Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeGovt SchemesLingayatha nigama Yojana-2023: ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೆ 6 ಯೋಜನೆಯಡಿ ಸಹಾಯಧನ ಪಡೆಯಲು...

Lingayatha nigama Yojana-2023: ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೆ 6 ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮ ನಿಯಮಿತ (ಕರ್ನಾಟಕ ಸರ್ಕಾರದ ಉದ್ಯಮ) ದಿಂದ 2023-24ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ನಿಗಮದ ಯೋಜನೆಗಳು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪವರ್ಗ-3B) ಅಭಿವೃದ್ಧಿಗಾಗಿ 2023-24ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಕೊನೆಯ 30.10.2023 ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಪ್ರಕಟಣೆ ವಿವರ ಈ ಕೆಳಗಿನಂತಿದೆ.

1) ಶೈಕ್ಷಣಿಕ ಸಾಲ ಯೋಜನೆಗಳು

A) ಬಸವ ಬೆಳಗು ಯೋಜನೆ(Fresh Students)

ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಅವರ ಕುಟುಂಬದ ವಾರ್ಷಿಕ ಆದಾಯ ರೂ. 3,50 ಲಕ್ಷಗಳ ಮಿತಿಯಲ್ಲಿರುವ  ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ.  ವಾರ್ಷಿಕ ರೂ. 1.00 ಲಕ್ಷಗಳಂತೆ ಕೋರ್ಸ್ ಅವಧಿಗೆ ಗರಿಷ್ಥ ರೂ 4.00 ಲಕ್ಷಗಳಿಂದ 5.00 ಲಕ್ಷದ ವರೆಗೆ ವಾರ್ಷಿಕ ಶೇ. 2 ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.

CET NEET ಇತ್ಯಾದಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರ ಸರ್ಕರಿ ಕೋಟಾದ ಸೀಟು ಪಡೆದಿರಬೇಕು. 

B)ಬಸವ ಬೆಳಗು ಯೋಜನೆ (Renewal): 

2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು,

C) ವಿದೇಶ ವಿದ್ಯಾವಿಕಾಸ ಯೋಜನೆ (Fresh Students)

ಕುಟುಂಬದ ವಾರ್ಷಿಕ ಆದಾಯ ರೂ 8.00 ಲಕ್ಷಗಳ ಮೀತಿಯಲ್ಲಿರುವ ವಿದ್ಯಾರ್ಥಿಗಳು QS World Ranking 500 ರೊಳಗೆ ಬರುವ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್, ಪಿ.ಹೆಚ್.ಡಿ, ಮಾಸ್ಟರ್ ಡಿಗ್ರಿ ಕೋರ್ಸ್‌ಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಥ ರೂ 10.00 ಲಕ್ಷಗಳಂತೆ 3 ವರ್ಷದ ಅವಧಿಗೆ ಒಟ್ಟು ರೂ 20.00 ಲಕ್ಷಗಳನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.

D) ವಿದೇಶ ವಿದ್ಯಾವಿಕಾಸ ಯೋಜನೆ ಸಾಲ(Renewal): 

2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.

How to do GruhaLakshmi eKYC- ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು eKYCಗಾಗಿ ವೆಬ್ಸೈಟ್ ಲಿಂಕ್ ಬಿಡುಗಡೆ! ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

2) ಜೀವಜಲ ಯೋಜನೆ:

ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,000/-ಗಳ ಮಿತಿಯೊಳಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು. 

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆಬಾವಿ ಯೋಜನೆಗೆ ಘಟಕ ವೆಚ್ಚ ರೂ. 4.75 ಲಕ್ಷಗಳಲ್ಲಿ ರೂ. 4.25 ಲಕ್ಷಗಳು ಸಹಾಯಧನ, ಘಟಕ ಪೂರ್ಣಗೊಳಿಸಲು ಸಾದ್ಯವಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು,

ಉಳಿದ ಜಿಲ್ಲೆಗಳಿಗೆ ಘಟಕ ವೆಚ್ಚ ರೂ. 3.75 ಲಕ್ಷಗಳಲ್ಲಿ ರೂ. 3.25 ಲಕ್ಷ ಸಹಾಯಧನ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಮನನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು, ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ Farmer’s FRUIT ID ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು.

ಇದನ್ನೂ ಓದಿ: ಒಂದು ಭಾರಿಯು ಅನ್ನಭಾಗ್ಯ ಯೋಜನೆಯಡಿ ಹಣ ಜಮಾ ಅಗಿಲ್ಲವೇ? ಇಲ್ಲಿದೆ ಸೂಕ್ತ ಪರಿಹಾರ ಕ್ರಮಗಳು.

3) ಕಾಯಕಕಿರಣ ಯೋಜನೆ:

ವೀರಶೈವ ಲಿಂಗಾಯತ ಸಮುದಾಯದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಈ ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುವುದು.

> ಘಟಕ ವೆಚ್ಚ ರೂ.1,00,000/- ಗಳಿಗೆ ಶೇ.20ರಷ್ಟು ಗರಿಷ್ಟ ರೂ 20,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.80ರಷ್ಟು ಗರಿಷ್ಟ ರೂ.80,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.

> ಘಟಕ ವೆಚ್ಚ ರೂ.2,00,000/- ಗಳಿಗೆ ಶೇ.15ರಷ್ಟು ಗರಿಷ್ಠ ರೂ. 30,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.85ರಷ್ಟು ಗರಿಷ್ಟ ರೂ.1,75,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.

.4) ಭೋಜನಾಲಯ ಕೇಂದ್ರ:

ಸಮುದಾಯದ ಜನರು ಹೋಟೆಲ್ (ಖಾನಾವಳಿ ಉದ್ಯಮ ಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು, ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂ. 5.00 ಲಕ್ಷ ಇದರಲ್ಲಿ ರೂ.4,60,000/- ಸಾಲ ಮತ್ತು ರೂ. 40,000/- ಸಹಾಯಧನ ನೆರವು ನೀಡಲಾಗುವುದು, ಹೋಟೆಲ್ ಸ್ಥಾಪನೆ ಮಾಡಲು ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ 20*30 ಅಡಿ ಅಳತೆಯ ನಿವೇಶನ ಹೊಂದಿರಬೇಕು. 

5) ವಿಭೂತಿ ನಿರ್ಮಾಣ ಘಟಕ:

ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸಲು ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದೆ ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳು ಮತ್ತು 18 ರಿಂದ 55 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು, ವಿಭೂತಿ ನಿರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚ ರೂ. 4.00 ಲಕ್ಷ ಇದರಲ್ಲಿ ರೂ. 3,60,000/- ಸಾಲ ಮತ್ತು ರೂ. 40,000/- ಸಹಾಯಧನ ವಾರ್ಷಿಕ ಶೇ.3ರ ಬಡ್ಡಿದರದಲ್ಲಿ ನೆರವು ನೀಡಲಾಗುವುದು.

ಇದನ್ನೂ ಓದಿ: ಪಡಿತರ ಚೀಟಿ ತಿದ್ದುಪಡಿಗೆ ಬರೊಬ್ಬರಿ 3.18 ಲಕ್ಷ ಅರ್ಜಿಯಲ್ಲಿ 93 ಸಾವಿರ  ತಿರಸ್ಕಾರ!ಅರ್ಜಿ ಸ್ಥಿತಿ ಚೆಕ್ ಮಾಡಲು ಇಲ್ಲಿದೆ ವೆಬ್ಸೈಟ್ ಲಿಂಕ್.

6) ಸ್ವಾವಲಯ ಸಾರಥಿ ಯೋಜನೆ: (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) 

ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಯ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ (ಹಳದಿ ಬೋರ್ಡ್‌) ಖರೀದಿಗೆ ಪಡೆಯುವ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ 3.00 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಫಲಾನುಭವಿಗಳು ಉಳಿದ ಮೊತ್ತವನ್ನು ಬ್ಯಾಂಕ್ / ಹಣಕಾಸು ಸಂಸ್ಥೆಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯುವುದು.

7) ಸ್ಥಯಂ ಉದ್ಯೋಗ ಸಾಲ ಯೋಜನೆ: (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) 

ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ/ಕೃಷಿ ಅವಲಂಬಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು/ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್‌ಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ. 20 ರಷ್ಟು ಅಥವಾ ಗರಿಷ್ಟ ರೂ. 1.00 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು. 

PM-kisan amount- ಈ ರೀತಿ  ಸಂದೇಶ ಬಂದವರಿಗಿಲ್ಲಾ ಪಿ ಎಂ ಕಿಸಾನ್ ಯೋಜನೆ ಹಣ!

ವಿಶೇಷ ಸೂಚನೆಗಳು:

1) ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿರಬೇಕು.

2) ಈ ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು, ನಿರ್ದೇಶಕರ ಮಂಡಳಿಯ ವಿವೇಚ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

3) ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್ ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.

4) ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

5) ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in/kn ಅಥವಾ ನಿಗಮದ ದೂರವಾಣಿ ಸಂಖ್ಯೆ 080-22865522 ಅಥವಾ 9900012351) ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಗಮದ ವಿವರ:

ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮ ನಿಯಮಿತ 
5ನೇ ಮಹಡಿ, ವಿಶ್ವೇಶ್ವರಯ್ಯ ಚಿಕ್ಕ ಗೋಪುರ, ಉ., ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560 001.
ವೆಬ್ಸೈಟ್ ಲಿಂಕ್: Click here 
ಸಹಾಯವಾಣಿ: 9900012351, 080-22865522

Most Popular

Latest Articles

- Advertisment -

Related Articles