Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

September 9, 2025 | Siddesh
Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!
Share Now:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಪಂಚ ಗ್ಯಾರಂಟಿ ಯೋಜನೆಯ(Guarantee Yojana) ಪ್ರಗತಿ ಪರಿಶೀಲನೆ ಸಭೆಯಲ್ಲಿ ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಐದು ಗ್ಯಾರಂಟಿ ಯೋಜನೆಯನ್ನು ಅನುಷ್ಠಾನ ಮಾಡಲು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರ ಅಧ್ಯಕ್ಷತೆಯಲ್ಲಿ ದಿನಾಂಕ 08 ಸೆಪ್ಟೆಂಬರ್ 2025 ರಂದು ಬೆಂಗಳೂರಿನಲ್ಲಿ ನಡೆದ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ(Guarantee Schemes) ಪ್ರಗತಿ ಪರಿಶೀಲನೆ ಸಭೆಯಲ್ಲಿ ವಿವಿಧ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಹಣವನ್ನು ಸರಿಯಾದ ಸಮಯಕ್ಕೆ ನಿಗದಿತ ಸಮಯದ ಒಳಗಾಗಿ ಫಲಾನುಭವಿಗಳಿಗೆ ಬಿಡುಗಡೆ ಮಾಡಲು ಸೂಚನೆ ಮಾಡಿಲಾಗಿದೆ.

ಇದನ್ನೂ ಓದಿ: Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

ಇದಲ್ಲದೇ ದೊಡ್ಡ ಸಂಖ್ಯೆಯ ಅನರ್ಹ ಅರ್ಜಿದಾರರು ಗ್ಯಾರಂಟಿ ಯೋಜನೆಯ(Gruhalakshmi) ಪ್ರಯೋಜನವನ್ನು ಪಡೆಯುತ್ತಿದ್ದು ಇದಕ್ಕಾಗಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಇಂತಹ ಅರ್ಜಿಗಳನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.

Karnataka Guarantee Scheme-ಗ್ಯಾರಂಟಿ ಯೋಜನೆಯ ಅಂಕಿ-ಅಂಶ ವಿವರ:

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಳೆದ 2 ವರ್ಷದಿಂದ ಐದು ಗ್ಯಾರಂಟಿ ಯೋಜನೆಯನ್ನು ಅನುಷ್ಠಾನ ಮಾಡಿಕೊಂಡು ಬರುತ್ತಿದ್ದು ಇದಕ್ಕಾಗಿ ಸರಕಾರ ವೆಚ್ಚ ಮಾಡಿರುವ ಅನುದಾನದ ಅಂಕಿ-ಅಂಶದ ಮಾಹಿತಿ ಈ ಕೆಳಗಿನಂತಿದೆ:

  • ಐದು ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ.
  • ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ,
  • ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ,
  • ಯುವನಿಧಿ ಯೋಜನೆಯಡಿ 2.55 ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ,
  • ಶಕ್ತಿ ಯೋಜನೆಯಡಿ ₹544 ಕೋಟಿ ಉಚಿತ ಟಿಕೆಟ್ ಪ್ರಯಾಣಿಕರಿಗೆ ರೂ.13,903 ಕೋಟಿ ವೆಚ್ಚ ಭರಿಸಲಾಗಿದೆ.
  • ಅನ್ನಭಾಗ್ಯ ಯೋಜನೆಯಡಿ 72.02 ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ.

ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಬಳಿಕ ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಅಧಿಕೃತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Reliance Scholarships-2025: ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಸಂಸ್ಥೆಯಿಂದ ₹ 2.0 ಲಕ್ಷ ಸ್ಕಾಲರ್‌ಶಿಪ್‌!

Guarantee Scheme

ಇದನ್ನೂ ಓದಿ: District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

Guarantee Scheme Meeting Details-ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯ ಮುಖ್ಯಾಂಶಗಳು ಹೀಗಿವೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಯೋಜನೆಯ ಅನುಷ್ಥಾನದ ಕುರಿತು ತೆಗೆದುಕೊಂಡಿರುವ ಪ್ರಮುಖ ನಿರ್ಣಯಗಳ ಪಟ್ಟಿ ಹೀಗಿದೆ:

ಮರಣ ಹೊಂದುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು.

ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ: Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

ಐಟಿ ರಿಟರ್ನ್ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು.

ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ವಹಿಸಬೇಕು.

ಗ್ಯಾರಂಟಿ ಯೋಜನೆಗಳ ಲಾಭ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು.

Guarantee Scheme Website-ಐದು ಗ್ಯಾರಂಟಿ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್- Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: