HomeNew postsland purchase subsidy scheme: ಭೂ ಒಡೆತನ ಯೋಜನೆಯಡಿ ಶೇ.50 ರಷ್ಟು ಸಹಾಯಧನದಲ್ಲಿ ಜಮೀನು ಖರೀದಿಸಲು...

land purchase subsidy scheme: ಭೂ ಒಡೆತನ ಯೋಜನೆಯಡಿ ಶೇ.50 ರಷ್ಟು ಸಹಾಯಧನದಲ್ಲಿ ಜಮೀನು ಖರೀದಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಇಲ್ಲಿದೆ ಅಗತ್ಯ ದಾಖಲಾತಿ ಮಾಹಿತಿ.

ಸಮಾಜ ಕಲ್ಯಾಣ ಇಲಾಖೆವತಿಯಿಂದ ವಿವಿಧ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಕಲ್ಯಾಣ ನಿಗಮಗಳ ಮೂಲಕ “ಭೂ ಒಡೆತನ ಯೋಜನೆ” ಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸಹಾಯಧನದಲ್ಲಿ ಜಮೀನು ಖರೀದಿಸಲು ಅರ್ಜಿ ಆಹ್ವಾನ ಮಾಡಲಾಗಿದೆ.

ಈ ಅಂಕಣದಲ್ಲಿ ಈ ಯೋಜನೆಯಡಿ ಸೌಲಭ್ಯ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು? ಅರ್ಜಿ ವಿಲೇವಾರಿ ಪ್ರಕ್ರಿಯೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡುವ ಮೂಲಕ ಈ ಯೋಜನೆ ಅಗತ್ಯವಿರುವವರಿಗೆ ತಲುಪುವಂತೆ ಮಾಡಲು ಸಹಕರಿಸಿ.

ಭೂ ಒಡೆತನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರನ್ನು ಭೂ ಒಡೆಯರನ್ನಾಗಿ ಮಾಡುವ ಉದ್ದೇಶದಿಂದ ಜಾರಿಗೆ ತರಲಾಗಿದ್ದು. ಖರೀದಿಸುವ ಜಮೀನು ಫಲಾಪೇಕ್ಷಿಯ ವಾಸಿಸುವ ಸ್ಧಳದಿಂದ 10 ಕಿಮೀ ವ್ಯಾಪ್ತಿಯಲ್ಲಿರಬೇಕು.

ಒಟ್ಟು ಯೋಜನೆಯ ಘಟಕ ವೆಚ್ಚದ ಮಿತಿಯೊಳಗೆ ಕನಿಷ್ಟ 2.00 ಎಕರೆ ಖುಷ್ಕಿ, 1.00 ಎಕರೆ ನೀರಾವರಿ, 1/2 ಎಕರೆ ಭಾಗಾಯ್ತು ಅಂದರೆ ತೋಟದ ಜಮೀನನ್ನು ಖರೀದಿಸಿ ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರ ಹೆಸರಿನಲ್ಲಿ ನೊಂದಾಯಿಸಲಾಗುತ್ತದೆ ಎಂದು ಈ ಯೋಜನೆಯ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಈ ಯೋಜನೆಯಡಿ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿಯನ್ನು ನೀಡುವ ಅಧಿಕಾರವನ್ನು ಆಯಾ ಜಿಲ್ಲೆಯಲ್ಲಿನ ಜಿಲ್ಲಾಧಿಕಾರಿಗಳಿಗೆ ನೀಡಲಾಗಿರುತ್ತದೆ.

ಇದನ್ನೂ ಓದಿ: PMSBY Insurance Scheme- ವರ್ಷಕ್ಕೆ 20 ರೂ ಪಾವತಿಸಿ 2 ಲಕ್ಷ  ವಿಮಾ ಸೌಲಭ್ಯ  ಪಡೆಯಲು ಅರ್ಜಿ ಆಹ್ವಾನ!

land purchase subsidy amount- ಎಷ್ಟು ಸಹಾಯಧನ ಪಡೆಯಬವುದು?

ಭೂ ಒಡೆತನ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸೀಮಿತಗೊಂಡಂತೆ ಈ ಯೋಜನೆಯಡಿ ಒಟ್ಟೂ ಘಟಕ ವೆಚ್ಚವನ್ನು ರೂ.25.00 ಲಕ್ಷ ಎಂದು ನಿಗದಿಪಡಿಸಲಾಗಿರುತ್ತದೆ ಉಳಿದಂತೆ ಇತರೆ 26 ಜಿಲ್ಲೆಗಳಲ್ಲಿ ಘಟಕ ವೆಚ್ಚವನ್ನು ರೂ.20.00 ಲಕ್ಷಗಳಿಗೆ ನಿಗದಿಪಡಿಸಲಾಗಿರುತ್ತದೆ.

ಒಟ್ಟು ಘಟಕ ವೆಚ್ಚದಲ್ಲಿ ಶೇ.50 ರಷ್ಟು ಸಹಾಯಧನ ನೀಡಲಾಗುತ್ತದೆ ಉದಾಹರಣೆಗೆ ಜಮೀನು ಖರೀದಿಸಲು 20 ಲಕ್ಷ ವೆಚ್ಚವಾದಲ್ಲಿ 10 ಲಕ್ಷವನ್ನು ಸರಕಾರ ಭರಿಸುತ್ತದೆ ಮತ್ತು ಉಳಿದ ಶೇ.50 ರಷ್ಟು ಹಣವನ್ನು ಅವಧಿ ಸಾಲ ಒದಗಿಸಲಾಗುತ್ತದೆ. ಅವಧಿ ಸಾಲವನ್ನು ನಿಗಮದಿಂದಲೇ ಭರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಶೇ.6ರ ದರದಲ್ಲಿ ಬಡ್ಡಿ ವಿಧಿಸಲಾಗುತ್ತದೆ.  ಸಾಲ ಮತ್ತು ಬಡ್ಡಿಯನ್ನು 10 ವರ್ಷಗಳ ಅವಧಿಯಲ್ಲಿ ವಾರ್ಷಿಕ ಸಮ ಕಂತುಗಳಲ್ಲಿ ಮರುಪಾವತಿ ಮಾಡಬೇಕಾಗಿರುತ್ತದೆ. 

ಜಮೀನು ಮಾರಾಟ ಮಾಡುವ ಭೂ ಮಾಲೀಕರು ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬಾರದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ಜಮೀನಿನ ದರವನ್ನು ನಿಗದಿಪಡಿಸುತ್ತದೆ.

ದಿನನಿತ್ಯ ಈ ರೀತಿಯ ಉಪಯುಕ್ತ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್> WhatsApp channel ಮಾಡಿ ಕೃಷಿಕಮಿತ್ರ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ.

ಇದನ್ನೂ ಓದಿ: 3 phase current- ರೈತರಿಗೆ ಗುಡ್ ನ್ಯೂಸ್ ಈ ದಿನದಿಂದ ಕೃಷಿ ಪಂಪ್ ಸೆಟ್ ಗೆ 7 ತಾಸು 3 ಫೇಸ್‌ ಕರೆಂಟ್!

required documents for bhu odethana yojana: ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಯಾವುವು?

  1. ಪರಿಶಿಷ್ಟ ಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು
  2. ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕ ಪ್ರಮಾಣಪತ್ರ ಹೊಂದಿರಬೇಕು
  3. ಆಧಾಯ ಪ್ರಮಾಣ ಪತ್ರ.(ಆದಾಯ ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ.1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ)
  4. ವಯೋಮಿತಿ ಕನಿಷ್ಠ 21 ಹಾಗೂ ಗರಿಷ್ಠ 50 ವರ್ಷ
  5. ಕುಟುಂಬದ ಪಡಿತರ ಚೀಟಿ 
  6. ಬ್ಯಾಂಕ್ ಪಾಸ್ ಬುಕ್ ಪ್ರತಿ
  7. ಆಧಾರ್ ಕಾರ್ಡ್ ಪ್ರತಿ

How to apply for bhu odethana scheme- ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅರ್ಹ ಅರ್ಜಿದಾರರು ನಿಗದಿಪಡಿಸಿದ ಕೊನೆಯೆ ದಿನಾಂಕದ ಒಳಗಾಗಿ ಸೇವಾ ಸಿಂಧು: Seva sindhu website ವೆಬ್ಸೈಟ್ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬವುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್ , ಕರ್ನಾಟಕ ಒನ, ಕಂಪ್ಯೂಟರ್ ಸೆಂಟರ್ ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು.

Application last date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಈಗಾಗಲೇ ಇಲಾಖೆಯಿಂದ ಕೊನೆಯ ದಿನಾಂಕವನ್ನು ನಿಗದಿಪಡಿಸಿದ್ದು ಈ  ಯೋಜನೆಗೆ ಅರ್ಜಿ ಸಲ್ಲಿಸಲು 29 ನವೆಂಬರ್ 2023 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ:  Crop insurance status- ಶೀಘ್ರದಲ್ಲೇ ರೈತರ ಖಾತೆಗೆ ಮಧ್ಯಂತರ ಬೆಳೆ ವಿಮೆ! ಈ ವೆಬ್ಸೈಟ್ ಭೇಟಿ ಮಾಡಿ ನಿಮ್ಮ ಅರ್ಜಿ ಸ್ಥಿತಿ ಚೆಕ್ ಮಾಡಿ.

bhu odethana application status check-ಅರ್ಜಿ ಸ್ಥಿತಿ ಚೆಕ್ ಮಾಡುವ ವಿಧಾನ:

ಅರ್ಜಿದಾರರು ಅರ್ಜಿ ಸಲ್ಲಿಸಿದ ಬಳಿಕ ಇಲ್ಲಿ ಕ್ಲಿಕ್ ಮಾಡಿ: application status check ನೀವು ಸಲ್ಲಿಸಿದ ಅರ್ಜಿ ಯಾವ ಹಂತದಲ್ಲಿದೆ ಎಂದು ಸೇವಾ ಸಿಂಧು ಪೋರ್ಟ ಭೇಟಿ ಮಾಡಿ ತಿಳಿದುಕೊಳ್ಳಬವುದು ಒಂದೊಮ್ಮೆ ನೀವೆನಾದರು ಗ್ರ‍ಾಮ್ ಒನ್ ಅಥವಾ ಕರ್ನಾಟಕ ಒನ್ ಕೇಂದ್ರದಿಂದ ಅರ್ಜಿ ಸಲ್ಲಿದಲ್ಲಿ ಆಯಾ ವೆಬ್ಸೈಟ್ ಭೇಟಿ ಮಾಡಿ ನಿಮ್ಮ ಅರ್ಜಿ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಬವುದು.

Helpline number-ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ: 9482300400

Most Popular

Latest Articles

Related Articles