NextGen Edu Scholarship-ಪಿಯುಸಿ ವಿದ್ಯಾರ್ಥಿಗಳಿಗೆ ನೆಕ್ಸ್ಟ್‌ಜೆನ್ 15,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

August 29, 2025 | Siddesh
NextGen Edu Scholarship-ಪಿಯುಸಿ ವಿದ್ಯಾರ್ಥಿಗಳಿಗೆ ನೆಕ್ಸ್ಟ್‌ಜೆನ್ 15,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!
Share Now:

EY ಗ್ಲೋಬಲ್ ಡೆಲಿವರಿ ಸರ್ವೀಸಸ್‌ನಿಂದ ವಿದ್ಯಾರ್ಥಿವೇತನ ಯೋಜನೆಯಡಿ(PUC Scholariship) 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ ದಾಖಲಾದ 11 ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದು ಮತ್ತು 10ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಮುಂದಿನ ವಿದ್ಯಾಭ್ಯಾಸಕ್ಕಾಗಿ ಆರ್ಥಿಕವಾಗಿ ಬೆಂಬಲವನ್ನು ಪಡೆಯಲು ನೆಕ್ಸ್ಟ್‌ಜೆನ್ ಇಜುಕೇಶನ್ ಸ್ಕಾಲರ್ಶಿಪ್(Scholariship) ಯೋಜನೆಯಡಿ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸುವುದರ ಕುರಿತು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

ಈಗಾಗಲೇ ನಮ್ಮ ಪುಟದಿಂದ ಶಿಕ್ಷಣವಾರು ವಿವಿಧ ವಿದ್ಯಾರ್ಥಿವೇತನ ಯೋಜನೆಗಳ ಕುರಿತು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದ್ದು ಪ್ರಸ್ತುತ ಇಂದಿನ ಅಂಕಣದಲ್ಲಿ EY ಗ್ಲೋಬಲ್ ಡೆಲಿವರಿ ಸರ್ವೀಸಸ್‌ ನ ವಿದ್ಯಾರ್ಥಿವೇತನ(Scholariship Application)ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ.

How Can Apply For NextGen Edu Scholarship-ಅರ್ಜಿ ಸಲ್ಲಿಸಲು ಅರ್ಹರು:

EY ಗ್ಲೋಬಲ್ ಡೆಲಿವರಿ ಸರ್ವೀಸಸ್‌ ಕಂಪನಿಯಿಂದ ಪ್ರಸ್ತುತ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ವಿದ್ಯಾರ್ಥಿವೇತನ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಈ ಕೆಳಗಿನ ಪಟ್ಟಿಯಲ್ಲಿ ನೀಡಿರುವ ಅರ್ಹತೆಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.

  • ಭಾರತದ ಯಾವುದೇ ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಪ್ರಸ್ತುತ 11 ನೇ ತರಗತಿಯಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
  • ವಿದ್ಯಾರ್ಥಿಯು 10 ನೇ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು INR 3.0 ಲಕ್ಷದ ಒಳಗಿರಬೇಕು.
  • ಅರ್ಜಿದಾರ ಅಭ್ಯರ್ಥಿಯು ಕರ್ನಾಟಕ, ದೆಹಲಿ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ರಾಜ್ಯಕ್ಕೆ ಸೇರಿದವರಾಗಿರಬೇಕು.
  • ಬಡ್ಡಿ4ಸ್ಟಡಿ ಮತ್ತು ಇವೈ ಗ್ಲೋಬಲ್ ಡೆಲಿವರಿ ಸರ್ವೀಸಸ್‌ನ ಉದ್ಯೋಗಿಗಳ ಮಕ್ಕಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

NextGen Edu Scholarship Details-ನೆಕ್ಸ್ಟ್‌ಜೆನ್ ವಿದ್ಯಾರ್ಥಿವೇತನ ಕಾರ್ಯಕ್ರಮ ವಿವರ:

  • ಯೋಜನೆಯ ಹೆಸರು- ನೆಕ್ಸ್ಟ್‌ಜೆನ್ ವಿದ್ಯಾರ್ಥಿವೇತನ
  • ಅರ್ಜಿ ಸಲ್ಲಿಕೆ ಪ್ರಾರಂಭ- 29 ಆಗಸ್ಟ್ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-10 ಸೆಪ್ಟೆಂಬರ್ 2025
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್- Apply Now
  • ಸಹಾಯವಾಣಿ- 01143092248

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಸೆಪ್ಟೆಂಬರ್ 2025

Scholarship Amount-ಎಷ್ಟು ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ?

ಈ ಕಾರ್ಯಕ್ರಮದಡಿ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾಗುವ ವಿದ್ಯಾರ್ಥಿಗೆ ಗರಿಷ್ಟ 15,000/- ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ.

ಇದನ್ನೂ ಓದಿ: Drone Pilot Training-ಉಚಿತ ಡ್ರೋನ್ ಪೈಲೆಟ್ ತರಬೇತಿಗೆ ಅರ್ಜಿ ಆಹ್ವಾನ!

Documents For Scholarship-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಗತ್ಯವಾಗಿ ಒದಗಿಸಬೇಕಾದ ದಾಖಲೆಗಳ ಪಟ್ಟಿ ಹೀಗಿದೆ:

  • ವಿದ್ಯಾರ್ಥಿಯ ಆಧಾರ್ ಕಾರ್ಡ/Adhar Card
  • SSLC ಅಂಕಪಟ್ಟಿ/SSLC Mark Card
  • ಕುಟುಂಬದ ಆದಾಯ ಪ್ರಮಾಣ ಪತ್ರ/Family Income Certificate
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್/Bank Pass Book
  • ವಿದ್ಯಾರ್ಥಿಯ ಇತ್ತೀಚಿನ ಪಾಸ್ ಪೋರ್ಟ ಸೈಜ್ ಪೋಟೋ/Student Photo

ಇದನ್ನೂ ಓದಿ: Scholarship Application-TVS ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ!

Scholarship

Online Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹಂತ-1: ಪ್ರಥಮದಲ್ಲಿ "Scholariship Online Application" ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವಿದ್ಯಾರ್ಥಿವೇತನ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Vamshavruksha Certificate-ವಂಶವೃಕ್ಷ ದೃಢೀಕರಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

ಹಂತ-2: ತದನಂತರ ಈ ಪೇಜ್ ನಲ್ಲಿ "Apply Now" ಬಟನ್ ಮೇಲೆ ಕ್ಲಿಕ್ಕ್ ಮಾಡಿ ಬಳಿಕ "Create an account" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು "Login" ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

ಹಂತ-3: ಲಾಗಿನ್ ಅದ ಬಳಿಕ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: