Morarji College Admission-ಉಚಿತ ಮೊರಾರ್ಜಿ ಪಿಯು ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ!

May 6, 2025 | Siddesh
Morarji College Admission-ಉಚಿತ ಮೊರಾರ್ಜಿ ಪಿಯು ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ!
Share Now:

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗಲು ಸರ್ಕಾರದಡಿ ಬರುವ ವಿವಿಧ ಉಚಿತ ವಸತಿ ಕಾಲೇಜುಗಳಲ್ಲಿ(Morarji College Admission) ಪ್ರಥಮ ಪಿಯುಸಿ ಪ್ರವೇಶ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಮೊರಾರ್ಜಿ ದೇಸಾಯಿ(Morarji Desai) ವಸತಿಪದವಿ ಪೂರ್ವ ಕಾಲೇಜು ಮತ್ತು ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಇನ್ನಿತರೆ ವಸತಿ ಕಾಲೇಜುಗಳಲ್ಲಿ 2025-26ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Free Residential School-ಉಚಿತ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ!

ಈ ವಸತಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಯಾರೆಲ್ಲ ಅರ್ಜಿಯನ್ನು(Morarji Desai College In Karnataka)ಸಲ್ಲಿಸಬಹುದು? ಅರ್ಜಿಯನ್ನು ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳೇನು? ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸುವುದು ಹೇಗೆ? ಇನ್ನಿತರೆ ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

Important Dates-ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ- 03 ಮೇ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 17 ಮೇ 2025

ಇದನ್ನೂ ಓದಿ: Raagi Kharidi-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಯಲ್ಲಿ ಮಹತ್ವದ ಬದಲಾವಣೆ!

Eligibility Criteria For Morarji Desai College Admission-ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು:

1) ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಜೈನ್, ಸಿದ್ದಿ, ಬೌದ್ಧ, ಪಾರಸಿ ಹಾಗೂ ಪರಿಶಿಷ್ಟ ಜಾತಿ, ಪ.ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿರಬೇಕು.

2) ಕರ್ನಾಟಕ ರಾಜ್ಯದ ಎಸ್. ಎಸ್. ಎಲ್. ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಅಥವ COBSE ಪಟ್ಟಿಯಲ್ಲಿರುವ ಬೋರ್ಡ್‌ಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರಥಮ ಪಿ.ಯು.ಸಿಗೆ ದಾಖಲಾಗಲು ಅರ್ಹರಿರುತ್ತಾರೆ.

3) ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಇದನ್ನೂ ಓದಿ: Yuvanidhi Yojane-ನಿರುದ್ಯೋಗಿಗಳು ಪ್ರತಿ ತಿಂಗಳು ರೂ 3,000/- ಪಡೆಯಲು ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ!

4) ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ 2.50 ಲಕ್ಷಗಳನ್ನು ಮೀರಿರಬಾರದು.

5) ವಿಶೇಷಚೇತನ ವಿದ್ಯಾರ್ಥಿಗಳಿಗೆ ಪ್ರವೇಶಾತಿಯಲ್ಲಿ ಶೇ. 4 ರಷ್ಟು ಸ್ಥಾನಗಳನ್ನು ಮೀಸಲಿರಿಸಿದೆ.

6) ಪ್ರವೇಶಾತಿಯಲ್ಲಿ ಶೇ. 75ರಷ್ಟು ಸ್ಥಾನಗಳನ್ನು ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತರು, ಸಿಬ್ಬರು, ಜೈನರು, ಬೌದ್ಧರು ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಮೀಸಲಿರಿಸಿದೆ. ಶೇ. 25 ರಷ್ಟು ಸ್ಥಾನಗಳನ್ನು ಪ.ಜಾತಿ, ಪ.ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಿರಿಸಿದೆ.

ಇದನ್ನೂ ಓದಿ: SSLC Exam-ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ KSEEB ಮಂಡಳಿ!

Morarji College

How To Apply For Morarji Desai College Admission-ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊದಲಿಗೆ Apply Now ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಇಲ್ಲಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ನಮೂದಿಸಿ ಲಾಗಿನ್ ಅಗಿ ಇಲ್ಲಿ ಕೇಳುವ ಎಲ್ಲ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Pumpset- ರೈತರಿಗೆ ಸಿಹಿ ಸುದ್ದಿ: 'ನವೀಕೃತ ಶೀಘ್ರ ಸಂಪರ್ಕ ಯೋಜನೆ'ಯಡಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ!

Required Documents-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

  • ವಿದ್ಯಾರ್ಥಿಯ SSLC ಅಂಕಪಟ್ಟಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ನಿವಾಸ ದೃಡೀಕರಣ ಪತ್ರ
  • ಆಧಾರ್ ಕಾರ್ಡ ಪ್ರತಿ
  • ಪೋಟೋ
  • ಮೊಬೈಲ್ ನಂಬರ್

For More Information-ಈ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಹಾಯವಾಣಿ ಮತ್ತು ಅಧಿಕೃತ ಜಾಲತಾಣ:

ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆರವರ ಕಛೇರಿ ಮತ್ತು ಕಾಲೇಜಿನ ಪ್ರಾಂಶುಪಾಲರ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯದ ಸಹಾಯವಾಣಿ ಸಂಖ್ಯೆ: - 8277799990 ಮೂಲಕ ಮಾಹಿತಿ ಪಡೆಯುವುದು ಹಾಗೂ ಹೆಚ್ಚಿನ ಮಾಹಿತಿಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ ಸೈಟ್ (https://dom.karnataka.gov.in)ಗೆ ಸಂಪರ್ಕಿಸುವುದು.

WhatsApp Group Join Now
Telegram Group Join Now
Share Now: