Military College Application-ಮಿಲಿಟರಿ ಕಾಲೇಜ್ 8ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

February 13, 2026 | Siddesh
Military College Application-ಮಿಲಿಟರಿ ಕಾಲೇಜ್ 8ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!
Share Now:

ದೇಶದ ರಕ್ಷಣಾ ಪಡೆಯಲ್ಲಿ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಅವಕಾಶ. ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ಪ್ರತಿಷ್ಠಿತ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ (RIMC) ತನ್ನ ಜನವರಿ 2027ರ ಅಧಿವೇಶನದ 8ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕದ ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿಗಳನ್ನು(Military College Application) ಆಹ್ವಾನಿಸಿದೆ. ಮಿಲಿಟರಿ ಶಿಸ್ತು ಮತ್ತು ಅತ್ಯುನ್ನತ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿರುವ ಈ ಸಂಸ್ಥೆಯಲ್ಲಿ ಕಲಿಯುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಹೆಮ್ಮೆಯ ವಿಷಯವಾಗಿದೆ.

ಈ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯನ್ನು 2026ರ ಜೂನ್ 07 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶೈಕ್ಷಣಿಕ ಪರಿಸರದೊಂದಿಗೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾದ ತರಬೇತಿಯನ್ನು(Military College Admission) ನೀಡಲಾಗುತ್ತದೆ. ಈ ಪ್ರತಿಷ್ಠಿತ ಸಂಸ್ಥೆಯಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರ ನಿರ್ದೇಶಕರಾದ ನಿವೃತ್ತ ಫ್ಲೈಟ್ ಲೆಫ್ಟಿನೆಂಟ್ ಎಮ್.ಎಸ್. ಲೋಲಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

ಡೆಹರಾಡೂನ್‌ನಲ್ಲಿರುವ ಪ್ರತಿಷ್ಠಿತ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ನಲ್ಲಿ(Military College) ವ್ಯಾಸಂಗ ಮಾಡಲು ಪ್ರವೇಶವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Military College Admission Eligibility-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಆರ್ಮಿ ಸ್ಕೋಲ್ ನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಪಟ್ಟಿ ಈ ಕೆಳಗಿನಂತಿದೆ:

01-01-2027 ರಂತೆ ಅಭ್ಯರ್ಥಿಯ ವಯಸ್ಸು 11 ವರ್ಷ 6 ತಿಂಗಳಿಂದ 13 ವರ್ಷದೊಳಗಿರಬೇಕು.

ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ ಪ್ರಸ್ತುತ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ 7ನೇ ತರಗತಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ರಾಜ್ಯದ ಅರ್ಹ ಬಾಲಕ ಮತ್ತು ಬಾಲಕಿಯರಿಬ್ಬರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.

ಇದನ್ನೂ ಓದಿ: Goods Vehicle Subsidy-ಗೂಡ್ಸ್ ವಾಹನ ಖರೀದಿ ಮಾಡಲು 3 ಲಕ್ಷ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

How To Apply For Military College Admission-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆ ಮತ್ತು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ "ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ್, ನಂ.58, ಫೀಲ್ಡ್ ಮಾರ್ಷಲ್ ಕೆ.ಎಮ್. ಕಾರ್ಯಪ್ಪ ರಸ್ತೆ, ಬೆಂಗಳೂರು - 25" ವಿಳಾಸಕ್ಕೆ ಕಳುಹಿಸಿ.

Military College Application Download Link-ಅರ್ಜಿ ನಮೂನೆಯನ್ನು ಪಡೆಯುವ ವಿಧಾನ:

ವಿದ್ಯಾರ್ಥಿಗಳು ನಿಗದಿತ ಶುಲ್ಕವನ್ನು ಪಾವತಿ ಮಾಡಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಡೌನ್ಲೋಡ್ ಮಾಡಿಕೊಳ್ಳಬಹುದು.

Step-1: ವಿದ್ಯಾರ್ಥಿಗಳು ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Military College Admission

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಮುಖಪುಟದಲ್ಲಿ ಕೆಳಗೆ ಕಾಣಿಸುವ "ONLINE PAYMENT FOR RIMC PROSPECTUS AND APPLICATION FORM FOR RIMC ENTRANCE EXAM" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣಿಸುವ "Pay&Submit" ಬಟನ್ ಮೇಲೆ ಕ್ಲಿಕ್ ಮಾಡಿ ಬಳಿಕ ನೀವು ಇಲ್ಲಿ ನಮೂದಿಸಿರುವ ವಿಳಾಸಕ್ಕೆ ಅಂಚೆ ಮೂಲಕ ಸ್ಪೀಡ್ ಪೋಸ್ಟ್ ನಲ್ಲಿ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ರವಾನಿಸಲಾಗುತ್ತದೆ.

ಇದನ್ನೂ ಓದಿ: Free Menstrual Cup-ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ಹಾಗೂ ಮುಟ್ಟಿನ ಕಪ್!

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು 2026ರ ಏಪ್ರಿಲ್ 05 ಕೊನೆಯ ದಿನಾಂಕವಾಗಿದೆ.

Application fee-ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ- ರೂ.600/-
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ-ರೂ.555/-

Required Documents For Military College Admission-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಆರ್ಮಿ ಸ್ಕೂಲ್ (RIMC) ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳ ದೃಢೀಕೃತ ಪ್ರತಿಗಳನ್ನು (Attested Copies) ದ್ವಿಪ್ರತಿಯಲ್ಲಿ (Two sets) ಲಗತ್ತಿಸಿ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿ:

ಜನ್ಮ ಪ್ರಮಾಣ ಪತ್ರ: ಮುನ್ಸಿಪಾಲಿಟಿ ಅಥವಾ ಗ್ರಾಮ ಪಂಚಾಯತ್ ಪ್ರಾಧಿಕಾರದಿಂದ ಆಂಗ್ಲ ಭಾಷೆಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ಪ್ರತಿ.

ಇದನ್ನೂ ಓದಿ: Grama Sahayaka Pension-ಕಂದಾಯ ಇಲಾಖೆಯ ಗ್ರಾಮ ಸಹಾಯಕರಿಗೆ ರೂ. 5.00 ಲಕ್ಷ ಇಡಿಗಂಟು ಸೌಲಭ್ಯಕ್ಕೆ ಆದೇಶ ಪ್ರಕಟ!

ಶಾಲಾ ಪ್ರಮಾಣ ಪತ್ರ (Original): ಶಾಲಾ ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಪ್ರಸ್ತುತ ಓದುತ್ತಿರುವ ತರಗತಿಯ ಬಗ್ಗೆ ದೃಢೀಕರಿಸಿದ, ಅಭ್ಯರ್ಥಿಯ ಭಾವಚಿತ್ರವಿರುವ ಪ್ರಮಾಣ ಪತ್ರದ ಮೂಲ ಪ್ರತಿ.

ಜಾತಿ ಪ್ರಮಾಣ ಪತ್ರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಾಗಿದ್ದಲ್ಲಿ, ಸಕ್ಷಮ ಪ್ರಾಧಿಕಾರದಿಂದ ಆಂಗ್ಲ ಭಾಷೆಯಲ್ಲಿ ನೀಡಿದ ಜಾತಿ ಪ್ರಮಾಣ ಪತ್ರದ ಪ್ರತಿ.

ವಾಸಸ್ಥಳ ದೃಢೀಕರಣ ಪತ್ರ: ತಹಶೀಲ್ದಾರರಿಂದ ಪಡೆದ ಕರ್ನಾಟಕ ರಾಜ್ಯದ ವಾಸಸ್ಥಳ ದೃಢೀಕರಣ ಪತ್ರ (Domicile Certificate).

ಆಧಾರ್ ಕಾರ್ಡ್: ಅಭ್ಯರ್ಥಿಯ ಆಧಾರ್ ಕಾರ್ಡ್‌ನ ಪ್ರತಿ.

ಇದನ್ನೂ ಓದಿ: Property Rights-ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಎಷ್ಟು ಪಾಲಿದೆ? ಇಲ್ಲಿದೆ ಅಗತ್ಯ ಮಾಹಿತಿ!

ಭಾವಚಿತ್ರಗಳು: 4 ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳು.

ಸ್ವ-ವಿಳಾಸದ ಲಕೋಟೆ: ಪರೀಕ್ಷಾ ಪ್ರವೇಶ ಪತ್ರವನ್ನು ಕಳುಹಿಸಲು ಅಂಚೆ ಚೀಟಿ ಅಂಟಿಸಿದ ಸ್ವ-ವಿಳಾಸವಿರುವ ಲಕೋಟೆ (ಬೆಂಗಳೂರು ನಗರದವರಿಗೆ ರೂ. 23/- ಮತ್ತು ಹೊರ ಜಿಲ್ಲೆಯವರಿಗೆ ರೂ. 56/- ರ ಅಂಚೆ ಚೀಟಿ).

For More Information-ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಅಥವಾ ಸಮೀಪದಲ್ಲಿರುವ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರ ನಿರ್ದೇಶಕರಾದ ನಿವೃತ್ತ ಫ್ಲೈಟ್ ಲೆಫ್ಟಿನೆಂಟ್ ಎಮ್ ಎಸ್ ಲೋಲಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Military College Admission Notification-ಅಧಿಕೃತ ಪ್ರಕಟಣೆ ಪ್ರತಿಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ- Download Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: