Kotak Scholarships-ಮಹೀಂದ್ರಾ ಗ್ರೂಪ್ ಕಂಪನಿ ವತಿಯಿಂದ 1.5 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

October 27, 2025 | Siddesh
Kotak Scholarships-ಮಹೀಂದ್ರಾ ಗ್ರೂಪ್ ಕಂಪನಿ ವತಿಯಿಂದ 1.5 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
Share Now:

ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿ ಹಾಗೂ ಕೋಟಕ್ ಶಿಕ್ಷಣ ಪ್ರತಿಷ್ಠಾನದ ಸಹಯೋಗ ಇದು ಸಿಎಸ್ಆರ್(Kotak Scholarship) ಯೋಜನೆಯಾಗಿದ್ದು, ಇದರ ವತಿಯಿಂದ ಕೋಟಕ್ ಕನ್ಯಾ ವಿದ್ಯಾರ್ಥಿವೇತನದ ಅಡಿಯಲ್ಲಿ 1.5 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನವು ಸಮಾಜದ ಆರ್ಥಿಕವಾಗಿ ಹಿಂದುಳಿದ ವರ್ಗಗಳಲ್ಲಿ ಶಿಕ್ಷಣ ಮತ್ತು ಜೀವನೋಪಾಯವನ್ನು(Kotak Education Scholarship)ಉತ್ತೇಜಿಸುವ ಉದ್ದೇಶವಾಗಿದ್ದು, ಈ ವಿದ್ಯಾರ್ಥಿವೇತನವು ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾನ್ವಿತ ಹೆಣ್ಣು ಮಕ್ಕಳಿಗೆ 12 ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣದಲ್ಲಿ ಉನ್ನತ ಅಧ್ಯಯನ ಮಾಡಲು ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: Bank Loan Interest Subsidy-ಬ್ಯಾಂಕ್ ಸಾಲದ ಮೇಲೆ ಶೇ 3% ಬಡ್ಡಿ ಸಬ್ಸಿಡಿ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ!

ಪ್ರಸ್ತುತ ಇಂದಿನ ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಹೇಗೆ ಅರ್ಜಿಯನ್ನು ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಮಾನದಂಡಗಳನ್ನು ಪಾಲನೆ ಮಾಡಬೇಕು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಈ ಯೋಜನೆಯ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

Last Date To Apply-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್ 2025

Scholorship Amount-ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ?

ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಯ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ವರ್ಷಕ್ಕೆ ಶೈಕ್ಷಣಿಕ ವೆಚ್ಚವನ್ನು ಪಾವತಿಸಲು ವರ್ಷಕ್ಕೆ 1.5 ಲಕ್ಷ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Driving Licence Application-ಹೊಸ ಡ್ರೈವಿಂಗ್ ಲೈಸೆನ್ಸ್ ಮತ್ತು ತಿದ್ದುಪಡಿ ಮಾಡಿಸುವುದು ಇನ್ನು ಭಾರೀ ಸುಲಭ!

Who Can Apply This Scholorship-ಅರ್ಜಿ ಸಲ್ಲಿಸಲು ಯಾರ‍ೆಲ್ಲ ಅರ್ಹರು?

1) ಅರ್ಜಿದಾರ ವಿದ್ಯಾರ್ಥಿಯು ಭಾರತೀಯ ಖಾಯಂ ನಿವಾಸಿಯಾಗಿರಬೇಕು.

2) ವಿದ್ಯಾರ್ಥಿಯು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಕನಿಷ್ಠ 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು.

3) ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 6,00,000 ಮೀರಿರಬಾರದು.

4) 2025-26ನೇ ಶೈಕ್ಷಣಿಕ ವರ್ಷದಲ್ಲಿ NIRF/NAAC ನಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಪದವಿ ಪದವಿಗಳಾದ ಎಂಜಿನಿಯರಿಂಗ್, MBBS, ಇಂಟಿಗ್ರೇಟೆಡ್ LLB (5 ವರ್ಷಗಳು), ಇಂಟಿಗ್ರೇಟೆಡ್ BS-MS/BS-Research, ISER, IISC (ಬೆಂಗಳೂರು) ಅಥವಾ ಇತರ ವೃತ್ತಿಪರ ಕೋರ್ಸ್‌ಗಳಲ್ಲಿ (ವಿನ್ಯಾಸ, ವಾಸ್ತುಶಿಲ್ಪ, ಇತ್ಯಾದಿ) ಮಾನ್ಯತೆ ಪಡೆದ ಪದವಿ ಕಾರ್ಯಕ್ರಮಗಳ ಮೊದಲ ವರ್ಷಕ್ಕೆ ಪ್ರವೇಶ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿನಿಯರು.

5) ಕೋಟಕ್ ಮಹೀಂದ್ರಾ ಗ್ರೂಪ್, ಕೋಟಕ್ ಎಜುಕೇಶನ್ ಫೌಂಡೇಶನ್ ಮತ್ತು buddy4study ಉದ್ಯೋಗಿಗಳ ಮಕ್ಕಳು 2025-26ನೇ ಸಾಲಿನ ಕೋಟಕ್ ಕನ್ಯಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: Loreal India Scholarship-ಲೋರಿಯಲ್ ಇಂಡಿಯಾ ವತಿಯಿಂದ ವಿದ್ಯಾರ್ಥಿಗಳಿಗೆ ರೂ 62,500/- ಸ್ಕಾಲರ್‌ಶಿಪ್!

Required Documents For Scholarship-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card
  • ಕಾಲೇಜು ಶುಲ್ಕ ಪಾವತಿ ವಿವರ/Fee structure
  • 12ನೇ ತರಗತಿ ಅಂಕಪಟ್ಟಿ/12 Marksheet
  • ಆದಾಯ ಪ್ರಮಾಣ ಪತ್ರ/Income Certificate
  • ಪ್ರಸ್ತುತ ಕಾಲೇಜು ಪ್ರವೇಶ ಪತ್ರ/Current college admit card
  • ಬ್ಯಾಂಕ್ ಪಾಸ್ ಬುಕ್ ಪ್ರತಿ/Bank passbook
  • ಪೋಟೋ/Photo Copy
  • ಮೊಬೈಲ್ ನಂಬರ್/Mobile Number
  • ಇ-ಮೇಲ್ ವಿಳಾಸ/mail id

How To Apply For This Scholarship-ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

ಕೋಟಕ್ ಮಹೀಂದ್ರಾ ಗ್ರೂಪ್ ಯೋಜನೆಯ ಅಡಿಯಲ್ಲಿ ಕೋಟಕ್ ಕನ್ಯಾ ವಿದ್ಯಾರ್ಥಿವೇತನವನ್ನು ಪಡೆಯಲು ಆಸಕ್ತ ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: BPL Card Eligibility-ಬಿಪಿಎಲ್ ಕಾರ್ಡ ಅರ್ಹತೆ ಸಾಬೀತುಪಡಿಸಲು 45 ದಿನ ಗಡುವು!

kotak kanya scholorship

ಇದನ್ನೂ ಓದಿ: Dairy Shed Subsidy-ಹೈನುಗಾರಿಕೆ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ರೂ 57,000/- ಸಹಾಯಧನ!

Step-1: ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "Scholorship Application" ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ನಂತರ ಇಲ್ಲಿ ಅಧಿಕೃತ ಪುಟ ತೆರೆದುಕೊಳ್ಳುತ್ತದೆ. ಈ ಪೇಜ್ ನ ಬಲಬದಿಯಲ್ಲಿ ಕಾಣುವ "Apply Now" ಬಟನ್ ಮೇಲೆ ಕ್ಲಿಕ್ ಮಾಡಬೇಕು, ಬಳಿಕ ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿರುವ ವಿದ್ಯಾರ್ಥಿಗಳು “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ಸಿದ್ದ ಪಡಿಸಿಕೊಳ್ಳಬೇಕು. ನಂತರ “ಲಾಗಿನ್” ಬಟನ್ ಕ್ಲಿಕ್ ಮಾಡಿ ಲಾಗಿನ್ ಅಗತ್ಯ ವಿವರವನ್ನು ಹಾಕಿ Login ಆಗಬೇಕು.

Step-3: ತದನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ. ಇಲ್ಲಿ ಕೇಳುವ ಎಲ್ಲಾ ಅಗತ್ಯ ಮಾಹಿತಿ ಮತ್ತು ಅವಶ್ಯಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: E-Swathu-ಗ್ರಾಮೀಣ ಜನರಿಗೆ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ ಕೇವಲ 15 ದಿನದಲ್ಲಿ ಸಿಗಲಿದೆ ಇ-ಸ್ವತ್ತು!

More Information-ಹೆಚ್ಚಿನ ಸಂಪೂರ್ಣ ಮಾಹಿತಿಗಾಗಿ:

Helpline: 011-430-92248 (Ext: 262)

e mail [email protected]

Tags:
WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: