- Advertisment -
HomeNew postsMale munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

Male munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

ಕಳೆದೆರಡು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲಿಲ್ಲಿ ಮಳೆಯಾಗುತ್ತಿದ್ದು ರಾಜ್ಯದ(Karnataka Rain Forecast)ಮಳೆ ಮುನ್ಸೂಚನೆ ಮತ್ತು ಮಳೆ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದ್ದು ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರಿನ ಕರ್ನಾಟಕ ಮಳೆ ಮಾಹಿತಿ ನಕ್ಷೆಯನ್ವಯ(Weather Report) ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಅತ್ಯಧಿಕ 82.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ. ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಧಾರಣದಿಂದ ಉತ್ತಮ ಮಳೆ ದಾಖಲಾಗಿರುತ್ತದೆ.

ಇದನ್ನೂ ಓದಿ: Property Registration-ರಾಜ್ಯ ಸರ್ಕಾರದಿಂದ ಆಸ್ತಿ ನೋಂದಣಿ ನಿಯಮದಲ್ಲಿ ಬದಲಾವಣೆ!

Male munsuchane-ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ:

ಕರ್ನಾಟಕ ಮಳೆ ಮುನ್ಸೂಚನೆಯ ಮಾಹಿತಿಯ ಪ್ರಕಾರ ಮುಂದಿನ 24 ಗಂಟೆಯಲ್ಲಿ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಕೆಳಗಿನ ನಕ್ಷೆಯಲ್ಲಿ ನೀಡಿರುವ ಮುನ್ಸೂಚನೆಯನ್ವಯ ಬೀದರ್, ವಿಜಯಪುರ, ಯಾದಗಿರಿ, ರಾಯಚೂರು, ಕಲಬುರ್ಗಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

ಇದನ್ನೂ ಓದಿ: Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!

Male munsuchane

ಇದನ್ನೂ ಓದಿ: NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

Tomorrow Karnataka Weather-ನಾಳೆ(12 ಏಪ್ರಿಲ್ 2025)ರ ಬೆಳಿಗ್ಗೆ 8-00 ಗಂಟೆವರೆಗಿನ ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ:

ಕರಾವಳಿ ಜಿಲ್ಲೆಗಳಲ್ಲಿ:

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಈಗಾಗಲೇ ಮುಂಜಾನೆ ಉತ್ತಮ ಮಳೆಯಾಗಿದೆ. ಆದರೂ ಸಂಜೆ ಅಥವಾ ರಾತ್ರಿ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪ್ರಭಾವ ಪ್ರಮುಖವಾಗಿದೆ.

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಘಟ್ಟ ಪ್ರದೇಶದ ಮೋಡಗಳು ಪೂರ್ವಕ್ಕೆ ಅಂದರೆ ಬಂಗಾಳಕೊಲ್ಲಿಯ ಕಡೆ ಚಲಿಸುವ ಸಾಧ್ಯತೆಗಳಿವೆ. ಹೀಗೆ ಸಂಭವಿಸಿದರೆ ಮಳೆಯ ಸಾಧ್ಯತೆ ಕಡಿಮೆಯಾಗಬಹುದು. ಈಗನಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿದೆ.

ಇದನ್ನೂ ಓದಿ: Aadhar QR Code-ಶೀಘ್ರದಲ್ಲೇ ಆಧಾರ್ ಕಾರ್ಡಗೆ ಕ್ಯೂಆರ್ ಕೋಡ್ ಅಳವಡಿಕೆ!

ಮಲೆನಾಡು ಜಿಲ್ಲೆಗಳಲ್ಲಿ:

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 12ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

male mahiti

ಇದನ್ನೂ ಓದಿ: Mudra Loan-52 ಕೋಟಿ ಫಲಾನುಭವಿಗಳಿಗೆ ಮುದ್ರಾ ಲೋನ್ ಮಂಜೂರು! ಇಲ್ಲಿದೆ ಸಂಪೂರ್ಣ ವಿವರ!

ಒಳನಾಡು ಜಿಲ್ಲೆಗಳಲ್ಲಿ:

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಪೂರ್ವಕ್ಕೆ ಚಲಿಸುವ ಮೋಡಗಳಿಂದ ಬಳ್ಳಾರಿ ತನಕವೂ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ದಿನ ಬಿಟ್ಟು ದಿನ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಗಳಿವೆ.

ಇದನ್ನೂ ಓದಿ: PUC Result-2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

Karnataka District Wise Temperature-ಜಿಲ್ಲಾವಾರು ದಾಖಲಾದ ಗರಿಷ್ಠ ಮತ್ತು ಕನಿಷ್ಥ ತಾಪಮಾನದ ಮಾಹಿತಿ:

District Wise Temperature

ಮಾಹಿತಿ ಕೃಪೆ: ಸಾಯಿಶೇಖರ್ ಬಿ& KSNDMC, Bengalore

- Advertisment -
LATEST ARTICLES

Related Articles

- Advertisment -

Most Popular

- Advertisment -