ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್(Land Registration) ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ ನೀಡಿದ್ದು ಈ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳಿಗೆ ರಾಜ್ಯ ಸರಕಾರ ಮುಂದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನೆನ್ನೆ(06-06-2025) ರಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ(Registration and Stamps Department) ಸಂಬಂಧಿಸಿದ ವಿಷಯಗಳ ಕುರಿತು ನಡೆದ ಪ್ರಗತಿ ಪರೀಶಿಲನ ಸಭೆಯಲ್ಲಿ ಮುಖ್ಯಮಂತ್ರಿ ಅವರು ಇಲಾಖೆ ಅಧಿಕಾರಿಗಳಿಗೆ ಆಸ್ತಿ ಖಾತಾ ರಿಜಿಸ್ಟರ್ ಕುರಿತು ಸಾರ್ವಜನಿಕರಿಗೆ ಜನ ಸ್ನೇಹಿ ಸೇವೆಗಳನ್ನು ನೀಡಲು ಮಹತ್ವದ ಬದಲಾವಣೆಗಳ ಕುರಿತು ಸೂಚನೆಗಳನ್ನು ನೀಡಿದ್ದಾರೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ಕುರಿತು ಯಾವೆಲ್ಲ ಸೂಚನೆಗಳನ್ನು ನೀಡಲಾಗಿದೆ? ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಪ್ರಗತಿ ಪರೀಶಿಲನ ಸಭೆಯಲ್ಲಿ ಯಾವೆಲ್ಲ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: 2nd PUC Exam 2025- 2nd ಪಿಯುಸಿ ಮಾದರಿ ಪ್ರಶ್ನೆಪತ್ರಿಕೆ! ಇಲ್ಲಿದೆ ಡೌನ್ಲೋಡ್ ಲಿಂಕ್!
Land Registration Scam- ನಕಲಿ ದಾಖಲೆ ಸೃಷ್ಟಿಗೆ ಸಂಪೂರ್ಣ ಕಡಿವಾಣ:
ನಕಲಿ ದಾಖಲೆಗಳನ್ನು ಸೃಷ್ಟಿಸಿ ಒಂದೇ ಸೈಟ್ ಅನ್ನು ಹಲವು ಜನರಿಗೆ ಮಾರಾಟ ಮಾಡಿ ಸಾರ್ವಜನಿಕರಿಗೆ ವಂಚನೆ ಮಾಡುವ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು ಇದಲ್ಲದೇ ಕೇಲವು ಇಲಾಖಾ ಅಧಿಕಾರಿಗಳು ಸಹ ಈ ಅಕ್ರಮ ವಂಚನೆಗಳಲ್ಲಿ ಭಾಗಿಯಾಗಿರುವುದ ಸಹ ಉಲ್ಲೇಖಿಸಲಾಗಿದ್ದು ಇನ್ನು ಮುಂದೆ ಎಲ್ಲಾ ಆಸ್ತಿಗಳಿಗೆ ಡಿಜಿಟಲ್ ಮಾದರಿಯ ನೋಂದಣಿಯನ್ನು ಕಡ್ಡಾಯ ಮಾಡಿರುವುದರಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ವಂಚನೆ ಮಾಡುವ ಪ್ರಕರಣಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Crop Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯುವುದು ಭಾರೀ ಸುಲಭ!
Karnataka Registration and Stamps Department-ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ಸಭೆಯ ಮುಖ್ಯಾಂಶಗಳು ಹಾಗೂ ಮುಖ್ಯಮಂತ್ರಿ ಅವರು ನೀಡಿದ ಸೂಚನೆಗಳು:
1) ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತೀ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ.
2) ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ,
3) ಗ್ರಾಮ ಪಂಚಾಯತ್‌ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ.
4) ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಇದು ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
5) ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್ ಕಂಪ್ಯೂಟರ್‌ನಲ್ಲಿ ಇರಬೇಕು. ಈ ಡಾಟಾ ಬೇಸ್ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು.
ಇದನ್ನೂ ಓದಿ: Land Purchase Records- ಆಸ್ತಿ ಮಾರಾಟ ಮತ್ತು ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೇ ಪರೀಶಿಲಿಸಿ!
6) ನೋಂದಣಿ ಪ್ರಕ್ರಿಯೆ ಇಂಟಿಗ್ರೇಷನ್ ಆದ ಮೇಲೆ ಅಕ್ರಮಗಳ ಮೇಲೆ ಕಡಿವಾಣ ಸಾಧ್ಯವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒನ್ ಟೈಮ್ ಪರಿಹಾರ ನೀಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.
7) ಬಿಬಿಎಂಪಿಯಲ್ಲಿ ವ್ಯಾಪ್ತಿಯಲ್ಲಿ ಖಾತಾ ನೀಡಿರುವುದನ್ನು ಡಾಟಾ ಬೇಸ್‌ನಲ್ಲಿ ಹಾಕಬೇಕು. ಇದರಿಂದ ಖಾತೆ ಆದ ಆಸ್ತಿಗಳನ್ನು ಮಾತ್ರ ನೋಂದಣಿ ಮಾಡಬಹುದು. ಕಾಗದ ದಾಖಲೆಗಳ ಆಧಾರದಲ್ಲಿ ಯಾವುದೇ ಕಾರಣಕ್ಕೂ ನೋಂದಣಿಗೆ ಪರಿಗಣಿಸಬಾರದು.
8) ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಲು ಸೂಚನೆ. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
9) ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟೈಸ್ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್ ಮಾಡಲಾಗಿದೆ.
ಇದನ್ನೂ ಓದಿ: Free Hostel-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
10) ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು.
11) ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್‌ಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು.
12) ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು.
14) ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿದೆ.
ಇದನ್ನೂ ಓದಿ: Crop Insurance amount-ಈ ಜಿಲ್ಲೆಯ ರೈತರ ಖಾತೆಗೆ ₹2,333 ಲಕ್ಷ ಮುಂಗಾರು ಬೆಳೆ ವಿಮೆ ಜಮಾ!
15) ಈ ವರ್ಷ ಡಿಸೆಂಬರ್ ಕೊನೆಗೆ ರೂ.16,993 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ.
16) ಕಂದಾಯ ಇಲಾಖೆಯಲ್ಲಿ ಸರ್ವೇ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು/ನಿವೇಶನಗಳ ದತ್ತಾಂಶ ಮಾಹಿತಿ ಇದ್ದು, ಸದರಿ ಮಾಹಿತಿಯನ್ನು ಆಧರಿಸಿ ಒಂದೇ ಯೋಜನೆಯಲ್ಲಿ ಸದರಿ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು.
17) ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ರೂ. ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ ಸುಮಾರು 96 ಲಕ್ಷ ಆಸ್ತಿಗಳಿಗೆ ಇನ್ನೂ ಈ ಖಾತಾ ಇರುವುದಿಲ್ಲ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಕುರಿತು ಕ್ರಮ.