HomeNew postsMillets mela bangalore-2024: ಬೆಂಗಳೂರು ಸಿರಿದಾನ್ಯ ಮೇಳ-2024, ಸಿರಿದಾನ್ಯ ಬೆಳೆಯುವ ರೈತರಿಗೆ ಯಾವೆಲ್ಲ ಯೋಜನೆಯಡಿ ಸಹಾಯಧನ...

Millets mela bangalore-2024: ಬೆಂಗಳೂರು ಸಿರಿದಾನ್ಯ ಮೇಳ-2024, ಸಿರಿದಾನ್ಯ ಬೆಳೆಯುವ ರೈತರಿಗೆ ಯಾವೆಲ್ಲ ಯೋಜನೆಯಡಿ ಸಹಾಯಧನ ಸಿಗಲಿದೆ.

ಸಿರಿಧಾನ್ಯ ಮತ್ತು ಸಾವಯವ 2024 ಅಂತರರಾಷ್ಟ್ರೀಯ ವಾಣಿಜ್ಯ ಮೇಳವನ್ನು(Millets mela bangalore-2024) ಜನವರಿ 05 ರಿಂದ 07 ರವರೆಗೆ , ತ್ರಿಪುರವಾಸಿನಿ, ಅರಮನೆ ಮೈದಾನ, ಬೆಂಗಳೂರುನಲ್ಲಿ ಆಯೋಜನೆ ಮಾಡಲಾಗಿದ್ದು ಇಂದು ಕೊನೆಯ ದಿನವಾಗಿದೆ. ಸಿರಿಧಾನ್ಯ ಬೆಳೆಯುವ ಮತ್ತು ಬಳಕೆ ಮಾಡುವವರಿಗೆ ಯಾವೆಲ್ಲ ಪ್ರಯೋಜನಗಳು ಸಿಗಲಿವೆ ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ.

ಸಿರಿಧಾನ್ಯ ಮತ್ತು ಸಾವಯವ 2024-ಅಂತರರಾಷ್ಟ್ರೀಯ ವಾಣಿಜ್ಯ ಮೇಳದ ಐದನೇ ಆವೃತ್ತಿಯನ್ನು ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಆಯೋಜಿಸಲಾಗಿದೆ. ಈ ಮೇಳವು ಕೃಷಿ, ತೋಟಗಾರಿಕೆ, ಸಂಸ್ಕರಣೆ, ಯಂತ್ರೋಪಕರಣಗಳು ಮತ್ತು ಕೃಷಿ ತಾಂತ್ರಿಕತೆಗೆ ಸಂಬಂಧಿಸಿದಂತೆ ರೈತರು, ರೈತ ಗುಂಪುಗಳು, ದೇಶೀಯ ಮತ್ತು ಅಂತರರಾಷ್ಟ್ರೀಯ ಕಂಪನಿಗಳು, ಸಾವಯವ ಮತ್ತು ಸಿರಿಧಾನ್ಯ ವಲಯದ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳನ್ನು ಒಗ್ಗೂಡಿಸುವ ಮತ್ತು ಅವಕಾಶಗಳನ್ನು ಕಲ್ಪಿಸುವ ವೇದಿಕೆಯಾಗಿದೆ.

ಇದನ್ನೂ ಓದಿ: Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ?

ಜಗತ್ತಿನಲ್ಲಿ ಕೋವಿಡ್ ಸಾಂಕ್ರಾಮಿಕದ ನಂತರ ಸಾವಯವ ಕೃಷಿ ಮತ್ತು ಆಹಾರ ಉದ್ಯಮ ಪ್ರಮುಖ ಉತ್ತೇಜನವನ್ನು ಕಂಡಿದೆ. ಕೋವಿಡ್ ನಿಂದಾಗಿ ಅಸ್ತವ್ಯಸ್ತವಾದ ಪೂರೈಕೆ ಸರಪಳಿಗಳು ಮತ್ತು ರೈತರ ಸಂಕಷ್ಟದ ನಡುವೆಯೂ ಸಹ, ಭಾರತದಲ್ಲಿ ಸುಮಾರು 360,000 ಹೆಕ್ಟೇ‌ರ್ ಪ್ರದೇಶವು ಸಾವಯವಕ್ಕೆ ಪರಿವರ್ತನೆಯಾಗಿದ್ದು, ಇದು ಉತ್ತಮ ಬೆಳವಣಿಗೆಯಾಗಿದೆ.

ಕರ್ನಾಟಕ ಸರ್ಕಾರವು 2017 ರಲ್ಲಿ ನಡೆದ ಮೊದಲ ರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಆಯೋಜನೆಯಿಂದ ಸಾವಯವ ಮತ್ತು ಸಿರಿಧಾನ್ಯಗಳ ಪ್ರಚಾರದಲ್ಲಿ ಮುಂಚೂಣಿಯಲ್ಲಿರುತ್ತದೆ. ನಂತರ 2018, 2019 ಮತ್ತು 2023 ರಲ್ಲಿ ಕ್ರಮವಾಗಿ ಅಂತರರಾಷ್ಟ್ರೀಯ ಮಟ್ಟದ ಎರಡನೇ, ಮೂರನೇ ಮತ್ತು ನಾಲ್ಕನೇ ಆವೃತ್ತಿಗಳನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುತ್ತದೆ.

ಇದನ್ನೂ ಓದಿ: Disabled Welfare Yojana-ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ!

Millets- ಸಿರಿದಾನ್ಯ ಬೆಳೆಯುವ ರೈತರಿಗೆ ಯಾವೆಲ್ಲ ಯೋಜನೆಯಡಿ ಸಹಾಯಧನ ಸಿಗಲಿದೆ.

(1) ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ: ರೂ 10,000

ರಾಜ್ಯದ ಸಿರಿಧಾನ್ಯ ಕ್ಷೇತ್ರವನ್ನು ವಿಸ್ತರಿಸುವ ನಿಟ್ಟಿನಲ್ಲಿ “ರೈತ ಸಿರಿ” ಯೋಜನೆಯಡಿ ಪ್ರಮುಖ ಸಿರಿಧಾನ್ಯಗಳಾದ ನವಣೆ, ಸಾಮೆ, ಊದಲು, ಹಾರಕ, ಕೊರಲೆ, ಮತ್ತು ಬರಗು ಬೆಳೆಗಳನ್ನು ಬೆಳೆಯಲು ಉತ್ತೇಜಿಸಲಾಗುತ್ತಿದೆ.

“ರೈತ ಸಿರಿ” ಯೋಜನೆಯನ್ನು 2019-20 ನೇ ಸಾಲಿನಿಂದ ಪ್ರಾರಂಭಿಸಿದ್ದು ಇಲ್ಲಿಯವರೆವಿಗೆ ಒಟ್ಟು 1,00,604 ರೈತರಿಗೆ 81.54 ಕೋಟಿ ರೂಗಳ ಪ್ರೋತ್ಸಾಹಧನ ಪಾವತಿಸಲಾಗಿದೆ.

ಈ ಯೋಜನೆಯಡಿ ಕೃಷಿ ಇಲಾಖೆಯಿಂದ ಬೆಳೆ ಸಮೀಕ್ಷೆ ಆಧಾರದ ಮೇರೆಗೆ ಸಿರಿಧಾನ್ಯಗಳನ್ನು ಬೆಳೆಯುವ ರೈತರಿಗೆ ನೇರ ನಗದು ವರ್ಗಾವಣೆ ಮೂಲಕ ಪ್ರತಿ ಹೆಕ್ಟೇರ್ ಗೆ ರೂ. 10,000/- ಗಳಂತೆ ಗರಿಷ್ಠ 2 ಹೆಕ್ಟೇರ್ ಗಳಿಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.

2023 ಮುಂಗಾರು ಹಂಗಾಮಿನಲ್ಲಿ ರಾಗಿ 21,840 ಕ್ವಿಂಟಾಲ್ , ಸಜ್ಜೆ 998 ಕ್ವಿಂಟಾಲ್, ಜೋಳ 132 ಕ್ವಿಂಟಾಲ್, ನವಣೆ 53 ಕ್ವಿಂಟಾಲ್ ಬಿತ್ತನೆ ಬೀಜವನ್ನು ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ರೈತರಿಗೆ ವಿತರಿಸಲಾಗಿದೆ.

ಇದನ್ನೂ ಓದಿ: Gruhalakshmi new application: ಗ್ರಾಮ ಒನ್ ನಲ್ಲಿ ಹೊಸ ಗೃಹಲಕ್ಷ್ಮಿ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ!

(2) ಸಿರಿಧಾನ್ಯ ಸಂಸ್ಕರಣೆಗೆ ಉತ್ತೇಜನ:

ಕೃಷಿ ಇಲಾಖೆಯಿಂದ ಸಿರಿಧಾನ್ಯಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ರೈತರು, ಸಂಸ್ಕರಣೆದಾರರು, ಮಾರಾಟಗಾರರು ಮತ್ತು ಗ್ರಾಹಕರಲ್ಲಿ ಅರಿವು ಮೂಡಿಸುವ ಮೂಲಕ ರಾಜ್ಯದಲ್ಲಿ ಸಿರಿಧಾನ್ಯ ಪ್ರದೇಶವನ್ನು ವಿಸ್ತರಿಸಲು 2019 ರಿಂದ ಸಿರಿಧಾನ್ಯಗಳನ್ನು ಬೆಳೆಯಲು ಉತ್ತೇಜನ ನೀಡುತ್ತಿದೆ.

ಇದಲ್ಲದೆ, ಆಧುನಿಕ ಸಂಸ್ಕರಣಾ ಸೌಲಭ್ಯಗಳ ಕೊರತೆಯನ್ನು ಗುರುತಿಸಿ, ರಾಜ್ಯದಲ್ಲಿ ಬೆಳೆದ ಸಿರಿಧಾನ್ಯಗಳಿಗೆ ಮಾರುಕಟ್ಟೆ ಸಂಪರ್ಕವನ್ನು ಸುಗಮಗೊಳಿಸುವುದರ ಜೊತೆಗೆ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಯನ್ನು ಬೆಂಬಲಿಸಲಾಗುತ್ತಿದೆ.

ಈ ಯೋಜನೆಯಡಿ ಸಿರಿಧಾನ್ಯ ಸಂಸ್ಕರಣೆ ಘಟಕ ಸ್ಥಾಪನೆ ಮಾಡುವ ರೈತರಿಗೆ ಸಹಾಯಧನ ನೀಡಲಾಗಿತ್ತದೆ.

ಸಿರಿಧಾನ್ಯ ಬೆಳೆಯ ಪ್ರಯೋಜನಗಳು:

1) ರೈತರಿಗೆ ಲಾಭದಾಯಕ: ಸಿರಿಧಾನ್ಯಗಳು ಬಹು ಉಪಯೋಗಗಳನ್ನು (ಆಹಾರ, ಮೇವು, ಇಂಧನ) ಹೊಂದಿದ್ದು, ಸಾಮಾನ್ಯವಾಗಿ ಬರಗಾಲದ ಸಮಯದಲ್ಲಿ ಕೊನೆಯ ಬೆಳೆಯಾಗಿ ಸಹ ರೈತರಿಗೆ ಉತ್ತಮ ಅಪಾಯ ನಿರ್ವಹಣೆ ತಂತ್ರವಾಗಿವೆ.

2) ಗ್ರಾಹಕರಿಗೆ ಉತ್ತಮ: ಸಿರಿಧಾನ್ಯಗಳು ಪೌಷ್ಟಿಕಾಂಶ ಮತ್ತು ಆರೋಗ್ಯ ಸಮಸ್ಯೆಗಳನ್ನು (ಕಬ್ಬಿಣ, ಸತು, ಪೋಲಿಕ್ ಆಮ್ಲ, ಕ್ಯಾಲ್ಸಿಯಂ ಕೊರತೆ, ಮಧುಮೇಹ ಮತ್ತು ಇತರೆ) ನಿವಾರಿಸುವ ಶಕ್ತಿಯನ್ನು ಹೊಂದಿರುತ್ತವೆ.

ಇದನ್ನೂ ಓದಿ: life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

3) ಪರಿಸರಕ್ಕೆ ಒಳ್ಳೆಯದು: ಸಿರಿಧಾನ್ಯಗಳು ಕಡಿಮೆ ನೀರಿನ ಹೆಜ್ಜೆಗುರುತನ್ನು ಹೊಂದಿರುವುದರಿಂದ ಹಾಗೂ ಅತ್ಯಂತ ಶುಷ್ಕ ವಾತಾವರಣದಲ್ಲಿಯೂ ಬದುಕಬಲ್ಲವು ಮತ್ತು ಹವಾಮಾನ ಬದಲಾವಣೆಯನ್ನು ನಿಭಾಯಿಸುವಲ್ಲಿ ಶಕ್ತಿಯನ್ನು ಹೊಂದಿರುತ್ತವೆ.

ಸಿರಿದಾನ್ಯ ಮೇಳದ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ: click here 

Most Popular

Latest Articles

Related Articles