Karnataka New Rules-ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನ ಖರೀದಿಸಿದರೆ ₹1000 ದಂಡ!

June 2, 2025 | Siddesh
Karnataka New Rules-ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನ ಖರೀದಿಸಿದರೆ ₹1000 ದಂಡ!
Share Now:

ರಾಜ್ಯ ಸರ್ಕಾರದಿಂದ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಬಳಕೆಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಹುಕ್ಕಾ ಬಾರ್ ಗಳನ್ನು ಸಂಪೂರ್ಣವಾಗಿ ನಿಷೇಧಿಸಿರುವ ರಾಜ್ಯ ಸರ್ಕಾರ, ತಂಬಾಕು ಉತ್ಪನ್ನಗಳನ್ನು ಖರೀದಿಸಲು ಕಾನೂನುಬದ್ದ ಈಗಿರುವ ವಯಸ್ಸನ್ನು 18 ವರ್ಷಗಳಿಂದ 21 ವರ್ಷಗಳಿಗೆ ಏರಿಕೆ ಮಾಡಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆ ವಿನಿಯಮ) ತಿದ್ದುಪಡಿ ಅಧಿನಿಯಮ-2024ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ಇದನ್ನೂ ಓದಿ: Scholarship-SSLC ಮತ್ತು PUC ಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ!

ಈ ಮಸೂದೆ ಫೆಬ್ರವರಿ2024 ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು ಕರ್ನಾಟಕ ರಾಜ್ಯಕ್ಕೆ ಅನ್ವಯಿಸಿ ತಿದ್ದುಪಡಿ ಮಾಡಲಾಗಿದೆ. ಕೇಂದ್ರ ಅಧಿನಿಯಮಕ್ಕೆ ತಿದ್ದುಪಡಿ ತಂದಿರುವುದರಿಂದ ಈ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿಕೊಡಲಾಗಿತ್ತು.

ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನಗಳನ್ನು ಖರೀದಿಸುವಂತಿಲ್ಲ:

ರಾಷ್ಟ್ರಪತಿಗಳ ಅಂಕಿತದ ನಂತರ ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ರಾಜ್ಯದಲ್ಲಿ 21 ವಯೋಮಿತಿ ಒಳಗಿನ ವ್ಯಕ್ತಿಗಳಿಗೆ ಸಿಗರೇಟು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಪ್ರಸ್ತುತ ತಂಬಾಕು ಉತ್ಪನ್ನಗಳನ್ನು ಖರೀದಿಸುವುದಕ್ಕೆ ಕನಿಷ್ಠ ವಯೋಮಾನ 18 ಇದೆ. ಈಗ ಆ ವಯೋಮಾನವನ್ನು 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

ಸಿಗರೇಟು ಅಥವಾ ಯಾವುದೇ ಇತರ ತಂಬಾಕು ಉತ್ಪನ್ನದ ಮಾರಾಟ ಮಾಡುವಂತಿಲ್ಲ. ಅಥವಾ ಮಾರಾಟಕ್ಕೆ ಅನುಮತಿ ನೀಡುವಂತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯನ್ನು ಹುಕ್ಕಾ ಬಾ‌ರ್ ನಡೆಸಿದರೆ ದಂಡನೆ:

ಯಾವುದೇ ವ್ಯಕ್ತಿ ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಒಂದು ವರ್ಷಕ್ಕೆ ಕಡಿಮೆಯಲ್ಲದ ಆದರೆ ಮೂರು ವರ್ಷಗಳಿಗೆ ವಿಸ್ತರಿಸಬಹುದಾದ ಅವಧಿಗೆ ಕಾರಾವಾಸದಿಂದ ಮತ್ತು ಐವತ್ತು ಸಾವಿರ ರೂಪಾಯಿಗಳಿಗಿಂತ ಕಡಿಮೆಯಲ್ಲದ ಆದರೆ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ದಂಡ ವಿಧಿಸಲಾಗುವುದು.

ಇದನ್ನೂ ಓದಿ: Tractor Cultivator Subsidy- ಸಬ್ಸಿಡಿಯಲ್ಲಿ ₹ 9,900/- ಪಾವತಿಸಿ ಟ್ರ್ಯಾಕ್ಟರ್ ಕಲ್ಟಿವೇಟರ್ ಪಡೆಯಲು ಅರ್ಜಿ!

government of karnataka

ಇದನ್ನೂ ಓದಿ: Student Bus Pass-KSRTC ಯಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಅರ್ಜಿ ಅಹ್ವಾನ!

ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನ ಬಳಸಿದರೆ ₹1000 ದಂಡ:

ಸಾರ್ವಜನಿಕ ಸ್ಥಳ ಹಾಗೂ ಶಾಲಾ ಕಾಲೇಜುಗಳ ನೂರು ಮೀಟರ್ ಒಳಗೆ ಸಿಗರೇಟ್ ಸೇವನೆ, ತಂಬಾಕು ಸೇವನೆ ಹಾಗೂ ಮಾರಾಟ ಮಾಡಿದ್ದಲ್ಲಿ ಮತ್ತು

21 ವರ್ಷಕ್ಕೂ ಕಡಿಮೆ ಇರುವ ವ್ಯಕ್ತಿಗಳಿಗೆ ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದರೆ ಕಾನೂನಿನ ರೀತ್ಯಾ ಜುಲ್ಮಾನೆಯ ದಂಡವನ್ನು ₹200 ರೂ.ಗಳಿಂದ ₹1000 ರೂ. ಗಳ ವರೆಗೆ ವಿಧಿಸಲಾಗುವುದು. ಈ ಕುರಿತು ಈಗಾಗಲೇ ಸರ್ಕಾರದ ರಾಜ್ಯಪತ್ರವೂ ಸಹ ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನವನ್ನು ಬಳಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಮತ್ತು ತಂಬಾಕು ಉಗಿಯುವಂತಿಲ್ಲ.

ಇದನ್ನೂ ಓದಿ: Crop Loan-ಕೇಂದ್ರ ಸರ್ಕಾರದಿಂದ ಬೆಳೆ ಸಾಲ ವಿತರಣೆ ಕುರಿತು ಮಹತ್ವದ ಆದೇಶ ಪ್ರಕಟ!

ಪ್ರತ್ಯೇಕ ಧೂಮಪಾನ ಪ್ರದೇಶಕ್ಕೆ ಅವಕಾಶ:

ಮೂವತ್ತು ಕೊಠಡಿಗಳನ್ನು ಹೊಂದಿರುವ ಹೋಟೆಲ್ ಅಥವಾ ಮೂವತ್ತು ಅಥವಾ ಅದಕ್ಕೂ ಹೆಚ್ಚಿನ ವ್ಯಕ್ತಿಗಳಿಗೆ ಆಸನ ಸಾಮರ್ಥ್ಯ ಹೊಂದಿರುವ ರೆಸ್ಟೋರೆಂಟ್ ಮತ್ತು ವಿಮಾನ ನಿಲ್ದಾಣಗಳಲ್ಲಿ ಒಂದು ಪ್ರತ್ಯೇಕ ಧೂಮಪಾನ ಪ್ರದೇಶ ಅಥವಾ ಸ್ಥಳಕ್ಕೆ ಅವಕಾಶವನ್ನು ಕಲಿಸಬಹುದಾಗಿದೆ.

ಹುಕ್ಕಾಬಾರ್ ನಿಷೇಧ :

ಈ ತಿದ್ದುಪಡಿ ಕಾಯ್ದೆ ಪ್ರಕಾರ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಯಾರೇ ವ್ಯಕ್ತಿಯು ತಾನಾಗಿಯಾಗಲಿ ಅಥವಾ ಯಾರೇ ಇತರ ವ್ಯಕ್ತಿಯ ಪರವಾಗಿಯಾಗಲಿ ಉಪಹಾರ ಗೃಹ ಅಥವಾ ಪಬ್ ಅಥವಾ ಬಾರು ಅಥವಾ ರೆಸ್ಟೋರೆಂಟ್ ಒಳಗೊಂಡಂತೆ ಯಾವುದೇ ಸ್ಥಳದಲ್ಲಿ ಹುಕ್ಕಾ ಬಾರನ್ನು ತೆರೆಯುವಂತಿಲ್ಲ ಹಾಗೂ ನಡೆಸುವಂತಿಲ್ಲ. ಹುಕ್ಕಾ ಎಂದರೆ. ಪ್ರತ್ಯೇಕವಾಗಿ ಒದಗಿಸಲಾಗುವ ಸಾಮೂಹಿಕ ಹುಕ್ಕಾ ಅಥವಾ ನರ್ಫಿಕ್ನಿಂದ ತಂಬಾಕನ್ನು ಅಥವಾ ಇತರೆ ಅದೇ ರೀತಿಯ ತಂಬಾಕು ಉತ್ಪನ್ನಗಳನ್ನು ಧೂಮಪಾನ ಮಾಡಲು ಜನರು ಸೇರುವ ಸ್ಥಳವಾಗಿದೆ.

WhatsApp Group Join Now
Telegram Group Join Now
Share Now: