MSP Scheme Amount-ಬೆಂಬಲ ಬೆಲೆ ಯೋಜನೆಯಡಿ ರೈತರ ಖಾತೆಗೆ ಹಣ ಬಿಡುಗಡೆ!

May 21, 2025 | Siddesh
MSP Scheme Amount-ಬೆಂಬಲ ಬೆಲೆ ಯೋಜನೆಯಡಿ ರೈತರ ಖಾತೆಗೆ ಹಣ ಬಿಡುಗಡೆ!
Share Now:

ಕೃಷಿ ಉತ್ಪನ್ನ ಮಾರಾಟ ಇಲಾಖೆ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ(Bembala Bele)ಯೋಜನೆಯಡಿ ರೈತರಿಂದ ನೇರವಾಗಿ ಖರೀದಿ ಮಾಡಿದ ರಾಗಿ,ಭತ್ತ,ತೊಗರಿ ಸೇರಿದಂತೆ ವಿವಿಧ ಉತ್ಪನ್ನಗಳ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಬೆಂಬಲ ಬೆಲೆ ಯೋಜನೆಯಡಿ(Bembala Bele Yojana) ಅರ್ಹ ರೈತರ ನೋಂದಣಿಯನ್ನು ಮಾಡಿಕೊಂಡು ಕೃಷಿ ಉತ್ಪನ್ನ ಮಾರಾಟ ಇಲಾಖೆಯ ಸಹಯೋಗದಲ್ಲಿ ಆಯ್ದ ಜಿಲ್ಲೆಗಳಲ್ಲಿ ರೈತರಿಂದ ನೇರವಾಗಿ ವಿವಿಧ ಉತ್ಪನ್ನಗಳನ್ನು ಖರೀದಿ ಮಾಡಲಾಗಿದ್ದು ಇದರ ಹಣವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ.

ಇದನ್ನೂ ಓದಿ: Tarpaulin Subsidy-ಕೃಷಿ ಇಲಾಖೆಯಿಂದ ಶೇ 50% ಸಬ್ಸಿಡಿಯಲ್ಲಿ ಟಾರ್ಪಾಲಿನ್ ಪಡೆಯಲು ಅವಕಾಶ!

ರೈತರು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತಮ್ಮ ಖಾತೆಗೆ ಹಣ(Bembala Bele Yojana amount) ಜಮಾ ಅಗಿರುವುದನ್ನು ಬ್ಯಾಂಕ್ ಶಾಖೆಯನ್ನು ಭೇಟಿ ಮಾಡದೇ ತಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳಬಹುದು? ಮತ್ತು ಯಾವೆಲ್ಲ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿ ಮಾಡಲಾಗಿದೆ? ಇವುಗಳ ಬೆಲೆ ವಿವರ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Bembala Bele Yojana Hana-ರೈತರ ಖಾತೆಗೆ ಹಣ ಬಿಡುಗಡೆ!

ಕಳೆದ 2-3 ತಿಂಗಳಿನಿಂದ ಬೆಂಬಲ ಬೆಲೆ ಯೋಜನೆಯಡಿ ವಿವಿಧ ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲಾಗಿದ್ದು ಇದರ ಒಟ್ಟು ಮೊತ್ತವನ್ನು ಸಂಬಂಧಪಟ್ಟ ಇಲಾಖೆಯಿಂದ ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು, ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಿದ ರೈತರು ಕೂಡಲೇ ನಿಮ್ಮ ಬ್ಯಾಂಕ್ ಖಾತೆಯಿರುವ ಶಾಖೆಯನ್ನು ಭೇಟಿ ಮಾಡಿ ಹಣ ಜಮಾ ಅಗಿರುವುದನ್ನು ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: Pumpset Repair Training-ಉಚಿತ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

MSP Amount Status Check- ಹಣ ಜಮಾ ವಿವರವನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ವಿಧಾನ:

ರೈತರು ಬೆಂಬಲ ಬೆಲೆ ಯೋಜನಯಡಿ ತಾವು ಮಾರಾಟ ಮಾಡಿದ ಕೃಷಿ ಉತ್ಪನ್ನದ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ಜಮಾ ಅಗಿರುವುದನ್ನು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.

Step-1: ಮೊದಲಿಗೆ MSP Amount Status ಈ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಗೂಗಲ್ ಪ್ಲೈ ಸ್ಟೋರ್ ಪ್ರವೇಶ ಮಾಡಿ "ಡಿಬಿಟಿ ಕರ್ನಾಟಕ" ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

ಇದನ್ನೂ ಓದಿ: Best Pension Scheme-ತಿಂಗಳಿಗೆ ರೂ 5,000/- ಪಿಂಚಣಿ ಸೌಲಭ್ಯ! ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ!

Bembala Bele Yojane

Step-2: DBT Karnataka ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡ ಬಳಿಕ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 12 ಅಂಕಿಯ ಆಧಾರ್ ಕಾರ್ಡ ಸಂಖ್ಯೆಯನ್ನು ಹಾಕಿ ಒಟಿಪಿ ಸಂಖ್ಯೆಯನ್ನು ನಮೂದಿಸಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಳ್ಳಬೇಕು.

Step-3: ನಂತರ ನೀವು ರಚನೆ ಮಾಡಿಕೊಂಡುರುವ ನಾಲ್ಕು ಅಂಕಿಯ ಪಾಸ್ವರ್ಡ ಅನ್ನು ಹಾಕಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಿ ಇಲ್ಲಿ "ಪಾವತಿ ಸ್ಥಿತಿ" ಬಟನ್ ಮೇಲೆ ಕ್ಲಿಕ್ ಮಾಡಿದರೆ
"ಡಿಸೆಂಟ್ರೇಲ್ಜ್ಡ್ ಪ್ರೊಕ್ಯೂರಿಮೆಂಟ್ ಎನ್ ಎಫ್ ಎಸ್ ಎ ರಾಗಿ" ಎನ್ನುವ ಆಯ್ಕೆ ಗೊಚರಿಸುತ್ತದೆ ಈ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಹಣ ಯಾವ ದಿನಾಂಕದಂದು ಜಮಾ ಅಗಿದೆ? UTR ನಂಬರ್, ಬ್ಯಾಂಕಿನ ಹೆಸರು, ಬ್ಯಾಂಕ್ ಖಾತೆಯ ಕೊನೆಯ ನಾಲ್ಕು ಸಂಖ್ಯೆಯ ವಿವರ ಸಹ ಕಾಣುತ್ತದೆ.

ಇದನ್ನೂ ಓದಿ: Marriage Registration-ಮ್ಯಾರೇಜ್ ರಿಜಿಸ್ಟ್ರೇಷನ್ ಮಾಡಿಸಲು ಈ ದಾಖಲೆ ಕಡ್ಡಾಯ!

MSP Scheme Crop details-ರಾಜ್ಯದಲ್ಲಿ ಯಾವೆಲ್ಲ ಬೆಳೆಗಳನ್ನು ಖರೀದಿ ಮಾಡಲಾಗಿದೆ?

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಈ ಕೆಳಗಿನ ಪಟ್ಟಿಯಲ್ಲಿರುವ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲಾಗಿದೆ.

1)ರಾಗಿ
2)ಭತ್ತ
3)ಕಡಲೆಕಾಳು
4)ತೊಗರಿ
5)ಸೂರ್ಯಕಾಂತಿ
6)ಬಿಳಿಜೋಳ
7)ಕುಸುಬೆ

ಇದನ್ನೂ ಓದಿ: Free Hostel-2025: ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

MSP Price List-ಬೆಳೆವಾರು ಬೆಂಬಲ ಬೆಲೆ ವಿವರ:

ಕೇಂದ್ರ ಸರ್ಕಾರದಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿದ ಕೃಷಿ ಉತ್ಪನ್ನಗಳ ಬೆಲೆ ವಿವರ ಈ ಕೆಳಗಿನಂತಿದೆ ಪ್ರತಿ ಕ್ವಿಂಟಾಲ್ ಗೆ ದರ ವಿವರವನ್ನು ಹಂಚಿಕೊಳ್ಳಲಾಗಿದೆ.

1) ರಾಗಿ- 4290/-
2) ಭತ್ತ- A) ಸಾಮಾನ್ಯ- 2300
B) ಎ ದರ್ಜೆ- 232
3) ಕಡಲೆಕಾಳು-5,440/-
4) ತೊಗರಿ- 8,000/-
5) ಸೂರ್ಯಕಾಂತಿ-7,80
6) ಬಿಳಿಜೋಳ-A) ಹೈಬ್ರಿಡ್-3371
B) ಮಾಲ್ದಂಡಿ-3421
7) ಕುಸುಬೆ-5,800/-

ಇದನ್ನೂ ಓದಿ: Flipkart Scholarship Application-ಫ್ಲಿಪ್‌ಕಾರ್ಟ್ ಸ್ಕಾಲರ್‌ಶಿಪ್! ₹50,000 ವಿದ್ಯಾರ್ಥಿವೇತನಕ್ಕೆ ಇಂದೇ ಅರ್ಜಿ ಸಲ್ಲಿಸಿ!

Bembala Bele Yojana-ಬೆಂಬಲ ಬೆಲೆ ಯೋಜನೆಯಡಿ ಉತ್ಪನ್ನವನ್ನು ಮಾರಾಟ ಮಾಡುವುದು ಹೇಗೆ?

ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ತಮ್ಮ ಹತ್ತಿರದ ಕೃಷಿ ಉತ್ಪನ್ನ ಮಾರಾಟ ಇಲಾಖೆಯ ಖರೀದಿ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಣಿಯನ್ನು ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಉತ್ಪನ್ನವನ್ನು ತೆಗೆದುಕೊಂಡು ಹೋಗಿ ಮಾರಾಟ ಮಾಡಬೇಕು.

ಕೃಷಿ ಉತ್ಪನ್ನವನ್ನು ಮಾರಾಟ ಮಾಡಿದ ಬಳಿಕ 15 ರಿಂದ 20 ದಿನದ ಒಳಗಾಗಿ ನೇರ ನಗದು ವರ್ಗಾವಣೆ(DBT)ಮೂಲಕ ರೈತರ ಖಾತೆಗೆ ಉತ್ಪನ್ನದ ಮಾರಾಟದ ಹಣ ಜಮಾ ಅಗುತ್ತದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: