Kuri Sakanike Subsidy-ಕುರಿ ಸಾಕಾಣಿಕೆಗೆ ₹50,000 ಸಬ್ಸಿಡಿ ಪಡೆಯಲು ನಿಗಮಗಳಿಂದ ಅರ್ಜಿ ಆಹ್ವಾನ!

August 11, 2025 | Siddesh
Kuri Sakanike Subsidy-ಕುರಿ ಸಾಕಾಣಿಕೆಗೆ ₹50,000 ಸಬ್ಸಿಡಿ ಪಡೆಯಲು ನಿಗಮಗಳಿಂದ ಅರ್ಜಿ ಆಹ್ವಾನ!
Share Now:

2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ದಿಗಾಗಿ ಕಲ್ಯಾಣ ಯೋಜನೆಯಡಿ ಕುರಿ ಸಾಕಾಣಿಕೆ(Kuri Sakanike Loan) ಶೇ 50% ಸಬ್ಸಿಡಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇಂದಿನ ದಿನಗಳಲ್ಲಿ ಕೃಷಿಯ ಜೊತೆಗೆ ಉಪಕಸುಬುಗಳಾದ ಹೈನುಗಾರಿಕೆ ಮತ್ತು ಕುರಿ ಹಾಗೂ ಮೇಕೆ ಸಾಕಾಣಿಕೆಯನ್ನು(Kuri Sakanike Subsidy Application)ರೈತರು ಮಾಡಿಕೊಂಡರೆ ಮಾತ್ರ ಸುಸ್ಥಿರ ಆದಾಯವನ್ನು ಪಡೆಯಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಈ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Grama One-ಗ್ರಾಮ ಒನ್ ಕೇಂದ್ರವನ್ನು ಆರಂಭಿಸಲು ಅರ್ಜಿ ಆಹ್ವಾನ!

ಕುರಿ ಅಥವಾ ಮೇಕೆ ಸಾಕಾಣಿಕೆಗೆ ಸಬ್ಸಿಡಿಯನ್ನು(Sheep farming Subsidy) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ನಿಗಮಗಳಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳೇನು? ಅವಶ್ಯಕ ದಾಖಲಾತಿಗಳು ಯಾವುವು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಇದರ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ.

Last Date For Application-ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ- 10 ಸೆಪ್ಟೆಂಬರ್ 2025

Kuri Sakanike Subsidy Amount Details-ಸಬ್ಸಿಡಿ ವಿವರ ಹೀಗಿದೆ:

ಕುರಿ ಮತ್ತು ಮೇಕೆ ಸಾಕಾಣಿಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಆಯ್ಕೆಯಾದ ಫಲಾನುಭವಿಗಳಿಗೆ ಒಟ್ಟು ಘಟಕ ವೆಚ್ಚ ₹1,00 ಲಕ್ಷವನ್ನು ಒದಗಿಸಲಾಗುತ್ತದೆ. ಇದರಲ್ಲಿ ₹50,000 ಸಬ್ಸಿಡಿಯನ್ನು ನಿಗಮಗಳಿಂದ ಒದಗಿಸಲಾಗುತ್ತದೆ ಬಾಕಿ ಉಳಿದ ₹50,000 ಕ್ಕೆ ಶೇ 4% ಬಡ್ಡಿದರದಲ್ಲಿ ಬ್ಯಾಂಕ್ ಮೂಲಕ ಸಾಲವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Students Scholarship-1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Karnataka Nigama Mandali-ಯಾವೆಲ್ಲ ನಿಗಮಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ?

ಸಮಾಜ ಕಲ್ಯಾಅಣ ಇಲಾಖೆಯಡಿ ಬರುವ ಈ ಕೆಳಗಿನ ಪಟ್ಟಿಯಲ್ಲಿರುವ ನಿಗಮಗಳಿಂದ ವಿವಿಧ ಬಗ್ಗೆಯ ಸಬ್ಸಿಡಿ ಆಧಾರಿತ ಯೋಜನೆಗ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶವನ್ನು ಮಾಡಿಕೊಡಲಾಗಿದೆ.

  • ಅಂಬೇಡ್ಕರ್ ಅಭಿವೃದ್ಧಿ ನಿಗಮ.
  • ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ.
  • ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ.
  • ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ.
  • ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ.
  • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ.
  • ಕರ್ನಾಟಕ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ.

ಇದನ್ನೂ ಓದಿ: PM Surya Ghar Yojana-ನಿಮ್ಮ ಮನೆಗೆ ಉಚಿತ ವಿದ್ಯುತ್ ಬೇಕಾದರೆ ಈ ಕೂಡಲೇ ಅರ್ಜಿ ಸಲ್ಲಿಸಿ!

karnataka sc st nigama yojane

Sheep Farming Subsidy Eligibility-ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಮಾನದಂಡಗಳೇನು?

ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿದಾರರು ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳ ವರ್ಗಕ್ಕೆ ಸೇರಿದವರಾಗಿರಬೇಕು.

ಈ ಹಿಂದಿನ ವರ್ಷಗಳಲ್ಲಿ ಯೋಜನೆಯ ಪ್ರಯೋಜನವನ್ನು ಪಡೆದವರು ಮತ್ತ್ಮೊಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

How To Apply For Sheep farming Subsidy Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿಯನ್ನು ಸಲ್ಲಿಸಲು ಅರ್ಹರು ಕೆಳಗಿನ ಹಂತಗಳನ್ನು ಅನುಸರಿಸಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

Step-1: ಇಲ್ಲಿ ಕ್ಲಿಕ್ "Kuri Sakanike Subsidy Online Application" ಮಾಡಿ ಅಧಿಕೃತ ರಾಜ್ಯ ಸರಕಾರದ "ಅಂಬೇಡ್ಕರ್ ಅಭಿವೃದ್ಧಿ ನಿಗಮದ" ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: PUC Scholariship-ಪ್ರಥಮ ದರ್ಜೆಯಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ!

Step-2: ತದನಂತರ ಇಲ್ಲಿ ಲಭ್ಯವಿರುವ ಎಲ್ಲಾ ವಿವರವನ್ನು ಒಮ್ಮೆ ಗಮನಿಸಿ ಬಳಿಕ ಕೆಳಗೆ ಕಾಣುವ "ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ" ಎಂದು ಕಾಣುವ ಬಟನ್ ಮೇಲೆ ಕ್ಲಿಕ್ ಮಾಡಿ "Seva Sindhu" ವೆಬ್ಸೈಟ್ ಅನ್ನು ಪ್ರವೇಶ ಮಾಡಿ ನಂತರ ಇಲ್ಲಿ ನಿಮ್ಮ ಮೊಬೈಲ್ ನಂಬರ್ ಮತ್ತು OTP ಅನ್ನು ನಮೂದಿಸಿ ಕ್ಯಾಪ್ಚ್ ಕೋಡ್ ಹಾಕಿ "Submit" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

ಗಮನಿಸಿ: ಮೊದಲ ಬಾರಿಗೆ ಈ ಜಾಲತಾಣವನ್ನು ಪ್ರವೇಶ ಮಾಡುತ್ತಿರುವ ಅಭ್ಯರ್ಥಿಗಳು "Register Here" ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿಯನ್ನು ನೋಂದಣಿ ಮಾಡಿಕೊಳ್ಳಬೇಕು.

Step-3: ಲಾಗಿನ್ ಅದ ಬಳಿಕ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಅಗತ್ಯ ವಿವರವನ್ನು ಎಲ್ಲಾ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Ganga Kalyana-2025: ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Required Documents For Application-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು ಯಾವುವು?

ಅರ್ಹ ಅರ್ಜಿದಾರರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಡ್ದಾಯವಾಗಿ ಒದಗಿಸಬೇಕಾದ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ.

  • ಅರ್ಜಿದಾರ ಅಭ್ಯರ್ಥಿಯ ಆಧಾರ್ ಕಾರ್ಡ ಪ್ರತಿ/Aadhar.
  • ಪೋಟೋ/Photo.
  • ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Pass Book.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste And Income Certificate.
  • ರೇಶನ್ ಕಾರ್ಡ ಪ್ರತಿ/Ration Card.
  • ಮೊಬೈಲ್ ನಂಬರ್/Mobile Number.

For More Information-ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪಯುಕ್ತ ಲಿಂಕ್ ಗಳು:

Department Helpline Number-ಇಲಾಖೆಯ ಸಹಾಯವಾಣಿ- 9482300400
Official Website-ಅಧಿಕೃತ ವೆಬ್ಸೈಟ್ ಲಿಂಕ್- Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: