life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

Life insurance:ವೃತಿಜೀವನದಲ್ಲಿ ತೊಡಗಿಕೊಂಡಿರುವ ಕಾರ್ಮಿಕರಿಗೆ ಮತ್ತು ಅವರ ಕುಟುಂಬಗಳಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನೆರವಾಗಳು ಕಾರ್ಮಿಕ ಇಲಾಖೆಯಿಂದ ಹಲವು ವಿಮಾ ಯೋಜನೆಗಳು ಜಾರಿಯಲ್ಲಿದ್ದು ಇವುಗಳ ಪೈಕಿ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಯೋಜನೆಯಡಿ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!
life insurance application-2024

ವೃತಿಜೀವನದಲ್ಲಿ ತೊಡಗಿಕೊಂಡಿರುವ ಕಾರ್ಮಿಕರಿಗೆ ಮತ್ತು ಅವರ ಕುಟುಂಬಗಳಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನೆರವಾಗಳು ಕಾರ್ಮಿಕ ಇಲಾಖೆಯಿಂದ ಹಲವು ವಿಮಾ ಯೋಜನೆಗಳು ಜಾರಿಯಲ್ಲಿದ್ದು ಇವುಗಳ ಪೈಕಿ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಯೋಜನೆಯಡಿ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್‌ಕಾರ್ಟ್, ಬಿಗ್‌ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ  ಡೆಲಿವರಿ ವೃತ್ತಿಯಲ್ಲಿ ತೊಡಗಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು.

ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾರೆಲ್ಲ ಅರ್ಜಿ ಸಲ್ಲಿಸಬವುದು? ಅಗತ್ಯ ದಾಖಲಾತಿಗಳು ಯಾವುವು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

ಇದನ್ನೂ ಓದಿ: Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

labour department insurance Yojana-2024: ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

  • ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್‌ಕಾರ್ಟ್, ಬಿಗ್‌ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ  ಡೆಲಿವರಿ ವೃತ್ತಿಯಲ್ಲಿ ತೊಡಗಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರು ಈ ಯೋಜನೆಯಡಿ ವಿಮೆ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
  • ಅರ್ಜಿದಾರನ ವಯಸ್ಸು 18 ರಿಂದ 60 ರ ನಡುವೆ ಇರಬೇಕು.
  • ಆದಾಯ ತೆರಿಗೆ(IT) ಪಾವತಿದಾರರಾಗಿರಬಾರದು.
  • ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು.

ಇದನ್ನೂ ಓದಿ: Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

life insurance- ಈ ಯೋಜನೆಯಡಿ ಎಷ್ಟು ವಿಮೆ ಪಡೆಯಬವುದು?

ಫಲಾನುಭವಿಯು ಅಪಘಾದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ2.00 ಲಕ್ಷ ಹಾಗೂ ಜೀವ ವಿಮೆ ರೂ 2.00 ಲಕ್ಷ ಸೇರಿ ಒಟ್ಟು ರೂ.4.00 ಲಕ್ಷಗಳನ್ನು ಪಡೆಯಬವುದು.

ಅಪಘಾದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2.00 ಲಕ್ಷಗಳವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ) ಜೀವ ವಿಮಾ ರೂ.2.00 ಲಕ್ಷಗಳು.

ಇದನ್ನೂ ಓದಿ: DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ 

life insurance application-ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅರ್ಜಿದಾರರು ಅಗತ್ಯ ದಾಖಲಾತಿಗಳ ಸಿದ್ದಪಡಿಸಿಕೊಂಡು ಸೇವಾ ಸಿಂಧು ಪೋರ್ಟಲ್(https://sevasindhu.karnataka.gov.in/Sevasindhu/Kannada?ReturnUrl=%2F) ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕು ಒದಗಿಸಬೇಕಾಗ ದಾಖಲಾತಿಗಳು:

(1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ(Aadhar card)

(2) ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು  ವಿತರಿಸಿದ ಗುರುತಿನ ಚೀಟಿ(ID card)

(3) ಇ-ಶ್ರಮ್ ನೋಂದಣಿ ಸಂಖ್ಯೆ (ನಿಮ್ಮ ಬಳಿ ಇಲ್ಲವಾದಲ್ಲಿ eshram.gov.in ಅಲ್ಲಿ ನೋಂದಾಯಿಸಿ ಪಡೆದುಕೊಳ್ಳುವುದು)

ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಅಥವಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಇದನ್ನೂ ಓದಿ: PMEGP Scheme: ಗರಿಷ್ಠ 50 ಲಕ್ಷಗಳವರೆಗೆ 250 ಬಗ್ಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಸಾಲಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

Karnataka labour department-ಈ ಯೋಜನೆಗೆ ಸಂಬಂಧಪಟ್ಟ ಪ್ರಮುಖ ಲಿಂಕ್ ಗಳು:

ಈ ಯೋಜನೆಯ ಮಾರ್ಗಸೂಚಿ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: Download Now

ಕಾರ್ಮಿಕ ಇಲಾಖೆ ವೆಬ್ಸೈಟ್: click here

ಅರ್ಜಿ ಸಲ್ಲಿಸಲು ಲಿಂಕ್: Apply Now

ಕಾರ್ಮಿಕ ಸಹಾಯವಾಣಿ: 155214 (24x7)