- Advertisment -
HomeGovt SchemesKashi Yatra Subsidy-ನೀವೇನಾದರೂ ಕಾಶಿಯಾತ್ರೆ ಪ್ಲ್ಯಾನ್ ಮಾಡಿದ್ದೀರಾ? ಈ ಯೋಜನೆಯಡಿ ಸಿಗುತ್ತದೆ ಸಹಾಯಧನ!

Kashi Yatra Subsidy-ನೀವೇನಾದರೂ ಕಾಶಿಯಾತ್ರೆ ಪ್ಲ್ಯಾನ್ ಮಾಡಿದ್ದೀರಾ? ಈ ಯೋಜನೆಯಡಿ ಸಿಗುತ್ತದೆ ಸಹಾಯಧನ!

ಕರ್ನಾಟಕ ರಾಜ್ಯ ಸರಕಾರದಡಿ ಬರುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಯ ದತ್ತಿಗಳ ಇಲಾಖೆಯಿಂದ ಕಾಶಿಯಾತ್ರೆ(Kashi Yatra Subsidy) ಅನ್ನು ಮಾಡಲು ಆಸಕ್ತಿ ಹೊಂದಿರುವ ಅರ್ಹ ಯಾತ್ರಿಗಳಿಗೆ ಸಬ್ಸಿಡಿಯನ್ನು(Kashi Yatra Subsidy) ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ.

ಅರ್ಥಿಕವಾಗಿ ಹಿಂದುಳಿದ ಯಾತ್ರಿಗಳು ಹಾಗೂ ಎಲ್ಲಾ ಬಗ್ಗೆಯ ಯಾತ್ರಿಗಳು ಧರ್ಮಾದಯ ದತ್ತಿ ಇಲಾಖೆ ಕಾಶಿಯಾತ್ರೆ ಸಹಾಯಧನ ಯೋಜನೆಯಡಿ(Kashi Yatra Subsidy Application) ಅರ್ಜಿ ಸಲ್ಲಿಸಿ ₹5,000 ರೂ ಅರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಅರ್ಜಿ ಸಲ್ಲಿಕೆ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಕಾಶಿಯಾತ್ರೆಗೆ(Kashi Temple) ಸಹಾಯಧನ ಯೋಜನೆಯ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಎಷ್ಟು ಸಬ್ಸಿಡಿ ಪಡೆಯಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಬೇಕು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಇತ್ಯಾದಿ ಸಂಪೂರ್ಣ ವಿವರ ಇಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Land Registration-ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌ ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ!

Last Date For Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಜನವರಿ 2025 ಸಂಜೆ 04:00 ಗಂಟೆಯೊಳಗೆ ಅರ್ಜಿಯನ್ನು ಹಾಕಬೇಕು.

Kashi Yatra Subsidy Amount-ಈ ಯೋಜನೆಯಡಿ ಎಷ್ಟು ಸಹಾಯಧನ ನೀಡಲಾಗುತ್ತದೆ?

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಯ ದತ್ತಿಗಳ ಇಲಾಖೆಯಿಂದ ಈ ಯೋಜನೆಯಡಿ ಕಾಶಿ ಯಾತ್ರೆ ಕೈಗೊಳ್ಳುವ ಅರ್ಹ ಯಾತ್ರಿಗಳಿಗೆ ₹5,000/-ರೂ ಸಹಾಯಧನ ನೀಡಲಾಗುತ್ತದೆ.

ಇದನ್ನೂ ಓದಿ: Free Hostel-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Kashi Yatra Subsidy

Who can Apply-ಯಾರೆಲ್ಲಾ ಅರ್ಜಿ ಸಲ್ಲಿಬಹುದು?

1) ಯಾತ್ರಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರತಕ್ಕದ್ದು.

2) 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

3) ದಿನಾಂಕ: 15 ಪೆಬ್ರವರಿ 2024ರಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳು ಕಾಶಿ ಕ್ಷೇತ್ರಕ್ಕೆ ಭೇಟಿ ನೀಡಿದ ಬಗ್ಗೆ ದೇವಾಲಯದ ಮುಂಬದಿಯಲ್ಲಿ ಯಾತ್ರಾರ್ಥಿಗಳ ಛಾಯಾಚಿತ್ರ, ಪೂಜಾ ರಸೀದಿ ಇತ್ಯಾದಿ ದಾಖಲಾತಿಗಳನ್ನು ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡಬೇಕು ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: 2nd PUC Exam 2025- 2nd ಪಿಯುಸಿ ಮಾದರಿ ಪ್ರಶ್ನೆಪತ್ರಿಕೆ! ಇಲ್ಲಿದೆ ಡೌನ್ಲೋಡ್ ಲಿಂಕ್!

How to Apply For Kashi Yatra Scheme-ಎಲ್ಲಿ ಅರ್ಜಿ ಸಲ್ಲಿಸಬೇಕು?

ಯಾತ್ರಾರ್ಥಿಗಳು ಈ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ನಿಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಲು ಅವಕಾಶವಿದ್ದು ನೇರವಾಗಿ ಸೇವಾ ಸಿಂಧು ಪೋರ್ಟಲ್ ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

Online Application Link-ಅರ್ಜಿ ಸಲ್ಲಿಸಲು ಆನ್ಲೈನ್ ಲಿಂಕ್- Apply Now

Kashi Yatra

ಇದನ್ನೂ ಓದಿ: Crop Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯುವುದು ಭಾರೀ ಸುಲಭ!

Required Documents For Kashi Yatra Subsidy-ಅರ್ಜಿ ಸಲ್ಲಿಸಲು ದಾಖಲಾತಿಗಳು:

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
2) ವಿಳಾಸದ ಪುರಾವೆಗೆ ಗುರುತಿನ ಚೀಟಿ
3) ಬ್ಯಾಂಕ್ ಪಾಸ್ ಬುಕ್
4) 50/- ರೂ ಬಾಂಡ್ ಪೇಪರ್
5) ಪೋಟೋ

ಇದನ್ನೂ ಓದಿ: Crop Insurance amount-ಈ ಜಿಲ್ಲೆಯ ರೈತರ ಖಾತೆಗೆ ₹2,333 ಲಕ್ಷ ಮುಂಗಾರು ಬೆಳೆ ವಿಮೆ ಜಮಾ!

ಅರ್ಜಿದಾರರಿಗೆ ಇಲಾಖೆಯ ಪ್ರಮುಖ ಸೂಚನೆಗಳು:

1) ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ. ಈ ಬಗ್ಗೆ ಯಾತ್ರಾರ್ಥಿಗಳು 50/- ಗಳ ಛಾಪಾ ಕಾಗದ (E-Stamp Paper)ಈ ಹಿಂದೆ ಸಹಾಯಧನವನ್ನು ಪಡೆದಿಲ್ಲವೆಂದು ಸ್ವದೃಢೀಕರಿಸಿ ನೋಟರಿ ಮೊಹರು ಮತ್ತು ಸಹಿಯೊಂದಿಗೆ ದೃಢೀಕರಣವನ್ನು ಅಪ್ಲೋಡ್ ಮಾಡಬೇಕು.

2) ಯಾತ್ರಾರ್ಥಿಗಳು ಕಾಶಿಗೆ ಪ್ರಯಾಣಿಸಿದ ಕುರಿತು ಟಿಕೆಟ್ ಅಪ್ಲೋಡ್ ಮಾಡಬೇಕು.

3) ಕಾಶಿಯಾತ್ರ ಕೈಗೊಂಡಿರುವುದನ್ನು ದೃಢೀಕರಿಸುವ ಸಲುವಾಗಿ ಕಾಕಿ ವಿಶ್ವನಾಥಸ್ವಾಮಿ ದೇವಾಲಯದ ಮುಂಬದಿಯಲ್ಲಿ ಯಾತ್ರಾರ್ಥಿಗಳ ಛಾಯಚಿತ್ರ (Photo)/GPS location ತೆಗೆದು ಅಪ್ಲೋಡ್ ಮಾಡಬೇಕು.

ಇದನ್ನೂ ಓದಿ: Land Purchase Records- ಆಸ್ತಿ ಮಾರಾಟ ಮತ್ತು ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೇ ಪರೀಶಿಲಿಸಿ!

4) ಯಾತ್ರಾರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಅವರ ಬ್ಯಾಂಕ್ ಖಾತೆಯು ಚಾಲ್ತಿಯಲ್ಲಿರಬೇಕು. ಸದರಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed NPCI Active (ಸರ್ಕಾರದ ಮಾರ್ಗಸೂಚಿಯನ್ವಯ ಆಯಾಯಾ ವರ್ಷದ ಅನುದಾನವನ್ನು ಆಯಾಯಾ ವರ್ಷ ಪಾವತಿಸಲು ಅವಕಾಶವಿರುವುದರಿಂದ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ Seed NPCI Active ಅನ್ನು ನಿಗದಿತ ದಿನಾಂಕದೊಳಗೆ ಮಾಡಿಸಿದ್ದಲ್ಲಿ ತಾವೇ ನೇರ ಜವಾಬ್ದಾರರು) ಅವಧಿ ಮುಗಿದ ನಂತರ ಸಹಾಯಧನ ಕೋರಿ ಬರುವ ಅರ್ಹರನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

For More Details-ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ವೆಬ್ಸೈಟ್- CLICK HERE
ದೂರವಾಣಿ ಸಂಖ್ಯೆ : 080-26709689/080-26706775/080-26702271
ಫ್ಯಾಕ್ಸ್ ಸಂಖ್ಯೆ : 080-26700801
ಇಮೇಲ್ : endowmentcommissioner@gmail.com
ತಾಂತ್ರಿಕ ಪ್ರಶ್ನೆಗಳಿಗೆ ಸಂಪರ್ಕಿಸಿ : 080-26700801

- Advertisment -
LATEST ARTICLES

Related Articles

- Advertisment -

Most Popular

- Advertisment -