Male Munsuchane-ರಾಜ್ಯಾದ್ಯಂತ ವರುಣನ ಅಬ್ಬರ: ಮೇ 11ರವರೆಗೆ ಹಲವೆಡೆ ಭಾರೀ ಮಳೆ ಮುನ್ಸೂಚನೆ!

May 9, 2026 | Siddesh
Male Munsuchane-ರಾಜ್ಯಾದ್ಯಂತ ವರುಣನ ಅಬ್ಬರ: ಮೇ 11ರವರೆಗೆ ಹಲವೆಡೆ ಭಾರೀ ಮಳೆ ಮುನ್ಸೂಚನೆ!
Share Now:

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶಕ್ಕೂ ಮುನ್ನವೇ ವರುಣನ ಅಬ್ಬರ ಜೋರಾಗಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 11ರವರೆಗೆ ಭಾರೀ ಮಳೆಯಾಗುವ(Male Munsuchane)ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಈಗಾಗಲೇ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ಅಕಾಲಿಕ ಮಳೆಗೆ(Male Mahiti) ನೂರಾರು ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರಬ್ಬೀ ಸಮುದ್ರದಿಂದ ಬೀಸುತ್ತಿರುವ ಮಾರುತಗಳು ಭೂಮಿಯ ಮೇಲೆ 1.5 ಕಿ.ಮೀ ಎತ್ತರದಲ್ಲಿ ಸಾಗುತ್ತಿರುವುದರಿಂದ ಮಳೆಯ ತೀವ್ರತೆ ಹೆಚ್ಚಾಗುತ್ತಿದೆ. ಮಲೆನಾಡು ಭಾಗದಲ್ಲಿ ಬಿರುಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ವರೆಗೆ ಇರಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಇದನ್ನೂ ಓದಿ: Lidkar Competition-ರಾಜ್ಯಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ-2026! ಪ್ರಥಮ ಬಹುಮಾನ ₹50,000!

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡಕವಿದ ವಾತಾವರಣ ಇರಲಿದ್ದು, ನಗರದ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ(Rain Forecast) ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲೂ ಮೇ 11 ರಂದು ಹೊಸ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಹವಾಮಾನದ ಬದಲಾವಣೆಯನ್ನು ಇಲಾಖೆಯು ಸೂಕ್ಷ್ಮವಾಗಿ ಗಮನಿಸುತ್ತಿದೆ.

Karnataka Rainfall Details-ಮಳೆ ಮಾಹಿತಿ:

ಕರ್ನಾಟಕ ಮಳೆ ಮಾಪನ ನಕ್ಷೆಯ ಮಾಹಿತಿಯ ಪ್ರಕಾರ ನಿನ್ನೆ ಉಡುಪಿ ಜಿಲ್ಲೆಯ ಕಾಪು ಹೋಬಳಿಯ ಕುರ್ಕಾಲು ಭಾಗದಲ್ಲಿ ಅತ್ಯಧಿಕ ಮಿಲಿ ಮೀಟಲ್ ಮಳೆ ದಾಖಲಾಗಿದ್ದು ಉಳಿದಂತೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಅಲ್ಲಲಿ ಉತ್ತಮದಿಂದ ಸಾದಾರಣ ಮಳೆ ದಾಖಲಾಗಿರುತ್ತದೆ.

District Wise Rain Forecast-ಪ್ರಾದೇಶಿಕ ಮುನ್ಸೂಚನೆ ವಿವರಗಳು:

ಇದನ್ನೂ ಓದಿ: Bhagyalakshmi Scheme-ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Karnataka Male Munsuchane

ಇದನ್ನೂ ಓದಿ: e-Swathu New Changes-ಇ-ಸ್ವತ್ತು 2.0 ತಂತ್ರಾಂಶದಲ್ಲಿ ಮಹತ್ವದ ಬದಲಾವಣೆ! ಇಲ್ಲಿದೆ ಸಂಪೂರ್ಣ ಮಾಹಿತಿ!

ಕರಾವಳಿ ಜಿಲ್ಲೆಗಳಲ್ಲಿ:

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಗಲು ಬಿಸಿಲು, ಸೆಖೆ ಹೆಚ್ಚಿರುವುದರಿಂದ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಿರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 10ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ. ನಂತರ ಕಡಿಮೆಯಾಗಬಹುದು.

ಮಲೆನಾಡು ಜಿಲ್ಲೆಗಳಲ್ಲಿ:

ರಾಜ್ಯದ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡಿನ ಕೊಡಗು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮೇ 10ರ ನಂತರ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಇದನ್ನೂ ಓದಿ: Labour Card Benefits- ಕಾರ್ಮಿಕ ಕಾರ್ಡ ಇದ್ದರೆ ಯಾವೆಲ್ಲ ಯೋಜನೆಯ ಲಾಭ ಪಡೆಯಬಹುದು?

ಉತ್ತರ ಒಳನಾಡು ಜಿಲ್ಲೆಗಳಲ್ಲಿ:

ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಗಾಳಿಯ ಒತ್ತಡ ಹಾಗೂ ದಿಕ್ಕು ಬದಲಾದರೆ ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 10ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ:

ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಮೇ 19ರಿಂದ 3 ಅಥವಾ 4 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯಲ್ಲಿ ಮೇ 11ರಂದು ಉಂಟಾಗಲಿರುವ ವಾಯುಭಾರ ಕುಸಿತವು ಅನಿಶ್ಚಿತತೆಯಿಂದ ಕೂಡಿದೆ. ಪರಿಸ್ಥಿತಿ ಕಾದು ನೋಡಬೇಕಾಗಿದೆ.

ಇದನ್ನೂ ಓದಿ: LIC Policy-ಮಕ್ಕಳ ಶಿಕ್ಷಣಕ್ಕೆ LIC ಯಿಂದ ಮೂರು ಯೋಜನೆಗಳು: ನಿಮ್ಮ ಮಗುವಿನ ಭವಿಷ್ಯಕ್ಕೆ ಯಾವುದು ಬೆಸ್ಟ್?

ವಿಶೇಷ ಸೂಚನೆ:

ರೈತರು ತಮ್ಮ ಫಸಲನ್ನು ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವುದು ಉತ್ತಮ. ಬಿರುಗಾಳಿ ಬೀಸುವ ಸಮಯದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯದಿರಿ.

ಮಾಹಿತಿ ಕೃಪೆ: ಸಾಯಿ ಶೇಖರ್ ಬಿ & KSNDMC,Bengaluru

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: