Kotak Kanya Scholarship-ಪದವೀದರ ವಿದ್ಯಾರ್ಥಿಗಳಿಗೆ 1.5 ಲಕ್ಷ ವಿದ್ಯಾರ್ಥಿವೇತನ!ಇಲ್ಲಿದೆ ಸಂಪೂರ್ಣ ಮಾಹಿತಿ!

July 27, 2026 | Siddesh
Kotak Kanya Scholarship-ಪದವೀದರ ವಿದ್ಯಾರ್ಥಿಗಳಿಗೆ 1.5 ಲಕ್ಷ ವಿದ್ಯಾರ್ಥಿವೇತನ!ಇಲ್ಲಿದೆ ಸಂಪೂರ್ಣ ಮಾಹಿತಿ!
Share Now:

2026-2027 ನೇ ಸಾಲಿನ ಕೋಟಕ್ ಕನ್ಯಾ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಹಿಂದುಳಿದ ವಿದ್ಯಾರ್ಥಿನಿಯರ ಮುಂದಿನ ಉನ್ನತ ಶಿಕ್ಷಣಕ್ಕಾಗಿ ಕೋಟಕ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ 1.5 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನವು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಮತ್ತು ಪ್ರತಿಷ್ಠಿತ ವೃತ್ತಿಪರ ಪದವಿ ಕೋರ್ಸ್‌ಗಳಲ್ಲಿ ಸೇರಲು ಬಯಸುವ ಅರ್ಹ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದ್ದು ಈ ವಿದ್ಯಾರ್ಥಿವೇತನವನ್ನು ಪಡೆದು ಶಿಕ್ಷಣವನ್ನು ಮುಂದುವರಿಸಲು ಸಹಾಯಕಾರಿಯಾಗಿದೆ.

ಇದನ್ನೂ ಓದಿ: Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ಪ್ರಸ್ತುತ ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ವಿದ್ಯಾರ್ಥಿಗಳು ಅರ್ಹರು? ವಿದ್ಯಾರ್ಥಿವೇತನವನ್ನು ಪಡೆಯಲು ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಯಾವೆಲ್ಲ ಪ್ರಯೋಜನವನ್ನು ಪಡೆಯಬಹುದು? ಅಂತಿಮ ದಿನಾಂಕ ಯಾವುದು? ಅರ್ಜಿ ಸಲ್ಲಿಸುವ ಹಂತಗಳಾವುವು? ಇನ್ನೂ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Scholorship Amount-ಈ ಕಾರ್ಯಕ್ರಮದ ಅಡಿಯಲ್ಲಿ ಎಷ್ಟು ಸಹಾಯಧನವನ್ನು ಪಡೆಯಲಾಗುತ್ತದೆ?

ಕೋಟಕ್ ಕನ್ಯಾ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಅವರ ವೃತ್ತಿಪರ ಪದವಿ ಕೋರ್ಸ್/ಪದವಿ ಪೂರ್ಣಗೊಳ್ಳುವವರೆಗೆ ವರ್ಷಕ್ಕೆ 1.5 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

Last Date To Apply-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಆಗಸ್ಟ್ 2026

ಇದನ್ನೂ ಓದಿ: Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

Eligibility Critiria-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಅರ್ಜಿದಾರ‍ ವಿದ್ಯಾರ್ಥಿನಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಕನಿಷ್ಠ 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ಮೀರಿರಬಾರದು.

2026-27ನೇ ಶೈಕ್ಷಣಿಕ ವರ್ಷದಲ್ಲಿ NIRF/NAAC ನಂತಹ ವೃತ್ತಿಪರ ಪದವಿ ಪದವಿಗಳಿಗೆ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ, ಉದಾಹರಣೆಗೆ ISER, IISC (ಬೆಂಗಳೂರು) ನಲ್ಲಿ ಎಂಜಿನಿಯರಿಂಗ್, MBBS, ಇಂಟಿಗ್ರೇಟೆಡ್ LLB (5 ವರ್ಷಗಳು), ಇಂಟಿಗ್ರೇಟೆಡ್ BS-MS/BS-ಸಂಶೋಧನೆ ಅಥವಾ ಇತರ ವೃತ್ತಿಪರ ಕೋರ್ಸ್‌ಗಳಲ್ಲಿ (ವಿನ್ಯಾಸ, ವಾಸ್ತುಶಿಲ್ಪ, ಇತ್ಯಾದಿ) ಮೊದಲ ವರ್ಷದ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿನಿಯರು.

ಕೋಟಕ್ ಮಹೀಂದ್ರಾ ಗ್ರೂಪ್, ಕೋಟಕ್ ಎಜುಕೇಶನ್ ಫೌಂಡೇಶನ್ ಮತ್ತು ಬಡ್ಡಿ4ಸ್ಟುಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Manipal Health Card-ಮಣಿಪಾಲ ಆರೋಗ್ಯ ಕಾರ್ಡ್-2026 ನೋಂದಣಿ ಆರಂಭ ಆಗಸ್ಟ್ 31ರವರೆಗೆ ಅವಕಾಶ!

Documents Required-ಅರ್ಜಿ ಸಲ್ಲಿಸಲು ದಾಖಲಾತಿಗಳಾವುವು?

ವಿದ್ಯಾರ್ಥಿನಿಯ ಆಧಾರ್ ಕಾರ್ಡ
12ನೇ ತರಗತಿ ಪರೀಕ್ಷೆಯ ಅಂಕಪಟ್ಟಿ
ಆದಾಯ ಪ್ರಮಾಣ ಪತ್ರ
ಕಾಲೇಜು ಸೀಟು ಹಂಚಿಕೆ ದಾಖಲೆ
ಬ್ಯಾಂಕ್ ಪಾಸ್‌ಬುಕ್
ಫೋಟೋ

ಇದನ್ನೂ ಓದಿ: FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

kotak scholorship

What Are The Steps-ಅರ್ಜಿ ಸಲ್ಲಿಸುವ ವಿಧಾನಗಳಾವುವು?

ಕೋಟಕ್ ಕನ್ಯಾ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಆಸಕ್ತಿ ಇರುವ ಅರ್ಹ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "Kotak Kanya Scholarship" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Harvester Hub Scheme-ಕೃಷಿ ಇಲಾಖೆಯಿಂದ ಹಾರ್ವೆಸ್ಟರ್ ಖರೀದಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Step-2: ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: