Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeAgriculturekrishi diploma- ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನ!

krishi diploma- ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನ!

2024-25ನೇ ಶೈಕ್ಷಣಿಕ ವರ್ಷಕ್ಕೆ ಡಿಪ್ಲೊಮಾ ಕೃಷಿ(krishi diploma) ಕೋರ್ಸ್‌ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ನಮೂನೆ ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಕಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‌ಗೆ ಪ್ರವೇಶ ಪಡೆಯಲು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: CISF Constable Jobs – ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,130 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ!

Diploma agriculture Eligibility-ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಅರ್ಹತೆಗಳು ಹೀಗಿವೆ:

1) ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು (ಪ.ಜಾ./ ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಟ ಶೇ 40 ಅಂಕಗಳೊಂದಿಗ ಉತ್ತೀರ್ಣರಾಗಿರಬೇಕು)

2) ದಿನಾಂಕ: 29-08-2024 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು.

3) ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.

ಇದನ್ನೂ ಓದಿ:  self employment subsidy-ಸ್ವ-ಉದ್ಯೋಗ ಆರಂಭಿಸಲು 30,000 ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

How to apply for Diploma agriculture admission- ಅರ್ಜಿ ಸಲ್ಲಿಕೆ ವಿಧಾನ:

ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್ ಸೈಟ್ : www.uahs.edu.in ನಲ್ಲಿ ದಿನಾಂಕ :31-07-2024 ರಿಂದ 29-08-2024 ರವರೆಗೆ ಡೌನ್‌ಲೋಡ್ ಮಾಡಬಹುದು.

ಈ ರೀತಿ ವೆಬ್‌ಸೈಟ್ ಮುಖಾಂತರ ಪಡೆದು ಭರ್ತಿಮಾಡಿದ ಅರ್ಜಿಗಳನ್ನು, ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ: 29-08-2024 ರೊಳಗೆ ಕಳುಹಿಸಿಕೊಡಬೇಕು. ದಿನಾಂಕ: 29-08-2024 ರ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

Application fee- ಅರ್ಜಿ ಶುಲ್ಕ:

ಸಾಮಾನ್ಯ ವರ್ಗದವರಿಗೆ ರೂ. 500/- ಮತ್ತು ಪ.ಜಾ./ಪ.ಪಂ./ಪ್ರವರ್ಗ-1 ರವರಿಗೆ ರೂ. 250/- ಆಗಿದ್ದು. ರಾಷ್ಟ್ರೀಕೃತ ಬ್ಯಾಂಕ್‌ಗಳ (Nationalised Bank) Comptroller, KSNUAHS, Shivamogga-577 412 ಅಗತ್ಯ ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು

ಕುಲಸಚಿವರು, ಕಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಅವರಣ 577412 ಇಲ್ಲಿಗೆ ದಿನಾಂಕ:29 ಆಗಸ್ಟ್ 2024 (ಸಂಜೆ 04:00 ಗಂಟೆ) ಒಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು.

ದಿನಾಂಕ : 29 ಆಗಸ್ಟ್ 2024 ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Mahila nigama yojana-ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Krishi diploma selection process- ಕೋರ್ಸ್ ಗೆ ಪ್ರವೇಶ ಮತ್ತು ಅಭ್ಯರ್ಥಿ ಆಯ್ಕೆ ವಿಧಾನ:

ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯನ್ನು ಅಳಪಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್ ಸೈಟ್ ಮುಖಾಂತರ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

Documents for application- ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:

1) ಅಭ್ಯರ್ಥಿಯ ಪೋಟೊ.

2) ಆಧಾರ್ ಕಾರ್ಡ ಪ್ರತಿ.

3) SSLC ಅಂಕಪಟ್ಟಿ.
4) ಗ್ರಾಮೀಣ ಮತ್ತು ಕನ್ನಡ ವ್ಯಾಸಂಗ ಪ್ರಮಾಣ ಪತ್ರ.

5) ವ್ಯವಸಾಯಗಾರರ ದೃಡೀಕರಣ ಪ್ರಮಾಣ ಪತ್ರ(ರೈತರ ಮಕ್ಕಳ ಕೋಟಾದಡಿ ಸೀಟ್ ಪಡೆಯಲು ಮಾತ್ರ).

6) ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

7) ಅಸಲು ಡಿ.ಡಿಯನ್ನು ಅರ್ಜಿಯ ಜೊತೆಗೆ ಲಗತ್ತಿಸಬೇಕು(Original DD).

ಅರ್ಜಿ ನಮೂನೆ ಮತ್ತು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಲಿಂಕ್: Download Now

ಕೃಷಿ ಡಿಪ್ಲೊಮಾ ಕೋರ್ಸಿನ ಮುಖ್ಯ ಉದ್ದೇಶ:

1) ಗ್ರಾಮೀಣ ಭಾಗದ ಯುವ ಜನತೆಗೆ ಕೃಷಿಯ ಬಗ್ಗೆ ಮಾಹಿತಿ, ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳ ಅಳವಡಿಕೆ.

2) ಗ್ರಾಮೀಣ ಯುವ ಜನರಿಗೆ ಪ್ರೋತ್ಸಾಹಿಸಲು ಮತ್ತು ವಿವಿಧ ಕೃಷಿ ವಿಷಯಗಳ ಬಗ್ಗೆ ತರಬೇತಿ ನೀಡಿ ಸ್ವ ಉದ್ಯೋಗ ಆರಂಭಿಸಲು ಪ್ರೋತ್ಸಾಹ ನೀಡಲಾಗುತ್ತದೆ.

3) ಡಿಪ್ಲೊಮಾ ಕೃಷಿಯಲ್ಲಿ ಪ್ರಾಯೋಗಿಕ ಅಭ್ಯಾಸಕ್ಕೆ ಹೆಚ್ಚು ಒತ್ತು ಕೊಟ್ಟು, ಗ್ರಾಮೀಣ ಕೃಷಿ ಕೆಲಸದ ಅನುಭವ ಪಡೆಯವುದು ಕೃಷಿ ಡಿಪ್ಲೊಮಾ ಕೋರ್ಸಿನ ಮುಖ್ಯ ಉದ್ದೇಶವಾಗಿದೆ.

ಡಿಪ್ಲೊಮಾ ಕಾಲೇಜ್ ವಿಳಾಸ ಮತ್ತು ಲಭ್ಯ ಸೀಟುಗಳು ವಿವರ:

ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ-576213

ದೂರವಾಣಿ ಸಂಖ್ಯೆ: 08202560411, 9480838208

ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್ಸೈಟ್: Click here

Most Popular

Latest Articles

- Advertisment -

Related Articles