Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 26, 2025 | Siddesh
Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Share Now:

2025-2026 ನೇ ಸಾಲಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣದ ಅಡಿಯಲ್ಲಿ ಕಾರ್ಮಿಕ ಇಲಾಖೆಯ(Labour Scholarship)ಅಡಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳಲ್ಲಿ ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕಾರ್ಮಿಕ ಯೋಜನೆಯ ಅಡಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ(Apply labour student scholarship)ಕುಟುಂಬಗಳ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕವಾಗಿ ಸಹಾಯವನ್ನು ಮಾಡಲು ಆನ್ಲೈನ್ ಮೂಲಕ ಅರ್ಜಿ ಹಾಕಿ ಸಹಾಯಧನವನ್ನು ಪಡೆದುಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ: Postal Life Insurance-ಪೋಸ್ಟ್ ಆಫೀಸ್ ಲೈಫ್ ಇನ್ಶೂರೆನ್ಸ್ ಕಡಿಮೆ ಕಂತು ಪಾವತಿಸಿ ಹೆಚ್ಚಿನ ಲಾಭ ಪಡೆಯಿರಿ!

ಪ್ರಸ್ತುತ ಈ ಲೇಖನದಲ್ಲಿ ಕಾರ್ಮಿಕ ಮಂಡಳಿಯ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿಯನ್ನು ಎಲ್ಲಿ ಮತ್ತು ಹೇಗೆ ಸಲ್ಲಿಸಬೇಕು, ಅರ್ಜಿಗೆ ಅಗತ್ಯವಿರುವ ದಾಖಲೆಗಳು ಯಾವುವು, ಹಾಗೂ ಈ ಯೋಜನೆಯನ್ನು ಜಾರಿಗೆ ತರಲು ಸರ್ಕಾರದ ಉದ್ದೇಶವೇನು ಎಂಬುದರೊಂದಿಗೆ, ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಇನ್ನಿತರ ಪ್ರಮುಖ ಹಾಗೂ ಉಪಯುಕ್ತ ಮಾಹಿತಿಗಳನ್ನು ವಿವರವಾಗಿ ತಿಳಿಸಲಾಗಿದೆ.

Karmika Card- ಏನಿದು ಕಾರ್ಮಿಕ ಕಾರ್ಡ್?

ಕಾರ್ಮಿಕ ಕಾರ್ಡ್ ಅಥವಾ ಲೇಬರ್ ಕಾರ್ಡ್ ಎಂಬುದು ಕಾರ್ಮಿಕ ಇಲಾಖೆ ಅಥವಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KBOCWWB) ವತಿಯಿಂದ ನೀಡಲಾಗುವ ಅಧಿಕೃತ ಗುರುತಿನ ದಾಖಲೆ ಆಗಿದೆ. ಈ ಕಾರ್ಡ್‌ನಲ್ಲಿ ಕಾರ್ಮಿಕನ ಹೆಸರು, ವಿಳಾಸ, ವಯಸ್ಸು, ಉದ್ಯೋಗದ ಸ್ವರೂಪ, ವಿದ್ಯಾರ್ಹತೆ ಸೇರಿದಂತೆ ಅಗತ್ಯವಿರುವ ಪ್ರಮುಖ ವೈಯಕ್ತಿಕ ವಿವರಗಳು ದಾಖಲೆ ಎನ್ನಬಹುದು.

ಕಾರ್ಮಿಕ ಕಾರ್ಡ್ ಹೊಂದಿರುವುದರಿಂದ ಕಾರ್ಮಿಕರು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳಾದ ಪಿಂಚಣಿ, ಮಕ್ಕಳ ಶಿಕ್ಷಣ ಸಹಾಯಧನ, ಆರೋಗ್ಯ ವಿಮೆ, ಗೃಹ ನಿರ್ಮಾಣ ಸಹಾಯಧನ ಸೇರಿದಂತೆ ಅನೇಕ ಸೌಲಭ್ಯಗಳನ್ನು ಸುಲಭವಾಗಿ ಪಡೆಯಲು ಈ ಕಾರ್ಡ ಸಹಾಯಕಾರಿಯಾಗಿದೆ.

ಇದನ್ನೂ ಓದಿ: Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Scholorship Amount- ಕಾರ್ಮಿಕ ಇಲಾಖೆಯಡಿ ಎಷ್ಟು ವಿದ್ಯಾರ್ಥಿವೇತನ ಪಡೆಯಬಹುದು?

ಪ್ರೌಢ ಶಾಲಾ ವಿದ್ಯಾರ್ಥಿಗಳು: ₹6,000 ರೂ

PUC/Diplima/ITI ವಿದ್ಯಾರ್ಥಿಗಳು: ₹8,000 ರೂ

ಪದವಿ ವಿದ್ಯಾರ್ಥಿಗಳಿಗೆ: ₹10,000 ರೂ

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು: ₹12,000 ರೂ

ಇಂಜಿನೀಯರಿಂಗ್ ವಿದ್ಯಾರ್ಥಿಗಳು: ₹20,000 ರೂ

Ending date for scholorship-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 31 ಡಿಸೆಂಬರ್ 2025 ಕೊನೆಯ ದಿನಾಂಕವಾಗಿರುತ್ತದೆ.

ಇದನ್ನೂ ಓದಿ: Sewing Machine Training-ಮಹಿಳೆಯರಿಗೆ ಗುಡ್ ನ್ಯೂಸ್! 31 ದಿನಗಳ ಉಚಿತ ಹೊಲಿಗೆ ಯಂತ್ರ ತರಬೇತಿ!

Who Can Apply for scholorship-ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು:

ಅರ್ಜಿದಾರರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿದಾರರ ಅಭ್ಯರ್ಥಿಗಳು ಕಾರ್ಮಿಕರ ಮಕ್ಕಳಾಗಿರಬೇಕು.

ಅಭ್ಯರ್ಥಿಯು ಕನಿಷ್ಠ ಪ್ರಾಥಮಿಕ ವಿದ್ಯಾಭ್ಯಾಸದಿಂದ ಹಿಡಿದು ಸ್ನಾತಕೋತ್ತರ ಮಟ್ಟದವರೆಗೆ ವ್ಯಾಸಂಗ ಮಾಡುತ್ತಿರಬೇಕು.

ಅರ್ಜಿದಾರ ಅಭ್ಯರ್ಥಿಯು ಹಿಂದಿನ ವರ್ಷದ ತರಗತಿಯಲ್ಲಿ ಕನಿಷ್ಟ 50% ಪಡೆದಿರಬೇಕು.

ಒಂದು ಕುಟುಂಬದಿಂದ ಒಬ್ಬ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.

ಇದನ್ನೂ ಓದಿ: Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

Documents required-ಅರ್ಜಿ ಸಲ್ಲಿಸಲು ಲಗತ್ತಿಸಬೇಕಾದ ದಾಖಲಾತಿಗಳಾವುವು?

  • ಆಧಾರ್ ಕಾರ್ಡ/Aadhar Card
  • ವ್ಯಾಸಂಗ ಪ್ರಮಾಣ ಪತ್ರ/Education Certificate
  • ಪೋಷಕರ ಕಾರ್ಮಿಕ ಕಾರ್ಡ ಪ್ರತಿ/Copy of parents’ labor card
  • ಬ್ಯಾಂಕ್ ಪಾಸ್ ಬುಕ್/Bank Passbook
  • ಪೋಟೋ/Photocopy
  • ಮೊಬೈಲ್ ನಂಬರ್/Mobile Number
  • ಇ-ಮೇಲ್ ಐಡಿ/E mail ID

ಇದನ್ನೂ ಓದಿ: Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

scholorship application

ಇದನ್ನೂ ಓದಿ: Parivartan Scholarship-ಪರಿವರ್ತನ್ ಯೋಜನೆಯಡಿ ಪದವಿ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

How to Apply for scholorship-ಅರ್ಜಿಯನ್ನು ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ:

ಕಾರ್ಮಿಕ ಇಲಾಖೆಯ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಲು ಆಸಕ್ತ ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಈ ಕೆಳಗೆ ವಿವರಿಸಿರುವ ವಿಧಾನಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಆಸಕ್ತ ಅಭ್ಯರ್ಥಿಗಳು ಮೊದಲಿಗೆ ಈ ಲಿಂಕ್ “Scholarship Application” ಮೇಲೆ ಕ್ಲಿಕ್ ಮಾಡಿ ಅಧಿಕೃತ SSP ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿರುವ ವಿದ್ಯಾರ್ಥಿಗಳು ಮುಖಪುಟದಲ್ಲಿ ಕಾಣುವ “ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ” ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ರಿಜಿಸ್ಟರ್ ಮಾಡಬೇಕು.

Step-3: ಬಳಿಕ ಅಗತ್ಯ ವಿವರವನ್ನು ಹಾಕಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ Log In ಆದರೆ ಅಧಿಕೃತ ಅರ್ಜಿ ನಮೂನೆ ಒಪನ್ ಆಹುತ್ತದೆ. ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ ಕಾಣುವ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Veterinary Subsidy Schemes-ಪಶುಪಾಲನಾ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಸಬ್ಸಿಡಿ ಯೋಜನೆಗಳಾವುವು?

For More Information-ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆಯಲು ಕಾರ್ಮಿಕ ಮಂಡಳಿಯ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ: Read Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: