Morarji Desai admission-ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ!

January 7, 2026 | Siddesh
Morarji Desai admission-ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ!
Share Now:

2026-2027 ನೇ ಸಾಲಿನ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ನಿರ್ದೇಶನಾಲಯ ಅಡಿಯಲ್ಲಿ (Morarji Desai Residential School admission)ವಸತಿ ಶಾಲೆಗಳ 6 ನೇ ತರಗತಿಗೆ ಪ್ರವೇಶ ಪ್ರಕ್ರಿಯೆಯು ಪ್ರಾರಂಭವಾಗಿದ್ದು ಆಸಕ್ತ ಅರ್ಹ ವಿದ್ಯಾರ್ಥಿಗಳ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಮಕ್ಕಳು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಒಳ್ಳೆಯ ಉತ್ತಮ ಗುಣಮಟ್ಟದ (Morarji Desai hostel school)ಶಿಕ್ಷಣವನ್ನು ಕೊಡುವ ಉದ್ದೇಶದಿಂದ ಪ್ರತಿವರ್ಷದಂತೆ ಈ ವರ್ಷವೂ ಸಹ ಶಾಲಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯು ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿ ಸಲ್ಲಿಸಲು ಕೋರಿದೆ.

ಇದನ್ನೂ ಓದಿ: Bele Parihara Amount-ಬೆಳೆ ಹಾನಿ ಮತ್ತು ಬೆಳೆ ವಿಮೆ ಪರಿಹಾರದ ಹಣ ರೈತರ ಖಾತೆ!

ಈ ಲೇಖನದಲ್ಲಿ 6 ನೇ ತರಗತಿ ಪ್ರವೇಶಾತಿಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳನ್ನು ಒದಗಿಸಬೇಕು? (Karnataka residential schools admission)ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Residential school features-ವಸತಿ ಶಾಲಾ ವೈಶಿಷ್ಟ್ಯಗಳು?

  • ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ್, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಶೇ.75% ಮೀಸಲಾತಿಯನ್ನು ನೀಡಲಾಗುತ್ತದೆ.
  • ಪ.ಜಾತಿ, ಪ.ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ. 25% ಮೀಸಲಾತಿ
  • ಬಾಲಕಿಯರಿಗೆ ಶೇ.50% ಮೀಸಲಾತಿಯನ್ನು ನೀಡಲಾಗುತ್ತದೆ.
  • ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಾತ್ಮಕ ವಸತಿಯುತ ಶಿಕ್ಷಣ.
  • ಜಿಲ್ಲೆಗೊಂದರಂತೆ CBSE ಪಠ್ಯಕ್ರಮದ ಉತ್ಕೃಷ್ಟಶಾಲೆಗಳು.
  • ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಸರಾಂತ ಸಂಸ್ಥೆಗಳಿಂದ ಶಾಲಾ ಹಂತದಲ್ಲಿಯೇ ತಯಾರಿ.
  • ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಲೇಖನ ಸಾಮಗ್ರಿ. ಸಮವಸ್ತ್ರ, ತೂ ಮತ್ತು ಸಾಕ್ಸ್ ಮತ್ತು ಗುಣಾತ್ಮಕೆ ವಸತಿ ಸೌಲಭ್ಯಗಳು.
  • ಸ್ಟೋಕನ್ ಇಂಗ್ಲೀಷ್ ತರಬೇತಿ, ನಾಯಕತ್ವ ತರಬೇತಿ, ಜೆಇಇ /ಎನ್‌ಇಇಟಿ, ಸಿಎಲ್‌ಎಟಿ ತರಬೇಕಿಗಳು ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ, ಜೀವನ ಕೌಶಲ್ಯ ತರಬೇತಿಗಳು ಇತ್ಯಾದಿಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ: Whatsapp Banking-ಗ್ರಾಹಕರಿಗೆ ಸಿಹಿ ಸುದ್ದಿ: ಈಗ ವಾಟ್ಸಾಪ್ ನಲ್ಲೇ ಬ್ಯಾಂಕಿಂಗ್ ಸೇವೆ ಲಭ್ಯ!

Important dates-ವಸತಿ ಶಾಲಾ ಪ್ರವೇಶ ಪ್ರಕ್ರಿಯೆಯ ಪ್ರಮುಖ ದಿನಾಂಕಗಳು?

ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ: 07-01-2026
ನಿಗದಿಪಡಿಸಿರುವ ಅಂತಿಮ ದಿನಾಂಕ: 10-02-2026
ಲಿಖಿತ ಪರೀಕ್ಷೆ ನೆಡೆಸುವ ದಿನಾಂಕ: 29-03-2026
ಫಲಿತಾಂಶ ಪ್ರಕಟಣೆ: 20-04-2026

Available seats-ತಾತ್ಕಲಿಕವಾಗಿ ಲಭ್ಯವಿರುವ ಸೀಟುಗಳ ವಿವರ ಈ ಕೆಳಗಿನಂತಿವೆ:

ವಸತಿ ಶಾಲೆಯ ಹೆಸರು ಶಾಲೆಗಳ ಸಂಖ್ಯೆ6 ನೇ ತರಗತಿಗೆ ಮಂಜೂರಾದ ಸಂಖ್ಯೆ
ಮೊರಾರ್ಜಿ ದೇಸಾಯಿ ವಸತಿ ಶಾಲೆ(State)
14010460
ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(CBSE)
291930
ಸರ್ಕಾರಿ ಮುಸ್ಲಿಂ ವಸತಿ ಶಾಲೆ(State)04260

ಇದನ್ನೂ ಓದಿ: Cow Farming Subsidy-ಹಸು ಸಾಕುವ ರೈತರಿಗೆ ಗೋಕುಲ ಮಿಷನ್ ಯೋಜನೆಯಡಿ ಸಬ್ಸಿಡಿ! ವರ್ಷಕ್ಕೆ ₹21,500 ಆದಾಯ!

Who Can APply-ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಅರ್ಜಿದಾರ ವಿದ್ಯಾರ್ಥಿಯು ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 5ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರಬೇಕು.

ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿದಾರ ವಿದ್ಯಾರ್ಥಿಯ ವಯಸ್ಸು 09 ರಿಂದ 13 ರ ಒಳಗಿರಬೇಕು.

ಅರ್ಜಿದಾರ‍ ಅಭ್ಯರ್ಥಿಯು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷ ಮೀರಿರಬಾರದು.

ಇದನ್ನೂ ಓದಿ: Online Land Records-ರೈತರು ಇನ್ಮುಂದೆ ತಮ್ಮ ಜಮೀನಿನ ದಾಖಲೆ ಪಡೆಯುವುದು ಭಾರೀ ಸುಲಭ!

morarji desai school

ಇದನ್ನೂ ಓದಿ: Kuri Sakanike Tarabeti-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

What are the Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ವಿದ್ಯಾರ್ಥಿಯ SATS ID/Identy Card
ಆಧಾರ್ ಕಾರ್ಡ ಪ್ರತಿ/Aadhar Card
ಅಂಕಪಟ್ಟಿ/Markscard
ಜಾತಿ ಪ್ರಮಾಣ ಪತ್ರ/Caste Certificate
ಆದಾಯ ಪ್ರಮಾಣ ಪತ್ರ/Income Certificate
ಮೊಬೈಲ್ ನಂಬರ್/Mobile Number

How to Apply-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅಥವಾ ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ಅಧಿಕೃತ ಸೇವಾಸಿಂಧು ವೆಬ್ಸೈಟ್ ಅನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Poultry Shed Subsidy-ಕುಕ್ಕುಟ ಸಂಜೀವಿನಿ ಯೋಜನೆಯಡಿ ಉಚಿತ ಕೋಳಿಮರಿ, ಶೆಡ್ ಸಹಾಯಧನ ಪಡೆಯಲು ಅರ್ಜಿ!

For More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ:

ಅಧಿಕೃತ ವೆಬ್ಸೈಟ್ ಲಿಂಕ್: Click Here
ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್: Apply Now
ಅಧಿಸೂಚನೆ ಪ್ರತಿ: Download

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: