Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

December 25, 2025 | Siddesh
Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!
Share Now:

ಕರ್ನಾಟಕ ಸರ್ಕಾರವು 2025-2026 ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಕೃಷಿ ಹೊಂಡ(Farm Pond Subsidy amount) ನಿರ್ಮಾಣ ಮಾಡಲು ಶೇ 90% ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬಹುತೇಕ ರೈತರಿಗೆ ಮಳೆಯನ್ನೇ ಆಧಾರಿತವನ್ನಾಗಿ ಅವಲಂಭಿಸಿರುವ ಕೃಷಿಯಲ್ಲಿ(Krishi Honda) ನೀರಿನ ಕೊರತೆಯು ಹೆಚ್ಚಾಗುತ್ತಿದ್ದು ಈ ಸಮಸ್ಯೆಗೆ ಶಾಶ್ವತವಾಗಿ ಪರಿಹಾರವನ್ನು ನೀಡಲು ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ.

ಇದನ್ನೂ ಓದಿ: Sewing Machine Training-ಮಹಿಳೆಯರಿಗೆ ಗುಡ್ ನ್ಯೂಸ್! 31 ದಿನಗಳ ಉಚಿತ ಹೊಲಿಗೆ ಯಂತ್ರ ತರಬೇತಿ!

ಈ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡವನ್ನು(Krishi Bhagya Yojana) ನಿರ್ಮಾಣ ಮಾಡಿ ನೀರನ್ನು ಶೇಖರಣೆ ಮಾಡಿ ಬೆಳೆಗಳಿಗೆ ಅವಶ್ಯಕ ಸಂಧರ್ಭಗಳಲ್ಲಿ ಉಪಯೋಗಿಸಿಕೊಂಡು ಅವರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಹಾಗೆಯೇ ಬರಗಾಲದ ಸಂದರ್ಭದಲ್ಲಿ ಬೆಳೆ ನಷ್ಟವನ್ನು ಕಡಿಮೆ ಮಾಡಿ ರೈತರ ಆದಾಯವನ್ನು ಹೆಚ್ಚಿಸುವುದೇ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಪ್ರಸ್ತುತ ಈ ಲೇಖನದಲ್ಲಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳನ್ನು ನೀಡಬೇಕು? ಈ ಯೋಜನೆಯಡಿ ಎಷ್ಟು ಸಹಾಯಧನವನ್ನು ನೀಡಲಾಗುತ್ತದೆ? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಇನ್ನಿತರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

Subsidy Amount-ಈ ಯೋಜನೆಯ ಅಡಿಯಲ್ಲಿ ಎಷ್ಟು ಸಹಾಯಧನವನ್ನು ಪಡೆಯಬಹುದು?

ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಆಸಕ್ತಿ ಇರುವ ಅರ್ಹ ಫಲಾನುಭವಿಗಳಿಗೆ ಕೃಷಿ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ಪಂಗಡದ ರೈತರಿಗೆ ಶೇ 90 ರಷ್ಟು, ಹಾಗೆಯೇ ಇತರ ವರ್ಗದ ರೈತರಿಗೆ ಶೇ 80 ರಷ್ಟು ಸಹಾಯಧನವನ್ನು ನೀಡಲಾಗುತ್ತದೆ.

ಹಾಗೆಯೇ ಕೃಷಿ ಹೊಂಡ ನಿರ್ಮಾಣ ಮಾಡಿದ ನಂತರ ನೀರು ಬೇಗನೆ ಇಂಗಿ ಹೋಗದಂತೆ ಹೊಂಡಕ್ಕೆ ಪಾಲಿಥೀನ್ ಹೊದಿಕೆ, ಹೊಂಡದಿಂದ ನೀರನ್ನು ಜಮೀನಿಗೆ ಪೂರೈಕೆ ಮಾಡಲು ಡೀಸಲ್ ಪಂಪ್ ಸೆಟ್, ಲಘು ನೀರಾವರಿ ಘಟಕ ಮತ್ತು ಕೃಷಿ ಹೊಂಡಕ್ಕೆ ತಂತಿ ಬೇಲಿಯನ್ನು ಹಾಕಿಕೊಳ್ಳಲು ಸಹ ಸಬ್ಸಿಡಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

Where To Apply- ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು?

ಕೃಷಿ ಹೊಂಡ ಅಗತ್ಯವಿರುವ ಆಸಕ್ತ ರೈತರು ನಿಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ (RSK) ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅವಶ್ಯಕ ದಾಖಲಾತಿಗಳನ್ನು ಸಿದ್ದ ಪಡಿಸಿಕೊಂಡು ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಗಮನಿಸಿ: ಮೊದಲು ಬಂದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

Who Can Apply For Subsidy-ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು?

ಅರ್ಜಿದಾರ ರೈತರ ಹೆಸರಿನಲ್ಲಿ ಕೃಷಿ ಜಮೀನನ್ನು ಹೊಂದಿರಬೇಕು.

ಅರ್ಜಿದಾರ ರೈತರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಈ ಯೋಜನೆಯಡಿ ಹಿಂದಿನ ವರ್ಷದಲ್ಲಿ ಸಹಾಯಧನವನ್ನು ಪಡೆದುಕೊಂಡಿರಬಾರದು.

ಸಣ್ಣ ಮತ್ತು ಅತೀ ಸಣ್ಣ ರೈತರ ವರ್ಗಕ್ಕೆ ಸೇರಿದವರಾಗಿರಬೇಕು.

ಇದನ್ನೂ ಓದಿ: Parivartan Scholarship-ಪರಿವರ್ತನ್ ಯೋಜನೆಯಡಿ ಪದವಿ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

ಇದನ್ನೂ ಓದಿ: Veterinary Subsidy Schemes-ಪಶುಪಾಲನಾ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಸಬ್ಸಿಡಿ ಯೋಜನೆಗಳಾವುವು?

What are the Documents Required-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

  • ರೈತರ ಆಧಾರ್ ಕಾರ್ಡ/Aadhar Card
  • ಪಹಣಿ/RTC
  • ಜಾತಿ ಪ್ರಮಾಣ ಪತ್ರ/Caste Certificate
  • ಆದಾಯ ಪ್ರಮಾಣ ಪತ್ರ/Income Certificate
  • ರೇಶನ್ ಕಾರ್ಡ/Ration Card
  • ಬ್ಯಾಂಕ್ ಪಾಸ್ ಬುಕ್/Bank Passbook
  • ಪೋಟೋ/Photocopy
  • ಮೊಬೈಲ್ ನಂಬರ್/Mobile Number

ಇದನ್ನೂ ಓದಿ: PM Surya Ghar Scheme-PM ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್! ಕೂಡಲೇ ಅರ್ಜಿ ಸಲ್ಲಿಸಿ!

For More Information-ಈ ಯೋಜನೆಯ ಬಗ್ಗೆ ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೃಷಿ ಇಲಾಖೆಯ ವೆಬ್ಸೈಟ್ ಅನ್ನು ಭೇಟಿ ಮಾಡಿ-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: