New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

October 3, 2025 | Siddesh
New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!
Share Now:

ಹೊಸ ರೇಶನ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಕಾಯುತ್ತಿರುವ ಸಾರ್ವಜನಿಕರಿಗೆ ಆಹಾರ ಇಲಾಖೆಯ ಸಚಿವರಾದ ಕೆ. ಹೆಚ್. ಮುನಿಯಪ್ಪ ಅವರು ಸಿಹಿ ಸುದ್ದಿಯನ್ನು ನೀಡಿದ್ದಾರೆ ಅಕ್ಟೋಬರ್ ತಿಂಗಳಿನಿಂದ ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಆಹಾರ ಇಲಾಖೆಯ ಮೂಲಕ ಪಡಿತರ ಚೀಟಿ ರದ್ದು ಮಾಡುವುದರ ಕುರಿತು ಮತ್ತು ಹೊಸ ಪಡಿತರ ಚೀಟಿ ವಿತರಣೆ ಬಗ್ಗೆ ಉಡುಪಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSM) ಅಡಿಯಲ್ಲಿ ಫಲಾನುಭವಿಗಳ ಇತ್ತೀಚಿನ ಸಮೀಕ್ಷೆಯ ವೇಳೆ 7.70 ಲಕ್ಷ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಲಾಗಿದೆ. ಕರ್ನಾಟಕದಲ್ಲಿ ಈ 7.70 ಲಕ್ಷ ಪಡಿತರ ಚೀಟಿದಾರರನ್ನು ಬಿಪಿಎಲ್ ವರ್ಗದಿಂದ ಎಪಿಎಲ್‌ಗೆ ಬದಲಾಯಿಸಲಾಗುತ್ತದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: SBI RD Scheme-ಎಸ್ ಬಿ ಐ ನಲ್ಲಿ ಪ್ರತಿ ತಿಂಗಳು ಕೇವಲ 610/- ರೂ ಉಳಿತಾಯ ಮಾಡಿ ₹1.0 ಲಕ್ಷ ಹಣ ಗಳಿಸಿ!

ಹಿಂದಿನ ಸರ್ಕಾರಗಳು ಯಾವುದೇ ಪರಿಶೀಲನೆ ಇಲ್ಲದೆ ಜನರಿಗೆ ಬಿಪಿಎಲ್ ಕಾರ್ಡ್ ಗಳನ್ನು ನೀಡುತ್ತಲೇ ಇದ್ದವು. ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ ರಾಜ್ಯಗಳು ಶೇ.50ಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ ಗಳನ್ನು ಸಾರ್ವಜನಿಕರು ಹೊಂದಿರುವುದಿಲ್ಲ, ಆದರೆ, ನಮ್ಮ ರಾಜ್ಯ ಶೇ.75ಕ್ಕಿಂತ ಹೆಚ್ಚು ನಾಗರಿಕರು ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಅಭಿವೃದ್ಧಿ ಹೊಂದಿದ ರಾಜ್ಯವಾಗಿದ್ದರೂ ಸಹ ನಮ್ಮ ರಾಜ್ಯದಲ್ಲಿ 1.28 ಕೋಟಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರನ್ನು ಹೊಂದಿರುವ ಕಾರಣ ಅನರ್ಹ ಕಾರ್ಡಗಳನ್ನು ಗುರುತಿಸಿ ರದ್ದುಪಡಿಸಲಾಗುತ್ತಿದೆ.

ಹೀಗಾಗಿಯೇ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ನಡೆಯುತ್ತಿದೆ. ಪಡಿತರ ಚೀಟಿಗಳನ್ನು ಬಿಪಿಎಲ್ ನಿಂದ ಎಪಿಎಲ್ ಗೆ ತಪ್ಪಾಗಿ ಬದಲಾಯಿಸಿದ್ದರೆ, ಅಂತಹ ಫಲಾನುಭವಿಗಳು ಬಿಪಿಎಲ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಅವರಿಗೆ ಒಂದು ದಿನದೊಳಗೆ ಆಹಾರ ಧಾನ್ಯಗಳನ್ನು ಪೂರೈಸಲಾಗುವುದು. ಈ ಪರಿಷ್ಕರಣೆ ಕಾರ್ಯ ಪೂರ್ಣಗೊಂಡ ಬಳಿಕೃ ಪಡಿತರ ಚೀಟಿಗಳಿಗೆ ಹೊಸ ಅರ್ಜಿಗಳಿಗೆ ಅವಕಾಶ ನೀಡಲಾಗುವುದು ಎಂದು ಸುದ್ದಿಗೊಷ್ಠಿಯಲ್ಲಿ ಮಾಹಿತಿಯನ್ನು ತಿಳಿಸಿದ್ದಾರೆ.

ಇದನ್ನೂ ಓದಿ: PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

New Ration Card Eligibility Criteria-ರೇಶನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅರ್ಹರು:

ಅರ್ಜಿದಾರ ಸದಸ್ಯರು ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.

ಆರ್ಥಿಕವಾಗಿ ಹಿಂದುಳಿದ ವರ್ಗೆಕ್ಕೆ ಸೇರಿದವರು ಮಾತ್ರ BPL Card ಪಡೆಯಲು ಅರ್ಜಿ ಸಲ್ಲಿಸಬಹುದು ಉಳಿದವರಿಗೆ APL Card ಅನ್ನು ಪಡೆಯಲು ಅವಕಾಶವಿರುತ್ತದೆ.

ನವದಂಪತಿಗಳು ಅಂದರೆ ಇತ್ತೀಚಿಗೆ ಮದುವೆಯಾಗಿ ಪಡಿತರ ಚೀಟಿಯನ್ನು ಹೊಂದಿಲ್ಲದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ತಮ್ಮ ಹೆಸರಿನಲ್ಲಿ ರೇಷನ್ ಕಾರ್ಡ್ಅನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.

ಸರ್ಕಾರಿ/ಸಾರ್ವಜನಿಕ ವಲಯದ ಉದ್ಯೋಗಿಗಳು, ವೈದ್ಯರು, ವಕೀಲರು, ಲೆಕ್ಕಪರಿಶೋಧಕರು BPL ಕಾರ್ಡ್‌ ಪಡೆಯಲು ಅರ್ಹರಿವುದಿಲ್ಲ.

ಅರ್ಜಿದಾರರು 7.5 ಎಕರೆಗಿಂತ ಹೆಚ್ಚು ಭೂಮಿ ಹೊಂದಿದ್ದರೆ BPL ಕಾರ್ಡ್‌ಗೆ ಅರ್ಹರಲ್ಲ ಎಂದು ಆಹಾರ ಇಲಾಖೆಯ ಅಧಿಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ನಾಲ್ಕು ಚಕ್ರದ ವಾಹನವನ್ನು ಹೊಂದಿರುವವರು ಬಿಪಿಎಲ್ ಕಾರ್ಡ ಅನ್ನು ಪಡೆಯಲು ಅರ್ಹರಲ್ಲ.

ಇದನ್ನೂ ಓದಿ: Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

Ration Card

How To Apply For New Ration Card-ಅರ್ಜಿ ಸಲ್ಲಿಸುವ ಹೇಗೆ?

ಪ್ರಸ್ತುತ ರೇಶನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ಬಳಿಕ ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ,ಗ್ರಾಮ ಪಂಚಾಯತಿ, CSC Center ಅಥವಾ ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

Required Documents For New Ration Card-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳೇನು?

ಅರ್ಜಿದಾರ ಸದಸ್ಯರ ಆಧಾರ್ ಕಾರ್ಡ್ ಪ್ರತಿ/Aadhar.

ಗುರುತಿನ ಚೀಟಿ/Voter ID.

ಕುಟುಂಬದ ಆದಾಯ ಪ್ರಮಾಣ ಪತ್ರ/Income Certificate.

ವಿದ್ಯುತ್ ಬಿಲ್/ಗ್ಯಾಸ್ ಬಿಲ್ ಪ್ರತಿ/Gas Bill.

ಅರ್ಜಿದಾರರ ಸದಸ್ಯರ ಫೋಟೋ/Photo.

ಮೊಬೈಲ್ ನಂಬರ್/Mobile Number.

ಇದನ್ನೂ ಓದಿ: Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

Ration Card Application Status Check-ರೇಶನ್ ಕಾರ್ಡ ತಿದ್ದುಪಡಿ ಮತ್ತು ಹೊಸ ಅರ್ಜಿ ಸ್ಥಿತಿಯನ್ನು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ:

ಒಮ್ಮೆ ಸಾರ್ವಜನಿಕರು ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಕಾರ್ಡ್ ಪಡೆಯಲು ಅರ್ಜಿಯನ್ನು ಸಲ್ಲಿಸಿದ ಬಳಿಕ ಈ ಕೆಳಗಿನ ವಿಧಾನವನ್ನು ಅನುಸರಿಸಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ನಲ್ಲಿ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು.

Step-1: ಮೊದಲಿಗೆ ಇಲ್ಲಿ ಕ್ಲಿಕ್ "Ration Card Status" ಅಧಿಕೃತ ಆಹಾರ ಇಲಾಖೆಯ ವೆಬ್ಸೈಟ್ ಅನ್ನು ಭೇಟಿ ಮಾಡಿ.

Step-2: ತದನಂತರ ಈ ಪೇಜ್ ನಲ್ಲಿ "ಇ-ಸ್ಥಿತಿ/E-Status" ಬಟನ್ ಮೇಲೆ ಕ್ಲಿಕ್ ಮಾಡಿ "ಹೊಸ /ಹಾಲಿ ಪಡಿತರ ಚೀಟಿಯ ಸ್ಥಿತಿ/New/Existing RC Request Status" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಜಿಲ್ಲೆಯು ಯಾವ ವಿಭಾಗದಡಿ ಬರುತ್ತದೆ(ಬೆಂಗಳೂರು/ಮೈಸೂರು/ಕಲಬುರಗಿ) ಅದರ ಮೇಲೆ ಕ್ಲಿಕ್ ಮಾಡಿ.

Step-3: ಇದಾದ ಬಳಿಕ ಈ ಪೇಜ್ ನಲ್ಲಿ "Application Status of new Ration Card applied/ಹೊಸ ಪಡಿತರ ಚೀಟಿಗೆ ಸಲ್ಲಿಸಲಾದ ಅರ್ಜಿ ಯ ಸ್ಥಿತಿ" ಬಟನ್ ಮೇಲೆ ಕ್ಲಿಕ್ ಮಾಡಿ "Enter Acknowledgment No/ ಹಿಂಬರಹ ಸಂಖ್ಯೆ ನಮೂದಿಸಿ" ಕಾಲಂ ನಲ್ಲಿ ನಿಮ್ಮ ಅರ್ಜಿಯ ಸಂಖ್ಯೆಯನ್ನು ಹಾಕಿ "Go" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ರೇಷನ್ ಕಾರ್ಡ ಅರ್ಜಿಯು ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಪಡೆಯಬಹುದು.

For More Information-ಪಡಿತರ ಚೀಟಿಯ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಉಪಯುಕ್ತ ಲಿಂಕ್ ಗಳು:

  • Official website-ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್- Click Here
  • Ration Card Helpline-ಆಹಾರ ಇಲಾಖೆ ಸಹಾಯವಾಣಿ- 1800-425-9339

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: