Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

December 27, 2025 | Siddesh
Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!
Share Now:

ನಮ್ಮ ರಾಜ್ಯದಲ್ಲಿ ಹೂಡಿಕೆಗೆ ವೇಗ ನೀಡಲು ಮತ್ತು ಸಾರ್ವಜನಿಕರಿಗೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು 'ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು-2025' ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.

ಈ ಕಾಯಿದೆ ಅನ್ವಯ 1966ರ ಹಳೆಯ ನಿಯಮಗಳ ಬದಲಿಗೆ ಸಂಪೂರ್ಣ ಡಿಜಿಟಲೀಕೃತ ಮತ್ತು ಕಾಲಮಿತಿಯ ವ್ಯವಸ್ಥೆ ಜಾರಿಗೆ ತರಲಾಗಿದೆ, ಭೂ ಪರಿವರ್ತನೆ ವ್ಯವಸ್ಥೆ ಸಂಪೂರ್ಣ ಸ್ವಯಂಚಾಲಿತವಾಗಿದ್ದು, ಜಿಲ್ಲಾಧಿಕಾರಿಗಳು ಅನುಮತಿ ನೀಡಬೇಕಾದ ಅಗತ್ಯತೆ ಇರುವುದಿಲ್ಲ.

ಇದನ್ನೂ ಓದಿ: Ration Card Correction-ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! 

ಅನುಮೋದಿತ ಮಾಸ್ಟರ್ ಪ್ಲಾನ್ ವ್ಯಾಪ್ತಿಯಲ್ಲಿರುವ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಲು ಇನ್ನು ಮುಂದೆ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಅಗತ್ಯವಿಲ್ಲ. ಭೂಮಾಲೀಕರು ಕೇವಲ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ನಿಗದಿಪಡಿಸಿದ ಶುಲ್ಕ ಪಾವತಿಸಿದರೆ ಸಾಕು. ಹಣ ಪಾವತಿಸಿದ ತಕ್ಷಣ ಡಿಜಿಟಲ್ ರಶೀದಿ ದೊರೆಯಲಿದ್ದು, ಅದು ಸ್ವಯಂಚಾಲಿತವಾಗಿ ಕಂದಾಯ ದಾಖಲೆಗಳಲ್ಲಿ ಅಪ್‌ಡೇಟ್ ಆಗಲಿದೆ.

ಇನ್ನು ಮುಂದೆ 30 ದಿನಗಳಲ್ಲಿ ಭೂ ಪರಿವರ್ತನೆ:

ಮಾಸ್ಟರ್ ಪ್ಲಾನ್ ಪ್ರಕಾರ ಭೂ ಬಳಕೆಗೆ ಪರಿವರ್ತನೆ ಅವಶ್ಯಕತೆ ತೆಗೆದು ಹಾಕಲಾಗಿದೆ. ಇಂತಹ ಪ್ರಕರಣಗಳಲ್ಲಿ ನೇರವಾಗಿ ಪ್ಲಾನ್‌ ಅಪ್ರೂವಲ್‌ಗೆ ಹೋಗಬಹುದು.

⁠ಮಾಸ್ಟರ್ ಪ್ಲಾನ್ ಹೊರಗಿನ ಹಾಗೂ ಪರಿಭಾವಿತ ಭೂ ಪರಿವರ್ತನೆ (ಡೀಮ್ಡ್ ಕನ್ವರ್ಷನ್) ಈ ಹಿಂದೆ ಮೂರು ನಾಲ್ಕು ತಿಂಗಳು ಸಮಯ ತೆಗೆದುಕೊಳ್ಳುತ್ತಿತ್ತು. ಆದರೆ ಪ್ರಸ್ತುತ 30 ದಿನಗಳಲ್ಲಿ ಭೂ ಪರಿವರ್ತನೆ ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: Postal Life Insurance-ಪೋಸ್ಟ್ ಆಫೀಸ್ ಲೈಫ್ ಇನ್ಶೂರೆನ್ಸ್ ಕಡಿಮೆ ಕಂತು ಪಾವತಿಸಿ ಹೆಚ್ಚಿನ ಲಾಭ ಪಡೆಯಿರಿ

⁠ಭೂ ಪರಿವರ್ತನೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ  ನೀಡಲಾಗಿದೆ.

ಜಿಲ್ಲಾಧಿಕಾರಿಗಳು 30ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಭೂ ಪರಿವರ್ತನೆಗೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. 

⁠30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆಗೆ ಅವಕಾಶ ಲಭ್ಯವಾಗುತ್ತದೆ. 

⁠ಸಣ್ಣ ಕೈಗಾರಿಕೆಗಳು ಎರಡು ಎಕರೆವರೆಗೆ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯ ಇಲ್ಲ.

land conversion

ಭೂ ಪರಿವರ್ತನೆ ಈಗ ಸರಳ:

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್‌ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ ತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ ಸೇರಿಸಿರುವ ಕಳೆದ 2-3 ವರ್ಷಗಳಲ್ಲಿ ತರಲಾದ ಕಾನೂನಿನ ತಿದ್ದುಪಡಿಗಳನ್ನು ಸಂವಾದಿಯಾಗಿ ಕೆಲ ನಿಯಮಗಳನ್ನು ರಚಿಸಲಾಗಿದೆ.

⁠ಕಳೆದ 2 ವರ್ಷದಲ್ಲಿ ಭೂ ಕಂದಾಯ ಕಾಯ್ದೆ 1964ರ ವಿವಿಧ ಕಲಂಗಳಿಗೆ ತಿದ್ದುಪಡಿ ತಂದು ಕರ್ನಾಟಕ ರಾಜ್ಯದಲ್ಲಿ ಪ್ರಗತಿ ಪಥದತ್ತ ಹಾಗೂ ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತಕ್ಕೆ ನಾಂದಿ ಹಾಡಲು ಪ್ರಯತ್ನಿಸಲಾಗಿದ್ದು, 47 ಕಲಂಗಳಿಗೆ 9 ತಿದ್ದುಪಡಿ ತರಲಾಗಿದೆ.

⁠ಕರ್ನಾಟಕ ಭೂ ಕಂದಾಯ ನಿಯಮಗಳು 1966 ಅನ್ನುಸಮಗ್ರವಾಗಿ 56 ವರ್ಷಗಳ ತರುವಾಯ 44 ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, 1974ರಲ್ಲಿ ದೇವರಾಜು ಅರಸು ಭೂ ಸುಧಾರಣಾ ಕಾಯ್ದೆ 1961ಕ್ಕೆ 145 ಕಡೆ ತಿದ್ದುಪಡಿ ತಂದು ಕಾನೂನಿಗೆ ಸ್ವಾತಂತ್ರ್ಯ ನೀಡಲಾಗಿತ್ತು. ಅದಾದ ಬಳಿಕ ಸಮಗ್ರ ತಿದ್ದುಪಡಿ ತಂದಿರುವುದು ಇದೇ ಮೊದಲು

⁠ಈ ತಿದ್ದುಪಡಿ ಮೂಲಕ ಕಂದಾಯ ನ್ಯಾಯಾಲಯಗಳನ್ನು ಪಾರದರ್ಶಕವಾಗಿ, ನಿಯಮಬದ್ಧವಾಗಿ ನಡೆಸಲು ಹಾಗೂ ಸಾರ್ವಜನಿಕರಿಗೆ ಸರಳ- ಸುಲಲಿತ ನ್ಯಾಯದಾನ ನೀಡಲು ಬದ್ಧವಾಗಿದೆ.

⁠ಭೂ ಪರಿವರ್ತನೆಯನ್ನು ಸರಳೀಕೃತವಾಗಿ ಪ್ರಕ್ರಿಯೆಗೊಳಪಡಿಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಸಾಗಿಸಲು ಹಾಗೂ ಬಂಡವಾಳ ಹೂಡಿಕೆಗೆ ಹೂಡಿಕೆದಾರರ ಸ್ನೇಹಿಯಾಗಿ ಖರೀದಿಸಲಾದ ಭೂಮಿಗೆ ಭೂ ಪರಿವರ್ತನೆ ನೀಡಲು ಈ ತಿದ್ದುಪಡಿ ತರಲಾಗಿದೆ.

ಇನ್ನು ಮುಂದೆ ಸಣ್ಣ ಕೈಗಾರಿಕೆಗಳು 2 ಎಕರೆವರೆಗೆ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯವಿಲ್ಲ:

ರಾಜ್ಯದಲ್ಲಿ ಹೂಡಿಕೆಯನ್ನು ಉತ್ತೇಜಿಸಲು ಕೈಗಾರಿಕಾ ಮತ್ತು ಇಂಧನ ವಲಯಕ್ಕೆ ವಿಶೇಷ ವಿನಾಯಿತಿ ನೀಡಲಾಗಿದೆ. ಇದರಂತೆ, ಹೊಸದಾಗಿ ಸ್ಥಾಪನೆಯಾಗುವ ಸಣ್ಣ ಕೈಗಾರಿಕೆಗಳಿಗಾಗಿ 2 ಎಕರೆವರೆಗಿನ ಕೃಷಿ ಭೂಮಿಯನ್ನು ಬಳಸಲು ಇನ್ನು ಮುಂದೆ ಜಿಲ್ಲಾಧಿಕಾರಿಗಳಿಂದ ಯಾವುದೇ ಪೂರ್ವ ಭೂ ಪರಿವರ್ತನೆ ಅನುಮತಿಯ ಅಗತ್ಯವಿರುವುದಿಲ್ಲ. ಇದೇ ರೀತಿ, 'ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ 2022-27' ರ ಅಡಿಯಲ್ಲಿ ಅನುಮೋದನೆ ಪಡೆದ ಸೌರ ಮತ್ತು ಪವನ ಶಕ್ತಿಯಂತಹ ಯೋಜನೆಗಳಿಗೆ ಭೂ ಪರಿವರ್ತನೆ ಪ್ರಕ್ರಿಯೆಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ಕಂದಾಯ ಇಲಾಖೆ ಜಾಲತಾಣ-  Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: