Mobile Canteen Subsidy-ಮೊಬೈಲ್ ಕ್ಯಾಂಟೀನ್ ಖರೀದಿಗೆ 5.0 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

February 25, 2026 | Siddesh
Mobile Canteen Subsidy-ಮೊಬೈಲ್ ಕ್ಯಾಂಟೀನ್ ಖರೀದಿಗೆ 5.0 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!
Share Now:

ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಮತ್ತು ಸ್ವಂತ ಉದ್ಯೋಗದ ಕನಸನ್ನು ನನಸಾಗಿಸಲು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು(Tourism Department Karnataka) ಭರ್ಜರಿ ಕೊಡುಗೆಯೊಂದನ್ನು ಹೊತ್ತು ತಂದಿದೆ. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ 'ಮೊಬೈಲ್ ಕ್ಯಾಂಟೀನ್' ಆರಂಭಿಸಲು ಬರೋಬ್ಬರಿ 5 ಲಕ್ಷ ರೂಪಾಯಿಗಳವರೆಗೆ ಸಹಾಯಧನ(Mobile Canteen Subsidy Scheme)ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸಿ ತಾಣಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಗುಣಮಟ್ಟದ ಆಹಾರ ಸೇವೆಯನ್ನು ಒದಗಿಸುವ ಮೂಲಕ ಉದ್ಯಮಶೀಲತೆಯನ್ನು ಉತ್ತೇಜಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಈ ಯೋಜನೆಯು ಕೇವಲ ಹಣಕಾಸಿನ ನೆರವು ನೀಡುವುದಕ್ಕೆ ಮಾತ್ರ ಸೀಮಿತವಾಗಿಲ್ಲ; ಬದಲಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉದ್ಯಮವನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಿರುವ ಒಂದು ತಿಂಗಳ ಕಾಲದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಸಹ ನೀಡಲಾಗುತ್ತದೆ. ತರಬೇತಿ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್(Mobile Canteen Subsidy Scheme Application)ವಾಹನ ಖರೀದಿಸಲು ಒಟ್ಟು ಘಟಕ ವೆಚ್ಚದ ಶೇಕಡಾ 70 ರಷ್ಟು ಅಥವಾ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಸಬ್ಸಿಡಿ ದೊರೆಯಲಿದೆ. ಇದು ಸ್ವಂತ ಕಾಲಿನ ಮೇಲೆ ನಿಲ್ಲ ಬಯಸುವ ಎಸ್‌ಸಿ/ಎಸ್‌ಟಿ ಸಮುದಾಯದ ಯುವಕರಿಗೆ ಉತ್ತಮ ವೇದಿಕೆಯಾಗಿದೆ.

ಇದನ್ನೂ ಓದಿ: Free Sewing Training-ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

ಪ್ರಸ್ತುತ ಚಿತ್ರದುರ್ಗ ಜಿಲ್ಲೆಯಲ್ಲಿ ಈ ಪ್ರಕ್ರಿಯೆ ಚುರುಕುಗೊಂಡಿದ್ದು, ಆಸಕ್ತರು(Mobile Canteen Subsidy) ಮಾರ್ಚ್ 13ರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಚಿತ್ರದುರ್ಗ ಜಿಲ್ಲೆಗೆ ಒಟ್ಟು 10 ಅಭ್ಯರ್ಥಿಗಳ ಗುರಿಯನ್ನು ನಿಗದಿಪಡಿಸಲಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿಯ 6 ಹಾಗೂ ಪರಿಶಿಷ್ಟ ಪಂಗಡದ 4 ಅಭ್ಯರ್ಥಿಗಳಿಗೆ ಅವಕಾಶವಿರುತ್ತದೆ. ಕೇವಲ ಚಿತ್ರದುರ್ಗ ಮಾತ್ರವಲ್ಲದೆ, ರಾಜ್ಯದ ಇತರೆ ಜಿಲ್ಲೆಗಳಲ್ಲೂ ಅನುದಾನದ ಲಭ್ಯತೆಗೆ ಅನುಗುಣವಾಗಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದ್ದು, ಅಭ್ಯರ್ಥಿಗಳು ತಮ್ಮ ಜಿಲ್ಲಾ ಪ್ರವಾಸೋದ್ಯಮ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Mobile Canteen Subsidy Amount-ಎಷ್ಟು ಸಬ್ಸಿಡಿ ನೀಡಲಾಗುತ್ತದೆ?

ಪ್ರವಾಸೋದ್ಯಮ ಇಲಾಖೆಯು ಎಸ್‌ಸಿಎಸ್‌ಪಿ (SCSP) ಮತ್ತು ಟಿಎಸ್‌ಪಿ (TSP) ಯೋಜನೆಯಡಿ ಮೊಬೈಲ್ ಕ್ಯಾಂಟಿನ್ ಮಾಡಲು ನಾಲ್ಕು ಚಕ್ರದ ವಾಹನವನ್ನು ಖರೀದಿ ಮಾಡಲು ಈ ಕೆಳಗೆ ತಿಳಿಸಿರುವ ಸಹಾಯಧನವನ್ನು ಒದಗಿಸಲಾಗುತ್ತದೆ:

ಸಹಾಯಧನ: ಮೊಬೈಲ್ ಕ್ಯಾಂಟೀನ್ ಘಟಕದ ಒಟ್ಟು ವೆಚ್ಚದಲ್ಲಿ 70% ರಷ್ಟು ಅಥವಾ ಗರಿಷ್ಠ ₹5,00,000/- ವರೆಗೆ ಸಬ್ಸಿಡಿ ಸಿಗಲಿದೆ.

ತರಬೇತಿ: ಆಯ್ಕೆಯಾದವರಿಗೆ ಉದ್ಯಮ ನಿರ್ವಹಣೆ ಕುರಿತು 1 ತಿಂಗಳ ವಿಶೇಷ ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ: Agniveer Recruitment-2026ರ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ!ಇಂದೇ ನೋಂದಣಿ ಮಾಡಿ!

Mobile Canteen Subsidy Scheme Application

ಇದನ್ನೂ ಓದಿ: Property Registration-ಕಾವೇರಿ 2.0 ತಂತ್ರಾಂಶ ಬಿಡುಗಡೆ! ಇನ್ಮುಂದೆ ಆಸ್ತಿ ನೋಂದಣಿ ಸಂಪೂರ್ಣ ಕಾಗದ ರಹಿತ!

Who Can Apply For Mobile Canteen Subsidy-ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

ಪ್ರವಾಸೋದ್ಯಮ ಇಲಾಖೆಯಿಂದ ಈ ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಈ ಕೆಳಗಿನ ಮಾನದಂಡಗಳನ್ನು ಕಡ್ಡಾಯವಾಗಿ ಹೊಂದಿರಬೇಕು.

ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಪರಿಶಿಷ್ಟ ಜಾತಿ (SC) ಅಥವಾ ಪರಿಶಿಷ್ಟ ಪಂಗಡಕ್ಕೆ (ST) ಸೇರಿದವರಾಗಿರಬೇಕು.

ಕನಿಷ್ಠ ಎಸ್‌ಎಸ್‌ಎಲ್‌ಸಿ (SSLC) ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ: Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ! ಯಾವೆಲ್ಲ ತಿದ್ದುಪಡಿ ಮಾಡಿಸಬಹುದು?

ಅರ್ಜಿದಾರ ಅಭ್ಯರ್ಥಿಯು 20 ರಿಂದ 45 ವರ್ಷದೊಳಗಿರಬೇಕು.

ಅರ್ಜಿದಾರರು ಕಡ್ಡಾಯವಾಗಿ ಲಘು ವಾಹನ ಚಾಲನಾ ಪರವಾನಗಿ (DL) ಹೊಂದಿರಬೇಕು.

ನಗರ ಪ್ರದೇಶದವರಾಗಿದ್ದರೆ ಕುಟುಂಬದ ವಾರ್ಷಿಕ ಆದಾಯ ₹2 ಲಕ್ಷದ ಒಳಗಿರಬೇಕು.

ಗ್ರಾಮೀಣ ಪ್ರದೇಶದವರಾಗಿದ್ದರೆ ವಾರ್ಷಿಕ ಆದಾಯ ₹1.50 ಲಕ್ಷದ ಒಳಗಿರಬೇಕು.

ಅರ್ಜಿದಾರರು ಅಥವಾ ಅವರ ಕುಟುಂಬದವರು ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.

ಇದನ್ನೂ ಓದಿ: Tata Scholarship-ಟಾಟಾ ಕ್ಯಾಪಿಟಲ್ ಲಿಮಿಟೆಡ್‌ ವತಿಯಿಂದ 1.0 ಲಕ್ಷ ವಿದ್ಯಾರ್ಥಿವೇತನ! ಕೇವಲ 5 ದಿನ ಬಾಕಿ!

How to Apply For Mobile Canteen Subsidy-ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಅಭ್ಯರ್ಥಿಗಳು ತಮ್ಮ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು. ಚಿತ್ರದುರ್ಗ ಜಿಲ್ಲೆಯ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 13ರ ಸಂಜೆ 4.30ರ ಒಳಗೆ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು: ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಕಾಮನಭಾವಿ ಬಡಾವಣೆ, ಚಿತ್ರದುರ್ಗ.

Required Documents For Mobile Canteen Subsidy-ಅಗತ್ಯವಿರುವ ದಾಖಲೆಗಳು:

ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಒದಗಿಸಬೇಕು.

  • ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆ (ಇಲಾಖೆಯ ಕಚೇರಿಯಲ್ಲಿ ಲಭ್ಯ).
  • ಆಧಾರ್ ಕಾರ್ಡ್ ಪ್ರತಿ/Adhar Card
  • ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಫೋಟೋ/Photo
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste And Income Certificate
  • ಲಘುವಾಹನ ಚಾಲನಾ ಪರವಾನಗಿ (DL) ಪ್ರತಿ.
  • ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಪ್ರತಿ/SSLC Marks Card
  • ಯಾವುದೇ ಸರ್ಕಾರಿ ನೌಕರಿಯಲ್ಲಿ ಇಲ್ಲದ ಬಗ್ಗೆ ₹50/- ರ ಛಾಪಾ ಕಾಗದದಲ್ಲಿ (Affidavit) ಪ್ರಮಾಣ ಪತ್ರ/Bond Paper
  • ಯೋಜನಾ ವರದಿ (Project Report).

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: