- Advertisment -
HomeAgricultureKMF Milk Incentive- ರಾಜ್ಯ ಸರಕಾರದಿಂದ ರೈತರಿಗೆ 649 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!...

KMF Milk Incentive- ರಾಜ್ಯ ಸರಕಾರದಿಂದ ರೈತರಿಗೆ 649 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

Last updated on December 7th, 2024 at 12:01 am

ರಾಜ್ಯ ಸರಕಾರದಿಂದ ಹಾಲು ಉತ್ಪಾದಕ ರೈತರಿಗೆ ನೇರ ನಗದು ವರ್ಗಾವಣೆ(DBT) ಮೂಲಕ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು(Milk Incentive) ಬಿಡುಗಡೆ ಮಾಡಲಾಗಿದೆ.

ಕೃಷಿಯ ಜೊತೆಗೆ ಪಶುಸಂಗೋಪನೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಆರ್ಥಿಕವಾಗಿ ನೆರವು ನೀಡಲು ರಾಜ್ಯ ಸರಕಾರದಿಂದ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ರೂ 5 (halina prothsana dhana)ನೀಡಲಾಗುತ್ತದೆ. ಇದರಂತೆ ರೈತರು ತಾವು ಪ್ರತಿ ತಿಂಗಳು ಕೆ ಎಂ ಎಪ್ ಡೈರಿಗಳಿಗೆ ಹಾಕುವ ಹಾಲಿಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ಜಮಾ ಮಾಡಲಾಗುತ್ತದೆ.

ಇದನ್ನೂ ಓದಿ: Land surveyors notification-750 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಲು ಇನ್ನು 7 ದಿನ ಮಾತ್ರ ಅವಕಾಶ!

ರಾಜ್ಯ ಸರಕಾರದಿಂದ ರೂ 649.76 ಕೋಟಿ ಹಾಲಿನ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ತಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಅಗಿದಿಯೋ? ಇಲ್ಲವೋ? ಎಂದು ಹೇಗೆ ಚೆಕ್ ಮಾಡಿಕೊಳ್ಳಬಹುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ.

Milk Incentive details-ಒಂದು ಲೀಟರ್ ಹಾಲಿಗೆ ಎಷ್ಟು ಪ್ರೋತ್ಸಾಹ ಧನ ನೀಡಲಾಗುತ್ತದೆ?

ಕರ್ನಾಟಕ ಹಾಲು ಮಹಾಮಂಡಳಿ(KMF)ಗೆ ಹಳ್ಳಿ ಮಟ್ಟದಲ್ಲಿ ಸ್ಥಾಪನೆ ಮಾಡಿರುವ ಡೈರಿಗಳ ಮೂಲಕ ಸರಬರಾಜು ಮಾಡುವ ಪ್ರತಿ ಲೀಟರ್ ಹಾಲಿಗೆ ರೂ 5 ರಂತೆ ಒಟ್ಟು ಪೂರೈಕೆ ಮಾಡಿರುವ ಹಾಲಿಗೆ ಲೆಕ್ಕ ಹಾಕಿ ರೈತರ ಬ್ಯಾಂಕ್ ಅಕೌಂಟ್ ಗೆ ಪ್ರೋತ್ಸಾಹ ಧನ ಜಮಾ ಮಾಡಲಾಗುತ್ತದೆ.

Milk Incentive status check-ಪ್ರೋತ್ಸಾಹ ಧನ ಜಮಾ ಅಗಿರುವುದನ್ನು ಚೆಕ್ ಮಾಡುವ ವಿಧಾನ:

ರೈತರು ತಮ್ಮ ಬ್ಯಾಂಕ್ ಖಾತೆಗೆ ಹಾಲಿನ ಪ್ರೋತ್ಸಾಹ ಧನ ಜಮಾ ಅಗಿರುವುದನ್ನು ಎರಡು ವಿಧಾನವನ್ನು ಅನುಸರಿಸಿ ಚೆಕ್ ಮಾಡಿಕೊಳ್ಳಬಹುದು ಈ ಕೆಳಗೆ ಎರಡು ವಿಧಾನದ ಮಾಹಿತಿಯನ್ನು ವಿವರಿಸಲಾಗಿದೆ.

ಇದನ್ನೂ ಓದಿ: Bele hani parihara-ಹಿಂಗಾರು ಹಂಗಾಮಿನ ₹120 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ!

kmf

ವಿಧಾನ-1: ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಚೆಕ್ ಮಾಡಬಹುದು:

ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ರೈತರು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಕೆಳಗಿನ ಹಂತಗಳನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಹಾಲಿನ ಪ್ರೋತ್ಸಾಹ ಧನದ ಜಮಾ ವಿವರವನ್ನು ಪಡೆಯಬಹುದು.

Step-1: ಪ್ರಥಮದಲ್ಲಿ Milk Incentive status check ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು.

Step-2: ಇದಾದ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ ಸಂಖ್ಯೆ ಅನ್ನು ಹಾಕಿ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಪಡೆದು ಅದನ್ನು ನಮೂದಿಸಿ ಈ ಅಪ್ಲಿಕೇಶನ್ ಅನ್ನು ತೆರೆಯಲು ನಾಲ್ಕು ಅಂಕಿಯ ಲಾಗಿನ್ ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಅದನ್ನು ನಮೂದಿಸಿ ಲಾಗಿನ್ ಅಗಬೇಕು.

ಇದನ್ನೂ ಓದಿ: Solar Pumpset subsidy- ಶೇ 80 ರಷ್ಟು ಸಹಾಯಧನದಲ್ಲಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Step-3: ಲಾಗಿನ್ ಅದ ಬಳಿಕ ಇಲ್ಲಿ ಮುಖಪುಟದಲ್ಲಿ ಕಾಣುವ “ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ” ಬಟನ್ ಮೇಲೆ ಕ್ಲಿಕ್ ಮಾಡಿ ಯಾವ ಯಾವ ತಿಂಗಳು ಎಷ್ಟು? ಹಣ ಜಮಾ ಅಗಿದೆ ಎನ್ನುವ ಮಾಹಿತಿಯನ್ನು ಪಡೆಯಬಹುದು.

milk-incentive

ಇಲ್ಲಿ ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಅಗಿದೆ? ಎಷ್ಟು ಹಣ ಜಮಾ ಅಗಿದೆ? ಹಣ ಜಮಾ ಅದ ದಿನಾಂಕ, ಯುಟಿಅರ್ ಸಂಖ್ಯೆ ಎಲ್ಲಾ ಮಾಹಿತಿ ತೋರಿಸುತ್ತದೆ.

ಇದನ್ನೂ ಓದಿ: Bele vime-71,117 ಸಾವಿರ ರೈತ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

ವಿಧಾನ-2: ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ ಹಣ ಜಮಾ ವಿವರ ಪಡೆಯಬಹುದು:

ರಾಜ್ಯ ಸರಕಾರದ ಅಧಿಕೃತ ಕ್ಷೀರಸಿರಿ ಹಾಲಿನ ಪ್ರೋತ್ಸಾಹ ಧನ ನಿರ್ವಹಣಾ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಹಣ ಜಮಾ ವಿವರವನ್ನು ಪಡೆಯಬಹುದು.

Step-1: Milk Incentive status ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು

Step-2: ನಂತರ ನಿಮ್ಮ ನಂಬರ್ ಅನ್ನು ನಮೂದಿಸಿ ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಜಮಾ ಅಗಿರುವ ಹಾಲಿನ ಪ್ರೋತ್ಸಾಹ ಧನ ಸಂಪೂರ್ಣ ವಿವರ ತೋರಿಸುತ್ತದೆ.

- Advertisment -
LATEST ARTICLES

Related Articles

- Advertisment -

Most Popular

- Advertisment -