male munsuchane-ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ!

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆ ಉಡುಪಿ ತಾಲ್ಲೂಜಿನ  ಅಲೆವೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅತ್ಯಧಿಕ 164.5 ಮಿಮೀ ಮಳೆ(male munsuchane)ದಾಖಲಾಗಿರುತ್ತದೆ ಉಳಿದಂತೆ ರಾಜ್ಯ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ಬಂದಿದ್ದು, ಉಳಿದ ಜಿಲ್ಲೆಗಳಲ್ಲಿ ಮಧ್ಯಮದಿಂದ ಸಾಧಾರಣ ಮಳೆ ದಾಖಲಾಗಿರುತ್ತದೆ.

male munsuchane-ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ!
male munsuchane-2024

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆ ಉಡುಪಿ ತಾಲ್ಲೂಜಿನ  ಅಲೆವೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅತ್ಯಧಿಕ 164.5 ಮಿಮೀ ಮಳೆ(male munsuchane)ದಾಖಲಾಗಿರುತ್ತದೆ ಉಳಿದಂತೆ ರಾಜ್ಯ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ಬಂದಿದ್ದು, ಉಳಿದ ಜಿಲ್ಲೆಗಳಲ್ಲಿ ಮಧ್ಯಮದಿಂದ ಸಾಧಾರಣ ಮಳೆ ದಾಖಲಾಗಿರುತ್ತದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಅತಿ ಭಾರಿ ಮಳೆ,ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Borewell subsidy scheme-2024: ಸಹಾಯಧನದಲ್ಲಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

Weather- ನಾಳೆ ಬೆಳಗ್ಗೆ (07 ಜುಲೈ 2024)ರ ಬೆಳಿಗ್ಗೆ 8-00 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಬಿಡುವು ಕಡಿಮೆ ಇದ್ದು, ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಕೊಡಗು, ಹಾಸನ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಇದನ್ನೂ ಓದಿ: Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

Karnataka masnsoon news-2024: ಮುಂಗಾರು ಮಳೆ ವಿವರ:

ಮುಂಗಾರು ಸಾಂಪ್ರದಾಯಿಕ ಪಥದಲ್ಲಿ ಸಾಗುವ ಲಕ್ಷಣಗಳಿದ್ದು, ಈಗಿನಂತೆ ಜುಲೈ 15ರಿಂದ ರಾಜ್ಯದಾದ್ಯಂತ ಚುರುಕಾಗುವ ಲಕ್ಷಣಗಳಿವೆ. ಅಲ್ಲಿಯವರೆಗೆ ಕರಾವಳಿ, ಮಲೆನಾಡು ಹೊರತುಪಡಿಸಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 10ರಿಂದ ಒಂದೆರಡು ದಿನಗಳ ಮಟ್ಟಿಗೆ ಮಳೆ ಕಡೆಮೆ ಇದ್ದರೂ ನಂತರ ಚುರುಕಾಗುವ ಲಕ್ಷಣಗಳಿವೆ.

ಇದನ್ನೂ ಓದಿ: PNB Recruitment 2024 - ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 7ನೇ ತರಗತಿ ಪಾಸಾದವರಿಗೆ ಅವಕಾಶ!

Next 7 days weather forecast-ಮುಂದಿನ ಒಂದು ವಾರದ ಮಳೆ ಮುನ್ಸೂಚನೆ ಮಾಹಿತಿ:

ಜುಲೈ 06 ರಿಂದ ಜುಲೈ 14 ರವರೆಗೆ ಮಳೆ ಮುನ್ಸೂಚನೆ ಮಾಹಿತಿ ಜುಲೈ 8 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಮಲೆನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರೆಯುವ ಸಾದ್ಯತೆಯಿದ್ದು, ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿ ಭಾರಿ ಮತ್ತು ಅತ್ಯಧಿಕ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು  ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇರುತ್ತದೆ.