಮ ಪಂಚಾಯಿತಿ ಈಗ ಪಟ್ಟಣ ಪಂಚಾಯಿತಿ:

ಚಿಕ್ಕಬಳ್ಳಾಪುರ ಜಿಲ್ಲೆಯ ಅಲ್ಲೀಪುರ ಗ್ರಾಮ ಪಂಚಾಯಿತಿಯನ್ನು (Allipur Town Panchayat) ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ಇದಕ್ಕೆ ಕರ್ನಾಟಕ ಪೌರಸಭೆಗಳ ಕಾಯ್ದೆ 1964 (Karnataka Municipalities Act) ರಡಿ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

Savdatti Yellamma Development

ಇದನ್ನೂ ಓದಿ: Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದ 3 ಸಾವು!

8) ರಾಜ್ಯದ ವಿವಿಧ ಕೆರೆ ಅಭಿವೃದ್ದಿಗೆ ಅನುದಾನ:

ಸೂಳೆಕೆರೆ ಆಧುನೀಕರಣ: ಮಂಡ್ಯ ಜಿಲ್ಲೆಯ ಮದ್ದೂರಿನ ಸೂಳೆಕೆರೆಯ ಜೀರ್ಣೋದ್ಧಾರಕ್ಕೆ (Sulekere Modernization) 34 ಕೋಟಿ ರೂ. ಮಂಜೂರು.

ಮದಗ-ಮಾಸೂರು ಕೆರೆ: ಹಾವೇರಿಯ ರಟ್ಟಿಹಳ್ಳಿಯ ಮದಗ-ಮಾಸೂರು ಕೆರೆಯ ನಾಲೆಗಳ ಆಧುನೀಕರಣಕ್ಕೆ (Madag-Masur Tank Modernization) 52.20 ಕೋಟಿ ರೂ.

ನಂಜಾಪುರ ಏತ ನೀರಾವರಿ: ಮೈಸೂರಿನ ಟಿ.ನರಸೀಪುರದ ಯೋಜನೆಗೆ (Nanjapura Irrigation Project) 20 ಕೋಟಿ ರೂ.

ಸೂಳೆಕೆರೆ ಉತ್ತರ ನಾಲೆ: ಮದ್ದೂರಿನ ಉತ್ತರ ನಾಲೆಗಳಿಗೆ (Sulekere North Canal) 47.75 ಕೋಟಿ ರೂ.

18 ಕೆರೆಗಳಿಗೆ ನೀರು ತುಂಬಿಕೆ: ಚನ್ನರಾಯಪಟ್ಟಣದ 18 ಕೆರೆಗಳಿಗೆ (Tank Filling Project) 74 ಕೋಟಿ ರೂ.

9) ಬಾಲ್ಯವಿವಾಹ ಮತ್ತು ನಿಶ್ಚಿತಾರ್ಥ ಶಿಕ್ಷಾರ್ಹ:

ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ 2025 (Child Marriage Prohibition Bill) ಕ್ಕೆ ಅನುಮೋದನೆ ನೀಡಲಾಗಿದೆ. ಇದರಿಂದ ಬಾಲ್ಯವಿವಾಹ ಮತ್ತು ನಿಶ್ಚಿತಾರ್ಥವನ್ನು (Child Engagement) ಕಾನೂನುಬಾಹಿರವಾಗಿ ಘೋಷಿಸಲಾಗಿದೆ.

ಇದನ್ನೂ ಓದಿ: Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

10) 215.37 ಕೋಟಿ ವೆಚ್ಚದಲ್ಲಿ ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿ:

ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾಸ್ಕಿ ಯೋಜನೆಯಡಿ 100 ಕೋಟಿ, ಪ್ರಸಾದ ಯೋಜನೆಯಡಿ 18 ಕೋಟಿ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ನಿಧಿಯಿಂದ 97 ಕೋಟಿ ಪ್ರವಾಸೋದ್ಯಮ ಇಲಾಖೆಯ 15 ಕೋಟಿ ಸೇರಿದಂತೆ 215.37 ಕೋಟಿ ರೂ.ಗಳ ಮೊತ್ತದಲ್ಲಿ ಕೆಟಿಟಿಪಿ ಕಾಯ್ದೆಯಡಿ ಅನುಷ್ಠಾನ ಗೊಳಿಸಲು ಡಿಪಿಎಆರ್ ಗೆ ಸರ್ಕಾರದ ಅನುಮೋದನೆ ನೀಡಲು ಪ್ರವಾಸೋದ್ಯಮ ಇಲಾಖೆಯ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಜಿಲ್ಲಾಧಿಕಾರಿಗಳನ್ನು ಅನುಷ್ಠಾನ ಅಧಿಕಾರಿಯನ್ನಾಗಿ ನೇಮಿಸಲು ಹಾಗೂ ಯೋಜನೆ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

11) ಡಿ.ಕುನ್ಹಾ ವರದಿ ಅಂಗೀಕಾರ: ಖಾಸಗಿ ಸಂಸ್ಥೆಗಳ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ:

ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶ್ರೀ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಲಾಗಿತ್ತು. ಕುನ್ಹಾ ಅವರ ವರದಿಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿದೆ. ಚರ್ಚೆಯ ನಂತರ ಜೂನ್ 4, 2025ರ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಲ್ಲಿಸಿಕೆಯಾದ ವರದಿಯನ್ನು ಅಂಗೀಕರಿಸಲಾಗಿದೆ.

ವರದಿಯಲ್ಲಿ ಉಲ್ಲೇಖಿಸಿರುವ ಖಾಸಗಿ ಸಂಸ್ಥೆಗಳ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕಿರುವ ಕ್ರಮಗಳನ್ನು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಚಿವ ಸಂಪುಟ ನಿರ್ಧರಿಸಿತು.

ಆರ್.ಸಿ.ಬಿ, ಡಿ.ಎನ್. ಎ ಎಂಟರ್ ಟೈನ್ ಮೆಂಟ್ ನೆಟ್ ವಕ್ರ್ಸ್ ಪ್ರೈವೇಟ್ ಲಿಮಿಟೆಡ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಕೆ ಎಸ್. ಸಿ ಎ ಅಧ್ಯಕ್ಷ ರಘುರಾಮ್ ಭಟ್, ಕೆ ಎಸ್ ಸಿ ಎ ಮಾಜಿ ಅಧ್ಯಕ್ಷ, ಎ ಶಂಕರ್, ಕೆ ಎಸ್ ಸಿ ಎ ಮಾಜಿ ಖಜಾಂಚಿ ಜಯರಾಮ್ ಇ.ಎಸ್, ರಾಜೇಶ್ ಮೆನನ್, ಉಪಾಧ್ಯಕ್ಷರು, ಆರ್.ಸಿ.ಬಿ.ಎಸ್.ಪಿ ಎಲ್, ಡಾ: ವೆಂಕಟವರ್ಧನ್, ಎಂ.ಡಿ. ಡಿಎನ್‍ಎ ಎಂಟರ್ಟೈನ್ಮೆಂಟ್ ನೆಟ್ ವಕ್ರ್ಸ್ ಇವರುಗಳ ಮೇಲೆ ಕ್ರಮ ಜರುಗಿಸಲಾಗುವುದು.

ಇದನ್ನೂ ಓದಿ: E-swathu Status-ನಿಮ್ಮ ಮನೆ ದಾಖಲೆಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ!

ಸ್ಟೇಸ್ ಟೆಕ್‍ನಲ್ಲಿ ಉತ್ಕøಷ್ಟತಾ ಕೇಂದ್ರವನ್ನು (Centre of Excellence) ಮುಂದಿನ 5 ವರ್ಷಗಳ ಅವಧಿಯಲ್ಲಿ ರೂ. 10.00 ಕೋಟಿಗಳ ಮೊತ್ತದಲ್ಲಿ ಬೆಂಗಳೂರಿನಲ್ಲಿ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಅಭಿವೃದ್ಧಿಗೊಳ್ಳುತ್ತಿರುವ ವಲಯಗಳಲ್ಲಿ ನಾವೀನ್ಯತೆ ಹಾಗೂ ಉದ್ಯಮಶೀಲತೆ ಹೆಚ್ಚಿಸಲು LEAP (Local Economy Accelerator Program) ಯೋಜನೆಯನ್ನು ಮುಂದಿನ 5 ವರ್ಷಗಳ ಅವಧಿಯಲ್ಲಿ ರೂ.1000.00 ಕೋಟಿಗಳ ಮೊತ್ತದಲ್ಲಿ (ಪ್ರತಿ ವರ್ಷ ರೂ.200.00 ಕೋಟಿಗಳು) ಅನುಷ್ಥಾನನಗೊಳಿಸಲು ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ.

ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯ ಆವರಣದಲ್ಲಿ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕವನ್ನು 50.00 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: Property Registration-ಇ-ಸ್ವತ್ತು ಯೋಜನೆ: ಸರಕಾರದಿಂದ ಸಕ್ರಮ ಆಸ್ತಿಗೆ ಡಿಜಿಟಲ್ ದಾಖಲೆ! ಇಂದೇ ಅರ್ಜಿ ಸಲ್ಲಿಸಿ!

ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನು ಸ್ಥಾಪಿಸಲು ಹೆಚ್ಚುವರಿಯಾಗಿ ಅವಶ್ಯವಿರುವ ವೈದ್ಯಕೀಯ ಉಪಕರಣ, ಪೀಠೋಪಕರಣ ಹಾಗೂ ಇತರೆ ಬಾಬುಗಳ ಒಟ್ಟಾರೆ ರೂ.62.00 ಕೋಟಿಗಳ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ.

ಬೆಳಗಾವಿ ಜಿಲ್ಲೆ, ಸವದತ್ತಿ ತಾಲ್ಲೂಕಿನಲ್ಲಿ ಅಸ್ತಿತ್ವದಲ್ಲಿರುವ ಯರಗಟ್ಟಿ ಏತನೀರಾವರಿ ಯೋಜನೆಯ ನವೀಕರಣ ಕಾಮಗಾರಿಗೆ 25 ಕೋಟಿ ರೂಗಳಲ್ಲಿ ಕೈಗೊಳ್ಳಲು ಹಾಗೂ ಇದೇ ತಾಲ್ಲೂಕಿನಲ್ಲಿ ರೇಣುಕಾ ಏತ ನೀರಾವರಿಯ ನವೀಕರಣ ಕಾಮಗಾರಿಗೆ 20 ಕೋಟಿ ರೂಗಳಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಾಲಗುಂದ ಗ್ರಾಮದ ಹತ್ತಿರ ತುಂಗಭದ್ರಾ ನದಿಯಿಂದ ನೀರನ್ನೆತ್ತಿ ತುಂಗಭದ್ರಾ ಎಡದಂಡೆ ಕಾಲುವೆಯ ಆ-32 ಮತ್ತು ಆ-36 ವ್ಯಾಪ್ತಿಯ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಸಾಲಗುಂದ ಏತ ನೀರಾವರಿ ಯೋಜನೆಯನ್ನು ರೂ.178.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇದನ್ನೂ ಓದಿ: Aadhaar Update-ಮಕ್ಕಳ ಆಧಾರ್ ಅಪ್‌ಡೇಟ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ!

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ಕುಡಿಯುವ ನೀರಿಗಾಗಿ ಹಂಚಿಕೆಯಾಗಿರುವ 0.512 ಟಿಎಂಸಿ ನೀರನ್ನು ಸಂಗ್ರಹಣಾ ಸ್ಥಳಕ್ಕೆ ಪೂರೈಸಲು ಅರಸೀಕೆರೆ ತಾಲ್ಲೂಕಿನ 10 ಕೆರೆಗಳಿಗೆ ನೀರು ತುಂಬಿಸುವ ರೂ..148.80 ಕೋಟಿಗಳ ಮೊತ್ತದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: