Lakhpati Didi-ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗಿಫ್ಟ್! ಏನಿದು ಲಖ್ ಪತಿ ದೀದಿ ಮತ್ತು ಶಿ-ಮಾರ್ಟ್ ಯೋಜನೆ?

February 3, 2026 | Siddesh
Lakhpati Didi-ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗಿಫ್ಟ್! ಏನಿದು ಲಖ್ ಪತಿ ದೀದಿ ಮತ್ತು ಶಿ-ಮಾರ್ಟ್ ಯೋಜನೆ?
Share Now:

ಕೇಂದ್ರ ಸರಕಾರದಿಂದ ದೇಶದ ಮಹಿಳೆಯರಿಗಾಗಿ ಜಾರಿಗೆ ತಂದಿರುವ ಎರಡು ಪ್ರಮುಖ ಯೋಜನೆಗಳಿಗೆ(Lakhpati Didi/She-Mart Scheme)ದೊಡ್ದ ಮೊತ್ತದ ಅನುದಾನವನ್ನು ಮೀಸಲಿಡಲಾಗಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಮಹಿಳೆಯರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.

ಭಾರತದ ಆರ್ಥಿಕತೆಯಲ್ಲಿ ಮಹಿಳೆಯರ ಪಾತ್ರವನ್ನು ಬಲಪಡಿಸಲು ಮತ್ತು ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರವು ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರುಗಳೆಂದರೆ 'ಲಖ್ ಪತಿ ದೀದಿ' (Lakhpati Didi) ಮತ್ತು 'ಶಿ-ಮಾರ್ಟ್' (She-Mart). ಮಹಿಳಾ ಸಬಲೀಕರಣದ ಉದ್ದೇಶ ಹೊಂದಿರುವ ಈ ಯೋಜನೆಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರ ಜೀವನದಲ್ಲಿ ಹೊಸ ಆಶಾದೀಪವಾಗಿ ಮೂಡಿಬಂದಿವೆ.

ಇದನ್ನೂ ಓದಿ: PM Kisan Tractor Yojana-ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ 50% ಸಬ್ಸಿಡಿ! ಅರ್ಜಿ ಸಲ್ಲಿಸುವುದು ಹೇಗೆ?

ಈ ಲೇಖನದಲ್ಲಿ ಈ ಎರಡು ಯೋಜನೆಗಳ ಬಗ್ಗೆ ಸಂಪೂರ್ಣ ವಿವರ, ಮತ್ತು ಈ ಯೋಜನೆಗಳ ಪ್ರಯೋಜನಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನದ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ವಿವರಿಸಲಾಗಿದ್ದು ತಪ್ಪದೇ ಈ ಅಂಕಣವನ್ನು ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

1) Lakhpati Didi Scheme-ಏನಿದು ಲಖ್ ಪತಿ ದೀದಿ ಯೋಜನೆ:

'ಲಖ್ ಪತಿ ದೀದಿ' ಎಂದರೆ ವಾರ್ಷಿಕವಾಗಿ ಕನಿಷ್ಠ 1 ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚು ಆದಾಯ ಗಳಿಸುವ ಮಹಿಳೆ ಎಂದರ್ಥ. ಕೇಂದ್ರ ಸರ್ಕಾರವು ಸ್ವಸಹಾಯ ಸಂಘಗಳ (SHG) ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಈ ಯೋಜನೆಯನ್ನು ರೂಪಿಸಿದೆ. ದೇಶದಾದ್ಯಂತ ಸುಮಾರು 3 ಕೋಟಿ ಮಹಿಳೆಯರನ್ನು 'ಲಖ್ ಪತಿ ದೀದಿ'ಯರನ್ನಾಗಿ ಮಾಡುವುದು ಸರ್ಕಾರದ ಗುರಿಯಾಗಿದ್ದು ಈ ಉದ್ದೇಶದಿಂದ ಲಖ್ ಪತಿ ದೀದಿ ಯೋಜನೆಯನ್ನು ಜಾರಿಗೆ ತರಲಾಗಿದೆ.

Lakhpati Didi Scheme Benefit-ಮಹಿಳೆಯರಿಗೆ ಈ ಯೋಜನೆಯಡಿ ಸಿಗುವ ಪ್ರಯೋಜನಗಳೇನು?

ಮಹಿಳೆಯರಿಗೆ ಹೊಲಿಗೆ, ನೇಕಾರಿಕೆ, ಕೃಷಿ ಸಂಸ್ಕರಣೆ ಮತ್ತು ಎಲ್‌ಇಡಿ ಬಲ್ಬ್ ತಯಾರಿಕೆಯಂತಹ ವಿವಿಧ ಕ್ಷೇತ್ರಗಳಲ್ಲಿ ಉಚಿತ ತರಬೇತಿ ನೀಡಲಾಗುತ್ತದೆ.

ಇಂದಿನ ಡಿಜಿಟಲ್ ಯುಗಕ್ಕೆ ತಕ್ಕಂತೆ ಮಹಿಳೆಯರಿಗೆ ತಾಂತ್ರಿಕ ಜ್ಞಾನವನ್ನು ನೀಡಲಾಗುತ್ತದೆ. ಉದಾಹರಣೆಗೆ, ಕೃಷಿ ಕ್ಷೇತ್ರದಲ್ಲಿ ಡ್ರೋನ್ ಬಳಸುವ ತರಬೇತಿ (Drone Didi) ಜೊತೆಗೆ ತರಬೇತಿಯನ್ನು ಪಡೆದ ಬಳಿಕ ಡ್ರೋನ್ ಅನ್ನ ಖರೀದಿ ಮಾಡಿ ತಮ್ಮದೇ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಮಹಿಳೆಯರಿಗೆ ಸಬ್ಸಿಡಿ ಯೋಜನೆ ಪ್ರಯೋಜನ ಪಡೆಯಲು ಉದ್ದಿಮೆ ಪ್ರಾರಂಭಿಸಲು ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ.

ಇದಲ್ಲದೇ ಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸಾಲ ಸೌಲಭ್ಯಗಳನ್ನು ಬ್ಯಾಂಕ್‌ಗಳ ಮೂಲಕ ಸುಲಭವಾಗಿ ದೊರಕಿಸಿಕೊಡಲಾಗುತ್ತದೆ. ಹಾಗೂ ತಾವು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ವೇದಿಕೆಗಳನ್ನು ಒದಗಿಸಲಾಗುತ್ತದೆ.

ಇದನ್ನೂ ಓದಿ: LIC Policy Status-ಮೊಬೈಲ್ ನಲ್ಲೇ ಎಲ್ಐಸಿ ಪಾಲಿಸಿ ಸ್ಟೇಟಸ್ ಚೆಕ್ ಮಾಡಲು ಲಿಂಕ್ ಬಿಡುಗಡೆ!

How To Get Lakhpati Didi Scheme Benefit-ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

ಗ್ರಾಮೀಣ ಮತ್ತು ನಗರ ಭಾಗದ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಪ್ರಮುಖವಾಗಿ ಅನುಸರಿಸಬೇಕಾದ ಕ್ರಮಗಳ ವಿವರ ಹೀಗಿದೆ ಈ ಯೋಜನೆಯು ಮುಖ್ಯವಾಗಿ ಸ್ವಸಹಾಯ ಸಂಘಗಳ (Self Help Groups - SHG) ಮೂಲಕ ಕಾರ್ಯನಿರ್ವಹಿಸುತ್ತದೆ.

ನೀವು ಯಾವುದೇ ಅಧಿಕೃತ ಮಹಿಳಾ ಸ್ವಸಹಾಯ ಸಂಘದ ಸದಸ್ಯರಾಗಿರಬೇಕು.

ಈ ಯೋಜನೆಯ ಪ್ರಯೋಜನವನ್ನು ಪಡೆಯಲು ನಿಮ್ಮ ಭಾಗದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ NRLM ವಿಭಾಗದ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಬೇಕು.

ಲಖ್ ಪತಿ ದೀದಿ ಯೋಜನೆಯ ಅಧಿಕೃತ ವೆಬ್ಸೈಟ್ ಲಿಂಕ್- Click Here

ಇದನ್ನೂ ಓದಿ: Fodder Seed Kit-ಕೃಷಿಕರಿಗೆ ಉಚಿತ ಮೇವಿನ ಬೀಜದ ಕಿಟ್ ವಿತರಣೆ! ಅರ್ಜಿ ಸಲ್ಲಿಸುವುದು ಹೇಗೆ?

Lakhpati Didi Scheme

ಇದನ್ನೂ ಓದಿ: Fellowship Application-ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ!

2) She-Mart Scheme-ಏನಿದು ಶಿ-ಮಾರ್ಟ್ ಯೋಜನೆ?

ಮಹಿಳಾ ಉದ್ಯಮಿಗಳು ಮತ್ತು ಸ್ವಸಹಾಯ ಸಂಘಗಳು ತಯಾರಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಸರ್ಕಾರವು 'ಶಿ-ಮಾರ್ಟ್' (She-Mart) ಎಂಬ ಡಿಜಿಟಲ್ ಮತ್ತು ಭೌತಿಕ ಮಾರುಕಟ್ಟೆ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದು ಮಹಿಳೆಯರು ತಯಾರಿಸಿದ ವಸ್ತುಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಲು ಇರುವ ಒಂದು ಬೃಹತ್ ವೇದಿಕೆಯಾಗಿದೆ.

She-Mart Scheme Benefits-ಶಿ-ಮಾರ್ಟ್ ಯೋಜನೆಯಿಂದ ಮಹಿಳೆಯರಿಗೆ ಆಗುವ ಲಾಭಗಳು:

ಮಹಿಳೆಯರು ತಾವು ತಯಾರಿಸಿದ ಹಪ್ಪಳ, ಸ್ಯಾಂಡಲ್, ಕರಕುಶಲ ವಸ್ತುಗಳು ಅಥವಾ ಬಟ್ಟೆಗಳನ್ನು ನೇರವಾಗಿ ಮಾರಾಟ ಮಾಡಬಹುದು. ಇದರಿಂದ ಹೆಚ್ಚಿನ ಲಾಭ ಅವರ ಕೈ ಸೇರುತ್ತದೆ.

ಶಿ-ಮಾರ್ಟ್ ಮೂಲಕ ಇ-ಕಾಮರ್ಸ್ (E-commerce) ಸೌಲಭ್ಯ ಸಿಗುವುದರಿಂದ, ಗ್ರಾಮೀಣ ಭಾಗದ ಮಹಿಳೆಯರ ಉತ್ಪನ್ನಗಳು ಜಾಗತಿಕ ಮಟ್ಟದಲ್ಲಿ ಲಭ್ಯವಾಗುತ್ತವೆ.

ಉತ್ಪನ್ನಗಳನ್ನು ಆಕರ್ಷಕವಾಗಿ ಪ್ಯಾಕ್ ಮಾಡುವುದು ಮತ್ತು ಅವುಗಳಿಗೆ ಬ್ರಾಂಡ್ ಹೆಸರು ನೀಡುವ ಬಗ್ಗೆ ಸರ್ಕಾರ ಮಾರ್ಗದರ್ಶನ ನೀಡುತ್ತದೆ.

ನಗರ ಪ್ರದೇಶಗಳಲ್ಲಿ ಆಯೋಜಿಸುವ ದೊಡ್ಡ ದೊಡ್ಡ ಮೇಳಗಳಲ್ಲಿ (Exhibitions) ಮಳಿಗೆಗಳನ್ನು ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಪಡೆಯಬಹುದು.

ಇದನ್ನೂ ಓದಿ: Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಿ!

How To Get She-Mart Scheme Benefit-ಶಿ-ಮಾರ್ಟ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

ಸ್ವಸಹಾಯ ಸಂಘಗಳು ಅಥವಾ ವೈಯಕ್ತಿಕ ಮಹಿಳಾ ಉದ್ಯಮಿಗಳು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು.

ಕೇಂದ್ರ ಸರ್ಕಾರದ 'ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ' (NRLM) ಅಡಿಯಲ್ಲಿ ಇದರ ನೋಂದಣಿ ನಡೆಯುತ್ತದೆ.

ಸಮೀಪದ ತಾಲ್ಲೂಕು ಕಚೇರಿಯ ಎನ್‌ಆರ್‌ಎಲ್‌ಎಂ (NRLM) ವಿಭಾಗಕ್ಕೆ ಭೇಟಿ ನೀಡಿ ನಿಮ್ಮ ಉತ್ಪನ್ನಗಳ ವಿವರ ನೀಡಿ ನೋಂದಣಿ ಮಾಡಿಕೊಳ್ಳಬಹುದು.

ಕೇಂದ್ರ ಸರ್ಕಾರದ ಈ ಯೋಜನೆಗಳು ಮಹಿಳೆಯರನ್ನು ಕೇವಲ ಗೃಹಿಣಿಯರನ್ನಾಗಿ ಉಳಿಸದೆ, 'ಉದ್ಯಮಿ'ಗಳನ್ನಾಗಿ ಪರಿವರ್ತಿಸುತ್ತಿವೆ. ಆರ್ಥಿಕ ಸ್ವಾತಂತ್ರ್ಯವು ಮಹಿಳೆಯರ ಆತ್ಮವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಇಡೀ ಕುಟುಂಬದ ಜೀವನಮಟ್ಟವನ್ನು ಸುಧಾರಿಸುತ್ತದೆ.

ನೀವು ಕೂಡ ಸ್ವಸಹಾಯ ಸಂಘದ ಸದಸ್ಯರಾಗಿದ್ದರೆ ಅಥವಾ ಸ್ವಂತ ಉದ್ಯಮ ಆರಂಭಿಸುವ ಕನಸು ಹೊಂದಿದ್ದರೆ, ಇಂದೇ ನಿಮ್ಮ ತಾಲ್ಲೂಕು ಪಂಚಾಯತಿಯಲ್ಲಿನ NRLM ಯೋಜನೆ ವಿಭಾಗದ ಅಧಿಕಾರಿಗಳನ್ನು ಭೇಟಿ ನೀಡಿ ಈ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: