Navodaya School Admission-ನವೋದಯ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

August 21, 2025 | Siddesh
Navodaya School Admission-ನವೋದಯ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!
Share Now:

ನವೋದಯ ಶಾಲೆಯಲ್ಲಿ ವ್ಯಾಸಂಗ(Navodaya school admission) ಮಾಡಲು ಆಸಕ್ತಿ ಮತ್ತು ಗುರಿಯನ್ನು ಇಟ್ಟುಕೊಂಡಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಗುಣಮಟ್ಟದ ಶಿಕ್ಷಣಕ್ಕೆ ನಮ್ಮ ದೇಶದಲ್ಲಿ ಹೆಸರುವಾಸಿಯಾಗಿರು ಈ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಈ ಹಿಂದೆ ನವೋದಯ ಶಾಲೆ 6ನೇ ತರಗತಿ ಪ್ರವೇಶಕ್ಕೆ(Navodaya school Application)ಅರ್ಜಿ ಸಲ್ಲಿಸಲು 13 ಆಗಸ್ಟ್ 2025 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು ಪ್ರಸ್ತುತ ಈ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿ ತಿಳಿಯಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

2026-27 ನೇ ಸಾಲಿನಲ್ಲಿ ನವೋದಯ ಶಾಲೆಯಲ್ಲಿ(Navodaya school) 6ನೇ ತರಗತಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Last Date For Navodaya School Admission Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ:

ಜವಾಹರ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು ನೂತನ ಪ್ರಕಟಣೆಯನ್ವಯ ಅರ್ಜಿ ಸಲ್ಲಿಸಲು 27 ಆಗಸ್ಟ್ 2025 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

Navodaya School Admission Eligibility Criteria-ಅರ್ಜಿ ಸಲ್ಲಿಸಲು ಅರ್ಹರು:

ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಅರ್ಹತಾ ಮಾನದಂಡಗಳನ್ನು ಹೊಂದಿರಬೇಕು ಎನ್ನುವುದರ ಕುರಿತು ಒಂದಿಷ್ಟು ಅಗತ್ಯ ವಿವರ ಈ ಕೆಳಗಿನಂತಿದೆ:

ವಿದ್ಯಾರ್ಥಿಯು 2025-26 ನೇ ಸಾಲಿನಲ್ಲಿ, ಸರ್ಕಾರಿ/ಸರ್ಕಾರಿ ಮಾನ್ಯತೆ ಪಡೆದ ಶಾಲೆಗಳಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರಬೇಕು.

ಅರ್ಜಿದಾರ ವಿದ್ಯಾರ್ಥಿಯು 01 ಮೇ 2014 ರಿಂದ 30 ಏಪ್ರಿಲ್ 2016 ರ ಮಧ್ಯೆ ಜನಿಸಿರಬೇಕು.

ಇದನ್ನೂ ಓದಿ: Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Required Documents For Navodaya School Online Application-ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿದೆ.

  • ವಿದ್ಯಾರ್ಥಿಯ ಆಧಾರ್ ಕಾರ್ಡ ಪ್ರತಿ/Aadhar
  • ಅರ್ಜಿದಾರ ವಿದ್ಯಾರ್ಥಿಯ ಪೋಟೋ/Photo
  • ವಿದ್ಯಾರ್ಥಿಯ ಸಹಿ ಪ್ರತಿ/Signature Copy
  • ಪೋಷಕರ ಸಹಿ ಪ್ರತಿ/Parent Signature Copy
  • ನಿವಾಸಿ ದೃಡೀಕರಣ ಪ್ರಮಾಣ ಪತ್ರ/Residential certificate
  • ವ್ಯಾಸಂಗ ಪ್ರಮಾಣ ಪತ್ರ/Study certificate

ಇದನ್ನೂ ಓದಿ: Loan Interest Subsidy-ರೈತರಿಗೆ ಭರ್ಜರಿ ಸಿಹಿ ಸುದ್ದಿ!ಈ ಯೋಜನೆಯಡಿ ಸಿಗಲಿದೆ ಬಡ್ಡಿ ರಿಯಾಯಿತಿ!

How To Apply For Navodaya School Admission-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಸ್ವಂತ ನೀವೇ ನಿಮ್ಮ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

Step-1: ವಿದ್ಯಾರ್ಥಿಗಳು ಪ್ರಥಮದಲ್ಲಿ "Navodaya School Online Application"ಇಲ್ಲಿ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಇಲಾಖೆಯಿಂದ ನಿಗದಿಪಡಿಸಿರುವ ನವೋದಯ ವಿದ್ಯಾಲಯದ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Free Hostel Admission-ಉಚಿತ ಹಾಸ್ಟೆಲ್ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

Step-2: ಇದಾದ ಬಳಿಕ ಈ ಪುಟದಲ್ಲಿ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಅವಶ್ಯವಿರುವ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: