Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

July 4, 2025 | Siddesh
Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!
Share Now:

ಕೋಟಕ್ ಕನ್ಯಾ ವಿದ್ಯಾರ್ಥಿವೇತನವು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು(Kotak Mahindra Group) ಮತ್ತು ಕೋಟಕ್ ಶಿಕ್ಷಣ ಪ್ರತಿಷ್ಠಾನದ(Kotak Education Foundation) ಸಹಯೋಗದಲ್ಲಿ ಸಿ.ಎಸ್.ಆರ್ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

"ಕೋಟಕ್ ಕನ್ಯಾ ವಿದ್ಯಾರ್ಥಿವೇತನ 2025"(Kotak Kanya Scholarship 2025) ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು www.buddy4study.com ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು ಈ ವಿದ್ಯಾರ್ಥಿವೇತನಕ್ಕ ಅರ್ಜಿ ಸಲ್ಲಿಸುವುದರ ಕುರಿತು ಅಗತ್ಯ ಮಾಹಿತಿಯ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Home Loan Schems-PMAY 2.0 ಯೋಜನೆಯಡಿ ₹ 2.50 ಲಕ್ಷ ಸಹಾಯಧನಕ್ಕೆ ಅರ್ಜಿ! 

ಪ್ರಸ್ತುತ ಈ ಅಂಕಣದಲ್ಲಿ "ಕೋಟಕ್ ಕನ್ಯಾ ವಿದ್ಯಾರ್ಥಿವೇತನ 2025" ಕಾರ್ಯಕ್ರಮದಡಿ( Kotak Mahindra Company) ಯಾರಿಗೆಲ್ಲ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ದಾಖಲಾತಿಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿದಂತೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

Who Can Apply-ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅರ್ಹರು:

ವಿದ್ಯಾರ್ಥಿಯು ಭಾರತೀಯ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಕನಿಷ್ಠ 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಅಥವಾ ಸಮಾನವಾದ CGPA ಅನ್ನು ಗಳಿಸಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ INR 6,00,000 ಕ್ಕಿಂತ ಕಡಿಮೆ ಇರಬೇಕು.

ಇದನ್ನೂ ಓದಿ: Bele Vime Amount-2025: ಈ ಜಿಲ್ಲೆಯ ರೈತರ ಖಾತೆಗೆ 30 ಕೋಟಿ ಬೆಳೆ ವಿಮೆ ಬಿಡುಗಡೆ!

2025-26ನೇ ಶೈಕ್ಷಣಿಕ ವರ್ಷದಲ್ಲಿ NIRF/NAAC ನಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಪದವಿ ಪದವಿಗಳಾದ ಎಂಜಿನಿಯರಿಂಗ್, MBBS, ಇಂಟಿಗ್ರೇಟೆಡ್ LLB (5 ವರ್ಷಗಳು), ಇಂಟಿಗ್ರೇಟೆಡ್ BS-MS/BS-Research, ISER, IISC (ಬೆಂಗಳೂರು) ಅಥವಾ ಇತರ ವೃತ್ತಿಪರ ಕೋರ್ಸ್‌ಗಳಲ್ಲಿ (ವಿನ್ಯಾಸ, ವಾಸ್ತುಶಿಲ್ಪ, ಇತ್ಯಾದಿ) ಮಾನ್ಯತೆ ಪಡೆದ ಪದವಿ ಕಾರ್ಯಕ್ರಮಗಳ ಮೊದಲ ವರ್ಷಕ್ಕೆ ಪ್ರವೇಶ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿನಿಯರು.

ಕೋಟಕ್ ಮಹೀಂದ್ರಾ ಗ್ರೂಪ್, ಕೋಟಕ್ ಎಜುಕೇಶನ್ ಫೌಂಡೇಶನ್ ಮತ್ತು buddy4study ಉದ್ಯೋಗಿಗಳ ಮಕ್ಕಳು 2025-26ನೇ ಸಾಲಿನ ಕೋಟಕ್ ಕನ್ಯಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಲ್ಲ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Kotak Kanya Scholarship Eligibility Criteria-ಯಾರಿಗೆಲ್ಲ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ?

ಕೋಟಕ್ ಕನ್ಯಾ ವಿದ್ಯಾರ್ಥಿವೇತನ 2025 ರ ಅಡಿಯಲ್ಲಿ , 12 ನೇ ತರಗತಿಯಲ್ಲಿ ಉತ್ತೀರ್ಣರಾದ ಮತ್ತು ISER, IISC (ಬೆಂಗಳೂರು) ನಲ್ಲಿ ಎಂಜಿನಿಯರಿಂಗ್, MBBS, ಇಂಟಿಗ್ರೇಟೆಡ್ LLB (5 ವರ್ಷಗಳು), ಇಂಟಿಗ್ರೇಟೆಡ್ BS-MS/BS-ಸಂಶೋಧನೆ, ಅಥವಾ ಪ್ರತಿಷ್ಠಿತ ಸಂಸ್ಥೆಗಳಿಂದ (NAAC/NIRF ಮಾನ್ಯತೆ ಪಡೆದ) ಇತರ ವೃತ್ತಿಪರ ಕೋರ್ಸ್‌ಗಳನ್ನು (ವಿನ್ಯಾಸ, ವಾಸ್ತುಶಿಲ್ಪ, ಇತ್ಯಾದಿ) ಮುಂದುವರಿಸಲು ಬಯಸುವ ಹೆಣ್ಣು ಮಕ್ಕಳಿಗೆ ಪದವಿ (ಪದವಿ) ವರೆಗೆ ಅವರ ಶೈಕ್ಷಣಿಕ ವೆಚ್ಚವನ್ನು ಪಾವತಿಸಲು ವರ್ಷಕ್ಕೆ INR 1.5 ಲಕ್ಷ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Diploma Veterinary Admission-ಪಶುಸಂಗೋಪನೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

Kotak Kanya Scholarship Amount-ವಿದ್ಯಾರ್ಥಿವೇತನದ ಮೊತ್ತ ಎಷ್ಟು?

ಅರ್ಜಿ ಸಲ್ಲಿಸಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗೆ ಈ ಕಾರ್ಯಕ್ರಮದಡಿ ಒಂದು ವಾರ್ಷಿಕ ವರ್ಷಕ್ಕೆ ಶೈಕ್ಷಣಿಕ ವೆಚ್ಚವನ್ನು ಪಾವತಿಸಲು ವರ್ಷಕ್ಕೆ INR 1.5 ಲಕ್ಷ ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ.

ವಿದ್ಯಾರ್ಥಿವೇತನದ ಮೊತ್ತವನ್ನು ವಿದ್ಯಾರ್ಥಿಗಳು ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ, ಇಂಟರ್ನೆಟ್, ಸಾರಿಗೆ, ಲ್ಯಾಪ್‌ಟಾಪ್‌ಗಳು, ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳು ಸೇರಿದಂತೆ ಶೈಕ್ಷಣಿಕ ವೆಚ್ಚಗಳನ್ನು ಭರಿಸಲು ಬಳಸಿಕೊಳ್ಳಬೇಕು.

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಆಗಸ್ಟ್ 2025

ಇದನ್ನೂ ಓದಿ: Free Beautician Training-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

Required Documents For Kotak Kanya Scholarship-ಅರ್ಜಿ ಸಲ್ಲಿಸಲು ದಾಖಲೆಗಳು:

  • ವಿದ್ಯಾರ್ಥಿಯ ಆಧಾರ್/ಗುರುತಿನ ಚೀಟಿ/Aadhar
  • ವಿದ್ಯಾರ್ಥಿ ಪೋಟೋ/Photo
  • ಕಾಲೇಜು ಶುಲ್ಕ ಪಾವತಿ ವಿವರ/Fee structure
  • ಪ್ರಸ್ತುತ ಕಾಲೇಜು ಪ್ರವೇಶದ ಕುರಿತು ದೃಡೀಕರಣ ಪತ್ರ/College seat allocation document
  • 12ನೇ ತರಗತಿ ಅಂಕಪಟ್ಟಿ/Marksheet
  • ಕುಟುಂಬದ ಆದಾಯ ತೆರಿಗೆ ಪ್ರಮಾಣ ಪತ್ರ/Income proof of parents
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ/Bank passbook
  • ಮೊಬೈಲ್ ನಂಬರ್/Mobile Number
  • ಇ-ಮೇಲ್ ವಿಳಾಸ/mail id

ಇದನ್ನೂ ಓದಿ: Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

How To Apply For Kotak Kanya Scholarship-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಕೋಟಕ್ ಕನ್ಯಾ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ www.buddy4study.com ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

Step-1: ಮೊದಲಿಗೆ ಇಲ್ಲಿ ಕ್ಲಿಕ್ "Kotak Kanya Scholarship Application" ಮಾಡಿ ಅಧಿಕೃತ www.buddy4study.com ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Kotak Scholarships

Step-2: ತದನಂತರ ಇಲ್ಲಿ ಅಧಿಕೃತ ಪುಟ ಒಪನ್ ಅಗುತ್ತದೆ ಈ ಪೇಜ್ ನಲ್ಲಿ ಬಲಬದಿಯಲ್ಲಿ ಕಾಣುವ "Apply Now" ಬಟನ್ ಮೇಲೆ ಕ್ಲಿಕ್ ಮಾಡಿ, ಮೊದಲ ಬಾರಿಗೆ ಈ ತಂತ್ರಾಂಶವನ್ನು ಭೇಟಿ ಮಾಡುತ್ತಿರುವ ವಿದ್ಯಾರ್ಥಿಗಳು “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ರಚಿಸಿಕೊಳ್ಳಬೇಕು ಬಳಿಕ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಅಗತ್ಯ ವಿವರವನ್ನು ಹಾಕಿ ಲಾಗಿನ್ ಅಗಬೇಕು.

Step-3: ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ಮಾಹಿತಿ ಮತ್ತು ಅವಶ್ಯಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

More Information Contact Details-ಹೆಚ್ಚಿನ ಮಾಹಿತಿಗಾಗಿ:

  • Helpline: 011-430-92248 (Ext: 262) (ಸೋಮವಾರದಿಂದ ಶುಕ್ರವಾರದವರೆಗೆ - 10:00AM to 06:00 PM)
  • Mali-kotakscholarship@buddy4study.co

WhatsApp Group Join Now
Telegram Group Join Now
Share Now: