Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

June 15, 2025 | Siddesh
Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
Share Now:

ನಿರುದ್ಯೋಗಿಗಳಿಗೆ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಸ್ವಂತ ಉದ್ಯೋಗವನ್ನು ಆರಂಭಿಸಲು ಪ್ರವಾಸೋದ್ಯಮ ಇಲಾಖೆಯಿಂದ(Karnataka Tourism department)ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನವನ್ನು(Mobile Canteen Subsidy) ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಮೊಬೈಲ್ ಕ್ಯಾಂಟಿನ್(Mobile Canteen Subsidy)ಗೆ ಗರಿಷ್ಟ ₹5 ಲಕ್ಷದವರೆಗೆ ಸಬ್ಸಿಡಿಯನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಲು ಅವಕಾಶವಿದ್ದು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರಸ್ತುತ ಇಲಾಖೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: Finance Scholorship-ಫೈನಾನ್ಸ್ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

ಮೊಬೈಲ್ ಕ್ಯಾಂಟಿನ್ ಆರಂಭಿಸಲು ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Mobile Canteen business -ಹೆಚ್ಚು ಬೇಡಿಕೆ ಇರುವ ಕ್ಷೇತ್ರ:

ದಿನೇ ದಿನೇ ಏರುತ್ತಿರುವ ಜನ ಸಂಖ್ಯೆಗೆ ಅನುಗುಣವಾಗಿ ಆಹಾರ ಪದಾರ್ಥಗಳ ಮಾರಾಟ ಉದ್ದಿಮೆಯಲ್ಲಿ ಉತ್ತಮ ಅವಕಾಶಗಳು ಸೃಷ್ಟಿಯಾಗುತ್ತಿದ್ದು ಇದಕ್ಕೆ ಪೂರಕ ಎನ್ನುವಂತೆ ಮೊಬೈಲ್ ಕ್ಯಾಂಟಿನ್ ಉದ್ದಿಮೆಯು ಸಹ ಉತ್ತಮ ಆದಾಯ ತಂದುಕೊಡುವ ಕ್ಷೇತ್ರವಾಗಿದ್ದು ನಿರುದ್ಯೋಗಿ ಯುವ ಜನರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: Cow mat Subsidy-50% ಸಬ್ಸಿಡಿಯಲ್ಲಿ ಕೌ ಮ್ಯಾಟ್ ಪಡೆಯಲು ಅರ್ಜಿ ಆಹ್ವಾನ!

Mobile Canteen Subsidy Scheme-ಯೋಜನೆಯ ವಿವರ:

ಜಿಲ್ಲೆಗಳಲ್ಲಿ ಅನುದಾನ ಲಭ್ಯತೆಯ ಆಧಾರದ ಮೇಲೆ ಪ್ರವಾಸೋದ್ಯಮ ಇಲಾಖೆಯಿಂದ(Tourism Department Subsidy Scheme) ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ/ಕೌಶಲ್ಯ ತರಬೇತಿ ಹಾಗೂ ತರಬೇತಿ ಪಡೆದ ಬಳಿಕ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ಉದ್ದಿಮೆಯನ್ನು ಆರಂಭಿಸಲು ಸಬ್ಸಿಡಿಯನ್ನು ಈ ಯೋಜನೆಯಡಿ ಒದಗಿಸಲಾಗುತ್ತದೆ.

Mobile Canteen Subsidy Amount-ಎಷ್ಟು ಸಬ್ಸಿಡಿ ಒದಗಿಸಲಾಗುತ್ತದೆ:

ಇಲಾಖೆಯಿಂದ ಈ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟಿನ್ ಅನ್ನು ಪ್ರಾರಂಭಿಸಲು ಒಟ್ಟು ಘಟಕ ವೆಚ್ಚಕ್ಕೆ ಶೇ 70 ರಷ್ಟು ಗರಿಷ್ಥ 5 ಲಕ್ಷದ ವರೆಗೆ ಸಬ್ಸಿಡಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

Mobile Canteen Subsidy scheme

Who Can Apply For Mobile Canteen Subsidy-ಅರ್ಜಿ ಸಲ್ಲಿಸಲು ಅರ್ಹರು:

ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅಭ್ಯರ್ಥಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದವರಾಗಿರಬೇಕು.

ಅಭ್ಯರ್ಥಿಯು ಕನಿಷ್ಥ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು.

ಅಭ್ಯರ್ಥಿಯು ವಯಸ್ಸು 20 ರಿಂದ 45 ವರ್ಷದೊಳಗಿರಬೇಕು.

ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿ ಪಡೆದಿರಬೇಕು.

ಅಭ್ಯರ್ಥಿಯು ನಗರ ಪ್ರದೇಶದವರಾಗಿದ್ದರೆ ಕುಟುಂಬದ ವಾರ್ಷಿಕ ಆದಾಯ ₹2 ಲಕ್ಷ ಮಿತಿಯೊಳಗಿರಬೇಕು.

ಗ್ರಾಮಾಂತರ ಪ್ರದೇಶದ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯಯು ₹1.50 ಲಕ್ಷದ ಮಿತಿಯೊಳಗಿರಬೇಕು.

ಅರ್ಜಿದಾರ ಅಭ್ಯರ್ಥಿಯು ಅಥವಾ ಕುಟುಂಬದವರು ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.

ಇದನ್ನೂ ಓದಿ: PM Kusum Yojana-ಹಗಲು ವೇಳೆಯಲ್ಲಿಯೇ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಗೆ ನೂತನ ಯೋಜನೆ!

Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಮೊಬೈಲ್ ಕ್ಯಾಂಟಿನ್ ತರಬೇತಿ ಮತ್ತು ಸಬ್ಸಿಡಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಸಲ್ಲಸಲು ಈ ಕೆಳಗೆ ತಿಳಿಸಿರುವ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿದೆ.

  • ಅರ್ಜಿ ನಮೂನೆ(ಇಲಾಖೆಯ ಕಚೇರಿಯಲ್ಲಿ ಪಡೆಯಬೇಕು).
  • ಅರ್ಜಿದಾರರ ಆಧಾರ್ ಕಾರ್ಡ.
  • ಪೋಟೋ.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
  • ಲಘುವಾಹನ ಚಾಲನಾ ಪರವಾನಗಿ ಪತ್ರ.
  • ಕನಿಷ್ಠ ಎಸ್ಎಸ್ಎಲ್ಸಿ ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಪ್ರತಿ.
  • ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆ, ನಿಗಮ, ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರದ ಬಗ್ಗೆ ಸ್ವಯಂ ಪ್ರಮಾಣೀಕರಿಸಿ, ರೂ.50/-ರ ಬೆಲೆಯ ಛಾಪಾಕಾಗದ (ಅಫಿಡೇವಿಟ್)ದಲ್ಲಿ ನಮೂನೆ-3ರಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು.

ಇದನ್ನೂ ಓದಿ: Gold Loan-ಚಿನ್ನದ ಮೇಲೆ ಸಾಲ ಪಡೆಯಲು RBI ನಿಂದ ಹೊಸ ನಿಯಮ ಜಾರಿ!

ವಿಶೇಷ ಸೂಚನೆ: ಪ್ರಸ್ತುತ ದಾವಣೆಗೆರೆ ಜಿಲ್ಲೆಯಲ್ಲಿ ಈ ಯೋಜನೆಯಡಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇತರೆ ಜಿಲ್ಲೆಯ ಅರ್ಜಿದಾರರು ಒಮ್ಮೆ ನಿಮ್ಮ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಕಚೇರಿಯನ್ನು ಭೇಟಿ ಮಾಡಿ ಅರ್ಜಿ ಆಹ್ವಾನಿಸಿರುವುದರ ಕುರಿತು ಮಾಹಿತಿಯನ್ನು ಪಡೆದು ಅರ್ಜಿಯನ್ನು ಸಲ್ಲಿಸಬಹುದು ಇಲಾಖೆಯಲ್ಲಿನ ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ.

How to Apply For Mobile Canteen Subsidy-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಮೇಲೆ ತಿಳಿಸಿರುವ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಅರ್ಜಿಗನ್ನು ನಿಮ್ಮ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Share Now: