kotak kanya Scholorship-ಕೋಟಕ್ ಮಹೀಂದ್ರಾ ಗ್ರೂಪ್ ಯೋಜನೆಯಡಿ 1.5 ಲಕ್ಷ ವಿದ್ಯಾರ್ಥಿವೇತನ!

September 12, 2026 | Siddesh
kotak kanya Scholorship-ಕೋಟಕ್ ಮಹೀಂದ್ರಾ ಗ್ರೂಪ್ ಯೋಜನೆಯಡಿ 1.5 ಲಕ್ಷ ವಿದ್ಯಾರ್ಥಿವೇತನ!
Share Now:

2026-2027 ನೇ ಸಾಲಿನ ಮೊದಲ ವರ್ಷದ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೋಟಕ್ ಮಹೀಂದ್ರಾ ಗ್ರೂಪ್‌ನ ಸಹಯೋಗದೊಂದಿಗೆ ಕೋಟಕ್ ಕನ್ಯಾ ವಿದ್ಯಾರ್ಥಿವೇತನದ ಅಡಿಯಲ್ಲಿ 1.5 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬಡ ಹಾಗೂ ಮಧ್ಯಮ ವರ್ಗದ ಕುಟುಂಬದಲ್ಲಿರುವ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ನೆರವನ್ನು ನೀಡಲು ಕೋಟಕ್ ಮಹೀಂದ್ರಾ ಗ್ರೂಪ್ ಈ ವಿದ್ಯಾರ್ಥಿವೇತನವನ್ನು ಆಯೋಜಿಸಲಾಗಿದ್ದು, ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಿದೆ.

ಇದನ್ನೂ ಓದಿ: SBI Platinum Scholarship-ಪದವಿಪೂರ್ವ ವಿದ್ಯಾರ್ಥಿಗಳಿಗೆ SBI ಪ್ಲಾಟಿನಂ ಜುಬಿಲಿ ವತಿಯಿಂದ 75,000 ವಿದ್ಯಾರ್ಥಿವೇತನ!

ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಯಾವ ದಾಖಲಾತಿಗಳನ್ನು ಲಗತ್ತಿಸಬೇಕು? ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಬಹುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Last date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2026

Schlolorship Amount-ಕೋಟಕ್ ಮಹೀಂದ್ರಾ ಗ್ರೂಪ್ ಯೋಜನೆಯಡಿ ಎಷ್ಟು ಸಹಾಯಧನವನ್ನು ನೀಡಲಾಗುತ್ತದೆ?

ಈ ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ಪ್ರತಿಯೊಬ್ಬ ವಿದ್ವಾಂಸರಿಗೆ ಅವರ ವೃತ್ತಿಪರ ಪದವಿ ಕೋರ್ಸ್/ಪದವಿ ಪೂರ್ಣಗೊಳ್ಳುವವರೆಗೆ ವರ್ಷಕ್ಕೆ 1.5 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Mahindra EmpowerHer Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ!

Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card
  • ಹಿಂದಿನ ವರ್ಷದ ಅಂಕಪಟ್ಟಿ/12 Marks Card
  • ಶುಲ್ಕ ರಚನೆ/Fee Receipt
  • ವಿದ್ಯಾರ್ಥಿಯ ಪ್ರಮಾಣ ಪತ್ರ
  • ಕಾಲೇಜು ಪ್ರವೇಶ ಪರೀಕ್ಷೆಯ ಅಂಕಪಟ್ಟಿ?Entrance Exam Markscard
  • ಪೋಷಕರ ಆದಾಯ ಪ್ರಮಾಣ ಪತ್ರ/Income Certificate
  • ಬ್ಯಾಂಕ್ ಪಾಸ್ ಪುಸ್ತಕ/Bank Passbook
  • ಪಾಸ್ ಪೋರ್ಟ್ ಭಾವಚಿತ್ರ/Photo copy

ಇದನ್ನೂ ಓದಿ: JK Tyre Scholarship-JK ಟೈರ್ ಶಿಕ್ಷಾ ಸಾರಥಿ ಯೋಜನೆಯಡಿ 25,000 ವಿದ್ಯಾರ್ಥಿವೇತನ! ಇನ್ನೂ 5 ದಿನ ಬಾಕಿ!

Eligibility Critiria-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಅರ್ಜಿದಾರ ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಕನಿಷ್ಠ 75% ಅಂಕಗಳನ್ನು ಗಳಿಸಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ಮೀರಿರಬಾರದು.

2026-27ನೇ ಶೈಕ್ಷಣಿಕ ವರ್ಷದಲ್ಲಿ NIRF/NAAC ನಂತಹ ವೃತ್ತಿಪರ ಪದವಿ ಪದವಿಗಳಿಗೆ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ, ಉದಾಹರಣೆಗೆ ISER, IISC (ಬೆಂಗಳೂರು) ನಲ್ಲಿ ಎಂಜಿನಿಯರಿಂಗ್, MBBS, ಇಂಟಿಗ್ರೇಟೆಡ್ LLB (5 ವರ್ಷಗಳು), ಇಂಟಿಗ್ರೇಟೆಡ್ BS-MS/BS-ಸಂಶೋಧನೆ ಅಥವಾ ಇತರ ವೃತ್ತಿಪರ ಕೋರ್ಸ್‌ಗಳಲ್ಲಿ (ವಿನ್ಯಾಸ, ವಾಸ್ತುಶಿಲ್ಪ, ಇತ್ಯಾದಿ) ಮೊದಲ ವರ್ಷದ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿನಿಯರು.

ಕೋಟಕ್ ಮಹೀಂದ್ರಾ ಗ್ರೂಪ್, ಕೋಟಕ್ ಎಜುಕೇಶನ್ ಫೌಂಡೇಶನ್ ಮತ್ತು ಬಡ್ಡಿ4ಸ್ಟುಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Tata Capital Scholorship-ಟಾಟಾ ಕ್ಯಾಪಿಟಲ್ ವತಿಯಿಂದ ಡಿಪ್ಲೊಮಾ, ಐಟಿಐ 18,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

kotak kanya scholorship

ಇದನ್ನೂ ಓದಿ: Women SHG Subsidy-ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

Online Application Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ?

Step-1: ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "Kotak Kanya Scholarship" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Subsidy Schemes 2026: ಕರ್ನಾಟಕ ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

For More Information-ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Read Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: