Karnataka Jati Ganati-ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

September 27, 2025 | Siddesh
Karnataka Jati Ganati-ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
Share Now:

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳಿಂದ ವಿಡಿಯೋ ಕಾನ್ಪರೆನ್ಸ್ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಇದನ್ನೂ ಓದಿ: Infosys Scholarship-ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃμÁ್ಣದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿಗಳು, ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣ:

ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‍ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳಿಸಲು ಸೂಚಿಸಿದರು.

ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಇದನ್ನೂ ಓದಿ: Ration Card Cancellation-ರೇಶನ್ ಕಾರ್ಡ ರದ್ದಾಗಳು ಪ್ರಮುಖ ಕಾರಣಗಳ ಪಟ್ಟಿ ಬಿಡುಗಡೆ!

Karnataka Jati Ganati

ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ:

ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರುವಂತೆ ಸೂಚಿಸಿದರು.

ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಬೇಕು ಎಂದರು.

ಇದನ್ನೂ ಓದಿ: Horticulture Mela 2025-ತೋಟಗಾರಿಕೆ ಮೇಳ ಬಾಗಲಕೋಟ 2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಸಂಪೂರ್ಣ ಮಾಹಿತಿ!

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭ:

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‍ಲೈನ್ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Business Loan-ಶ್ರಮಶಕ್ತಿ ಸಾಲ ಯೋಜನೆ ಸಣ್ಣ ವ್ಯಾಪಾರವನ್ನು ಆರಂಭಿಸಲು ರೂ 50,000/- ಸಹಾಯಧನ!

ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸೂಚಿಸಿದರು.

ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ ಸಹ ನೀಡಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಸುರೇಶ್, ಮಧು ಬಂಗಾರಪ್ಪ, ಭೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಎ.ಎಸ್. ಪೆÇನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: