HomeNew postsKrishi mela dharwad-2024: ಧಾರವಾಡ ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ಮಾಹಿತಿ!

Krishi mela dharwad-2024: ಧಾರವಾಡ ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ಮಾಹಿತಿ!

ಧಾರವಾಡ ಕೃಷಿ ಮೇಳ-2024ಕ್ಕೆ ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗಿದ್ದು ಈ ಬಾರಿಯ ಕೃಷಿ ಮೇಳವನ್ನು(Krishi mela dharwad-2024) ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ ವಿಶ್ವವಿದ್ಯಾಲಯದಿಂದ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಲೇಖನದಲ್ಲಿ ಕೃಷಿ ಮೇಳವನ್ನು ಯಾವ ದಿನಾಂಕದಂದು ಏರ್ಪಡಿಸಲಾಗುತ್ತಿದೆ ಮತ್ತು ಬಾರಿಯ ವಿಶೇಷತೆಗಳೇನು? ಕೃಷಿ ಮೇಳದಲ್ಲಿ ಮಳಿಗೆಗಳನ್ನು ಬುಕ್ ಮಾಡಲು ಸಂಪರ್ಕಿಸಬೇಕಾದ ವಿಳಾಸದ ವಿವರ ಇತ್ಯಾದಿ ಮೇಳದ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.

ಈ ವರ್ಷದ “ಕೃಷಿ ಮೇಳ  2024” ರೈತಜಾತ್ರೆ ಕೃಷಿಜಾತ್ರೆ ಯನ್ನು “ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು” ಎಂಬ ಘೋಷವಾಕ್ಯದೊಂದಿಗೆ ಸೆಪ್ಟೆಂಬರ್ 21 ರಿಂದ 24 ರವರೆಗೆ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Parihara amount-2024: ಮಳೆಯಿಂದ ಉಂಟಾದ ನಷ್ಟಕ್ಕೆ ರಾಜ್ಯ ಸರಕಾರದಿಂದ 775 ಕೋಟಿ ಅನುದಾನ!ಯಾರಿಗೆಲ್ಲ ಸಿಗಲಿದೆ ಪರಿಹಾರದ ಹಣ!

ಕಳೆದ ವರ್ಷ 2023ರಲ್ಲಿ ಮೇಳಕ್ಕೆ 10.5 ಲಕ್ಷ ರೈತರು ಮೇಳಕ್ಕೆ ಬಂದಿದ್ದು ಈ ವರ್ಷವು ಇಷ್ಟೇ ಪ್ರಮಾಣದ ರೈತರು ಸೇರುವು ನಿರೀಕ್ಷೆ ಇರುತ್ತದೆ.

Dharwad Krishimela booklet-ಕೃಷಿ ಮೇಳ-2024ರ ಕೈಪಿಡಿಗಳು:

Krishi mela dharwad-2024: ಈ ಬಾರಿಯ ಕೃಷಿ ಮೇಳದಲ್ಲಿ ಏನೆಲ್ಲ ಇರಲಿದೆ?

  • ವಿವಿಧ ಕೃಷಿ ಪರಿಕರಗಳ ಮಾರಾಟ ಮತ್ತು ಪ್ರದರ್ಶನ.
  • ನೀರಾವರಿ ಉಪಕರಣಗಳ ಪ್ರಾತ್ಯಕ್ಷಿಕೆ.
  • ಕೃಷಿ ಪರಿಕರ ಮತ್ತು ಯಂತ್ರೋಪಕರಣಗಳ ಪ್ರದರ್ಶನ
  • ಸಿರಿಧಾನ್ಯಗಳ ಮಹತ್ವ
  • ಕೃಷಿ-ತೋಟಗಾರಿಕೆ-ಅರಣ್ಯ ಸಮಗ್ರ ಪದ್ದತಿಗಳು.
  • ಹೈಟೆಕ್ ತೋಟಗಾರಿಕೆ.
  • ಪಶು ಸಂಗೋಪನೆ ಮತ್ತು ಮೀನುಗಾರಿಕೆ ತಂತ್ರಜ್ಞಾನಗಳು.
  • ಕೊಯ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ.
  • ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು.
  • ಶ್ರೇಷ್ಠ ಕೃಷಿಕರು ಮತ್ತು ಕೃಷಿಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ.
  • ರೈತ ವಿಜ್ಞಾನಿ ಸಂವಾದ.

ಮೇಳದಲ್ಲಿ ರೈತ ಮತ್ತು ಕೃಷಿ ವಿಜ್ಞಾನಿ ಹಾಗೂ ಪ್ರಕತಿಪರ ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ಸಹ ಆಯೋಜನೆ ಮಾಡಲಾಗಿರುತ್ತದೆ.

ಇದನ್ನೂ ಓದಿ: Southern Railway Recruitment-2024: ದಕ್ಷಿಣ ರೈಲ್ವೆ ಇಲಾಖೆಯಿಂದ 2438 ಹುದ್ದೆಗಳ ನೇಮಕಾತಿ!

for Stall booking- ಮಳಿಗೆಗಳನ್ನು ಬುಕ್ ಮಾಡಲು ಸಂಪರ್ಕ ವಿವರ:

ಮೇಳದಲ್ಲಿ ರೈತರು ಅಥವಾ ಇತರೆ ಕಂಪನಿಯರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅಥವಾ ಪ್ರದರ್ಶನ ಮಾಡಲು ಮುಂಚಿತವಾಗಿ ಮಳಿಗೆಗಳನ್ನು ಬುಕ್ ಮಾಡಲು ಈ ಮೊಬೈಲ್ 8277478507, 0836-2214497 ಸಂಖ್ಯೆಗಳಿಗೆ ಸಂಪರ್ಕಿಸಬಹುದು.

UASD website-ಇನ್ನು ಹೆಚ್ಚಿನ ಮಾಹಿತಿಗಾಗಿ:

ಕೃಷಿ ವಿ.ವಿಯ ಅಧಿಕೃತ ವೆಬ್ಸೈಟ್: click here

ಕೃಷಿ ವಿ.ವಿಯ ಅಧಿಕೃತ ಎಕ್ಸ್ ಖಾತೆಯನ್ನು ಭೇಟಿ ಮಾಡಲು ಇಲ್ಲಿ ಕ್ಲಿಕ್ ಮಾಡಿ: Click here

ಕೃಷಿ ಸಮುದಾಯ ಬಾನುಲಿ ಕೇಂದ್ರ,ದಾರವಾಡದ ಉಪಯುಕ್ತ ಕಾರ್ಯಕ್ರಮಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ: click here

Most Popular

Latest Articles

Related Articles