Marriage Registration-ಇನ್ಮುಂದೆ ಮನೆಯಲ್ಲೇ ಕುಳಿತು ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿ!

January 27, 2026 | Siddesh
Marriage Registration-ಇನ್ಮುಂದೆ ಮನೆಯಲ್ಲೇ ಕುಳಿತು ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿ!
Share Now:

ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಇಲಾಖೆಯ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ನಿಟ್ಟಿನಲ್ಲಿ ಡಿಜಿಟಲೀಕರಣ ಯೋಜನೆಯಡಿ ಮದುವೆ ನೋಂದಣಿ (Marriage Registration Application) ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸಲಾಗಿದ್ದು. ಸಾರ್ವಜನಿಕರು ಸಬ್‌-ರಿಜಿಸ್ಟ್ರಾರ್ ಕಚೇರಿಗಳಿಗೆ ಅಲೆಯುವ ಬದಲು, ಕಾವೇರಿ 2.0 (Kaveri 2.0) ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿಯೇ ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇಂದಿನ ಈ ಅಂಕಣದಲ್ಲಿ ವಿವಾಹ ನೋಂದಣಿಯನ್ನು(Marriage Registration) ಏಕೆ ಮಾಡಿಸಬೇಕು? ಇದರಿಂದ ಆಗುವ ಪ್ರಯೋಜನಗಳೇನು ಹಾಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿವಾಹ ನೋಂದಣಿಯನ್ನು ಮಾಡಿಕೊಳ್ಳುವುದು ಹೇಗೆ? ಇದಕ್ಕಾಗಿ ಅವಶ್ಯವಿರುವ ದಾಖಲಾತಿಗಳೇನು? ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಸಹ ಹಂಚಿಕೊಳ್ಳಲಾಗಿದ್ದು ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಈ ಮಾಹಿತಿಯನ್ನು ಹಂಚಿಕೊಳ್ಳಿ.

ಇದನ್ನೂ ಓದಿ: Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

ಅನೇಕ ಸಾರ್ವಜನಿಕರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿವಾಹ ನೋಂದಣಿಯನ್ನು(Online Marriage Registration Application)ಮಾಡಿಕೊಳ್ಳುವುದು ಹೇಗೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿಯ ಕೊರತೆಯಿದ್ದು ಇದಲ್ಲದೇ ಈ ಬಗ್ಗೆ ಅವಶ್ಯಕವಾಗಿ ಸಾರ್ವಜನಿಕರು ತಿಳಿದಿದಬೇಕಾದ ಪ್ರಮುಖ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

Marriage Registration Importance-ವಿವಾಹ ನೋಂದಣಿ ಮಾಡಿಸಿಕೊಳ್ಳುವುದು ಏಕೆ ಮುಖ್ಯ?

ಅನೇಕ ಜನರಿಗೆ ವಿವಾಹ ನೋಂದಣಿಯನ್ನು ಏಕೆ ಕಡ್ಡಾಯವಾಗಿ ಮಾಡಿಸಬೇಕು ಇದರಿಂದ ಯಾವೆಲ್ಲ ಅನುಕೂಲಗಳು ಇವೆ ಎನ್ನುವ ಬಗ್ಗೆ ನಿಖರ ಮಾಹಿತಿ ಇರುವುದಿಲ್ಲ ಇದರ ಬಗ್ಗೆ ಒಂದಿಷ್ಟು ವಿವರ ಈ ಕೆಳಗಿನಂತಿದೆ:

ಮದುವೆ ಪ್ರಮಾಣಪತ್ರವು ಕೇವಲ ಒಂದು ಕಾಗದದ ದಾಖಲೆಯಲ್ಲ, ಇದು ದಂಪತಿಗಳಿಗೆ ಕಾನೂನುಬದ್ಧ ಭದ್ರತೆಯನ್ನು ನೀಡುತ್ತದೆ:

ವಿಶೇಷವಾಗಿ ಮಹಿಳೆಯರಿಗೆ ಇದು ಕಾನೂನುಬದ್ಧ ರಕ್ಷಣೆ ಒದಗಿಸುವುದರ ಜೊತೆಗೆ ಸಾಮಾಜಿಕ ಭದ್ರತೆಯನ್ನು ನೀಡುತ್ತದೆ.

ಪತಿ ಅಥವಾ ಪತ್ನಿ ಮರಣ ಹೊಂದಿದ ಸಂದರ್ಭದಲ್ಲಿ, ನಾಮಿನಿ ವಿವರ ಇಲ್ಲದಿದ್ದರೂ ಬ್ಯಾಂಕ್ ಡಿಪಾಸಿಟ್ ಅಥವಾ ವಿಮೆ ಮೊತ್ತ ಪಡೆಯಲು ಇದು ಸಹಕಾರಿ.

ದಂಪತಿಗಳು ವಿದೇಶಕ್ಕೆ ತೆರಳಲು ವಿಸಾ ಪಡೆಯುವಾಗ ಮದುವೆ ಪ್ರಮಾಣಪತ್ರ ಕಡ್ಡಾಯ.

ಇದನ್ನೂ ಓದಿ: KMF New Products-ಕೆಎಂಎಫ್‌ನಿಂದ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳ ಬಿಡುಗಡೆ!

How To Apply For Marriage Registration-ಅರ್ಜಿ ಸಲ್ಲಿಸುವುದು ಹೇಗೆ?

ವಿವಾಹ ನೋಂದಣಿಯನ್ನು ಮಾಡಿಕೊಳ್ಳು ಸಾರ್ವಜನಿಕರು ಎರಡು ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಇದಕ್ಕಾಗಿ ಮೊದಲನೆಯ ವಿಧಾನ ಅರ್ಜಿದಾರರು ತಮ್ಮ ಮೊಬೈಲ್ ಮೂಲಕ ಕಾವೇರಿ 2.0 ಜಾಲತಾಣವನ್ನು ಪ್ರವೇಶ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಎರಡನೇ ವಿಧಾನ ನೇರವಾಗಿ ನಿಮ್ಮ ತಾಲ್ಲೂಕಿನ ಸಬ್ ರಿಜಿಸ್ಟರ್ ಕಚೇರಿಯನ್ನು ಭೇಟಿ ಮಾಡಿ ನೋಂದಣಿಯನ್ನು ಮಾಡಿಕೊಳ್ಳಲು ಅವಕಾಶವಿರುತ್ತದೆ.

Documents For Marriage Registration-ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು:

ವಿವಾಹ ನೋಂದಣಿಯನ್ನು ಮಾಡಿಸಲು ಆನ್ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಶ್ಯವಿರುವ ಅಗತ್ಯ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

ವಧು ಮತ್ತು ವರರ ಆಧಾರ್ ಕಾರ್ಡ್.

ವಯಸ್ಸಿನ ಪುರಾವೆಗಾಗಿ SSLC ಅಂಕಪಟ್ಟಿ ಅಥವಾ ವರ್ಗಾವಣೆ ಪ್ರಮಾಣಪತ್ರ (TC).

ಮದುವೆಯ ಆಮಂತ್ರಣ ಪತ್ರ.

ಮದುವೆ ಸಮಾರಂಭದ ಫೋಟೋ.

ಮೂವರು ಸಾಕ್ಷಿಗಳ ಆಧಾರ್ ಕಾರ್ಡ್ ಪ್ರತಿಗಳು.

ಇದನ್ನೂ ಓದಿ: LPG Cylinder Subsidy-ಗ್ಯಾಸ್ ಸಿಲಿಂಡರ್ 300 ರೂ. ಸಬ್ಸಿಡಿ ನಿಮಗೆ ಬರುತ್ತಿದೆಯೇ? ಚೆಕ್ ಮಾಡುವುದು ಹೇಗೆ?

Marriage Registration Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಈ ಕೆಳಗಿನ ಹಂತಗಳನ್ನು ಅನುಸರಿಸಿ ಅರ್ಜಿದಾರರು ತಾವಿರುವ ಸ್ಥಳದಿಂದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Step-1: ಮೊದಲಿಗೆ ಸಾರ್ವಜನಿಕರು ಈ Marriage Registration Online Application ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರ್ಕಾರದ ಅಧಿಕೃತ ಕಾವೇರಿ ತಂತ್ರಾಂಶವನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Property Registration Rules-ಆಸ್ತಿ ನೋಂದಣಿಗೆ ಹೊಸ ನಿಯಮ ತಪ್ಪದೇ ಈ ಮಾಹಿತಿ ತಿಳಿಯಿರಿ!

Marriage Registration

Step-2: ನಂತರ ಈ ಪೇಜ್ ನಲ್ಲಿ ನೀವು ಹೊಸ ಬಳಕೆದಾರರಾಗಿದ್ದರೆ "Register" ಬಟನ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ವೈಯಕ್ತಿಕ ವಿವರ ಮತ್ತು ಮೊಬೈಲ್ ಸಂಖ್ಯೆ ನೀಡಿ ಹೊಸ ಖಾತೆ ತೆರೆಯಿರಿ.

Step-3: ಬಳಿಕ ಇಲ್ಲಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಬಳಕೆದಾರ ಐಡಿ (User ID) ಮತ್ತು ಪಾಸ್‌ವರ್ಡ್ ಅನ್ನು ಬಳಸಿ ಲಾಗಿನ್ ಆಗಿ.

Step-4: ಲಾಗಿನ್ ಆದ ನಂತರ 'Marriage Registration' ಆಯ್ಕೆಯನ್ನು ಆರಿಸಿ, ವಧು-ವರರ ವಿವರಗಳನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

Step-5: ಎಲ್ಲಾ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿ 'Submit' ಬಟನ್ ಒತ್ತಿರಿ.

ಇದನ್ನೂ ಓದಿ: SSLC Prize Money-ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಭರ್ಜರಿ ಕೊಡುಗೆ: ಲ್ಯಾಪ್‌ಟಾಪ್ ಬದಲು ₹50,000 ನಗದು ಬಹುಮಾನ!

ವಿವಾಹ ನೋಂದಣಿಗೆ ಸಮಯದ ಮಿತಿ ಇರುವುದಿಲ್ಲ:

ಹಿಂದೂ ಮತ್ತು ಪಾರ್ಸಿ ವಿವಾಹಗಳಿಗೆ ನೋಂದಣಿ ಮಾಡಿಕೊಳ್ಳಲು ಯಾವುದೇ ನಿರ್ದಿಷ್ಟ ಕಾಲಮಿತಿ ಇಲ್ಲ. ಮದುವೆಯಾದ ಎಷ್ಟು ವರ್ಷಗಳ ನಂತರವೂ ನೋಂದಣಿ ಮಾಡಿಸಬಹುದು.

For More Information-ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಉಪಯುಕ್ತ ಲಿಂಕ್ ಗಳು:

ವಿವಾಹ ನೋಂದಣಿ ಬಗ್ಗೆ ಪ್ರಶ್ನೋತ್ತರ- Click here
ಸಬ್-ರಿಜಿಸ್ಟಾರ್ ಕಚೇರಿಯ ಅಧಿಕೃತ ವೆಬ್ಸೈಟ್: Click here
ಸಹಾಯವಾಣಿ- 080-68265316

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: