Media Internship-ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ಗೆ ಅರ್ಜಿ! ತಿಂಗಳಿಗೆ ರೂ 20,000/- ಸ್ಟೈಪಂಡ್!

July 8, 2025 | Siddesh
Media Internship-ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ಗೆ ಅರ್ಜಿ! ತಿಂಗಳಿಗೆ ರೂ 20,000/- ಸ್ಟೈಪಂಡ್!
Share Now:

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ(Internships In Media Organizations) ಪ್ರಯೋಗಿಕವಾಗಿ ಕಲಿಕೆಯನ್ನು ಪಡೆಯಲು ಇಂಟರ್ನ್‍ಶಿಪ್‍ ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಏನಿದು ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍(Internship Program Application) ಕಾರ್ಯಕ್ರಮ? ಯಾರೆಲ್ಲ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಇನ್ನಿತರೆ ಅವಶ್ಯಕ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದ್ದು ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

ಇದನ್ನೂ ಓದಿ: Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

ಕರ್ನಾಟಕ ಮಾಧ್ಯಮ ಅಕಾಡೆಮಿಯು(Karnataka Media Academy) ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್ ಅವಕಾಶ ಕಲ್ಪಿಸಿದೆ.

Internship Program In Media Organizations-ಏನಿದು ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ ಕಾರ್ಯಕ್ರಮ?

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಅಥವಾ ಆರಂಭಿಕ ವೃತ್ತಿಪರರಿಗೆ ಮಾಧ್ಯಮ ಕ್ಷೇತ್ರದಲ್ಲಿ ವಾಸ್ತವಿಕ ಅನುಭವವನ್ನು ಒದಗಿಸುವ ಒಂದು ತಾತ್ಕಾಲಿಕ ಕೆಲಸದ ಅವಕಾಶವಾಗಿದೆ.

ಇದು ಮಾಧ್ಯಮ ಸಂಸ್ಥೆಗಳಾದ ದಿನಪತ್ರಿಕೆ, ಟೆಲಿವಿಷನ್, ರೇಡಿಯೊ, ಡಿಜಿಟಲ್ ಮಾಧ್ಯಮ, ಅಥವಾ ಪತ್ರಿಕೋದ್ಯಮ, ಸಂಪಾದನೆ, ವಿಷಯ ರಚನೆ, ಛಾಯಾಗ್ರಹಣ, ವಿಡಿಯೋ ತಯಾರಿಕೆ, ಸಾಮಾಜಿಕ ಮಾಧ್ಯಮ ನಿರ್ವಹಣೆ ಮುಂತಾದ ಕ್ಷೇತ್ರಗಳಲ್ಲಿ ಕೌಶಲ್ಯಗಳನ್ನು ಕಲಿಯಲು ಮತ್ತು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Artists Pension Scheme-ಕಲಾವಿದರ ಮಾಸಾಶನ 2,000 ದಿಂದ 2,500 ಕ್ಕೆ ಹೆಚ್ಚಿಸಿ ಆದೇಶ ಪ್ರಕಟ!

Who Can Apply-ಅರ್ಜಿ ಸಲ್ಲಿಸಲು ಅರ್ಹರು:

ಅರ್ಜಿದಾರರ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ: Ration Card eKYC-ರೇಶನ್ ಕಾರ್ಡ ಇ-ಕೆವೈಸಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Internship Program In Media

Monthly Stipend Amount-ತಿಂಗಳಿಗೆ ರೂ 20,000/- ರೂ. ಸ್ಟೈಪಂಡ್:

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಪ್ರಸ್ತುತ ಅರ್ಜಿಯನ್ನು ಆಹ್ವಾನಿಸಿರುವ ಇಂಟರ್ನ್‍ಶಿಪ್‍ ಕಾರ್ಯಕ್ರಮಕ್ಕೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಅಕಾಡೆಮಿಯಿಂದ ಪ್ರತಿ ತಿಂಗಳಿಗೆ ರೂ 20,000/- ರೂ. ಸ್ಟೈಪಂಡ್ ಅನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Internship Program Selection Procces-ಅಭ್ಯರ್ಥಿಗಳು ಆಯ್ಕೆ ಮಾಡುವ ವಿಧಾನ:

ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಹಾಗೂ ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ. ಎಂದು ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ತಿಳಿಸಿದ್ದಾರೆ.

ಇದನ್ನೂ ಓದಿ: GKVK Diploma Agriculture-ಬೆಂಗಳೂರು ಕೃಷಿ ವಿವಿಯಿಂದ ಡಿಪ್ಲೊಮಾ ಕೃಷಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

Internship Program In Media-ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್‍ಶಿಪ್ ಅವಕಾಶ:

ಮಹಿಳಾ ಆಯವ್ಯಯದಡಿ 10 ಮಹಿಳೆಯರು,
ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು
ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್‍ಶಿಪ್ ಅವಕಾಶ ಕಲ್ಪಿಸಲಾಗುವುದು ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Media Internship Programe-ಒಟ್ಟು ಎರಡು ತಿಂಗಳ ಇಂಟರ್ನ್‍ಶಿಪ್‍ ಕಾರ್ಯಕ್ರಮ:

ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟನ್ರ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್‍ಶಿಪ್‍ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ.

ಇದನ್ನೂ ಓದಿ: Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಜಿ ಸಲ್ಲಿಸಲು 2025 ರ ಜುಲೈ 25 ಕೊನೆಯ ದಿನವಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಶ್ರೀಮತಿ ಸಹನಾ ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How To Apply-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಈ ಗೂಗಲ್ ಪಾರ್ಮ್ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

Ducuments For Application-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

ಅಭ್ಯರ್ಥಿಗಳು ಗೂಗಲ್ ಪಾರ್ಮ್ ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

  • ವಿದ್ಯಾರ್ಥಿಯ ಆಧಾರ್ ಕಾರ್ಡ(Aadhar card)
  • ವಿದ್ಯಾಭ್ಯಾಸ ಅಂಕಪಟ್ಟಿ(Marks Card)
  • ಜಾತಿ ಪ್ರಮಾಣ ಪತ್ರ(( Only Sc/ST/OBC)
  • Resume
  • ಆಧಾರ್ ಕಾರ್ಡ್ / ವೋಟರ್ ಐಡಿ / ಜನನ ಪ್ರಮಾಣಪತ್ರ / ಎಸ್ ಎಸ್ ಎಲ್ ಸಿ ಅಂಕ ಪತ್ರ
  • Aadhar Card/ voter ID/ Birth Certificate/ SSLC Marks Card
  • ಮೊಬೈಲ್ ನಂಬರ್

For More Information-ಹೆಚ್ಚಿನ ಮಾಹಿತಿಗಾಗಿ:

ಕರ್ನಾಟಕ ಮಾಧ್ಯಮ ಅಕಾಡೆಮಿ ವೆಬ್ಸೈಟ್- Click Here
ಕಚೇರಿ ವಿಳಾಸ: ಕರ್ನಾಟಕ ಮಾಧ್ಯಮ ಅಕಾಡೆಮಿ,
ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ
ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001
ದೂರವಾಣಿ: 080- 22860164

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: