Ganga kalyana application last date-ಗಂಗಾ ಕಲ್ಯಾಣ,ಸ್ವಾವಲಂಬಿ ಸಾರಥಿ ಸೇರಿದಂತೆ ಇತರೆ 6 ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

2023-24ನೇ ಸಾಲಿನಲ್ಲಿ ವಿವಿಧ ಹಿಂದುಳಿದ ವರ್ಗಗಳ ನಿಗಮಗಳಿಂದ ಅನುಷ್ಥಾನ ಮಾಡುವ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೆ 6 ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

Ganga kalyana application last date-ಗಂಗಾ ಕಲ್ಯಾಣ,ಸ್ವಾವಲಂಬಿ ಸಾರಥಿ ಸೇರಿದಂತೆ ಇತರೆ 6 ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!
Nigama yojana online application

2023-24ನೇ ಸಾಲಿನಲ್ಲಿ ವಿವಿಧ ಹಿಂದುಳಿದ ವರ್ಗಗಳ ನಿಗಮಗಳಿಂದ ಅನುಷ್ಥಾನ ಮಾಡುವ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೆ 6 ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಬೋರ್ವೆಲ್ ಕೊರೆಸಲು ಸಹಾಯಧನ ಪಡೆಯಲು ಗಂಗಾ ಕಲ್ಯಾಣ ಯೋಜನೆ, ಶೈಕ್ಷಣಿಕ ಸಾಲ ಯೋಜನೆಗಳು, ಸ್ವ-ಉದ್ಯೋಗ ಸಾಲ ಮತ್ತು ಸಹಾಯಧನ, ನಾಲ್ಕು ಚಕ್ರದ ವಾಹನ ಖರೀದಿಗೆ ಸಬ್ಸಿಡಿ ಪಡೆಯಲು ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸೌಲಭ್ಯ ಪಡೆಯಲು ಸೇವಾ ಸಿಂಧು ವೆಬ್ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾಸಿಸಲಾಗಿತ್ತು, ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಅಕ್ಟೋಬರ್ 2023 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು.

ಆದರೆ ಈಗ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳನ್ನು ಪಡೆದು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸುವುದು ಬಾಕಿ ಇರುವುದರಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 10 ನವೆಂಬರ್ 2023ರಕ್ಕೆ ಮುಂದೂಡಿಕೆ ಮಾಡಿ ಹೊಸ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Elsol irrigation solution: ಬಿಜಾಪುರದ ಈ ರೈತ ಮೊಬೈಲ್ ಅಪ್ಲಿಕೇಶನ್ ಮೂಲಕ ತಮ್ಮ 20 ಎಕರೆ ದ್ರಾಕ್ಷಿ ತೋಟಕ್ಕೆ ನೀರು ಮತ್ತು ಗೊಬ್ಬರ ಕೊಡುತ್ತಾರೆ!

ದಿನಾಂಕ ವಿಸ್ತರಣೆಯ ಆದೇಶದ ಪ್ರತಿ:

Nigama mandali yojana-ಯಾವೆಲ್ಲ ನಿಗಮಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ ಮತ್ತು ನಿಗಮಗಳ ವೆಬ್ಸೈಟ್ ಲಿಂಕ್:

1. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ): https://dbcdc.karnataka.gov.in/

2. ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ(ನಿ): https://kvcdc.karnataka.gov.in/

3. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ(ನಿ): https://kvldcl.karnataka.gov.in/

4. ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ(ನಿ): https://kmcdc.karnataka.gov.in/

5. ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ(ನಿ): https://uppardevelopment.karnataka.gov.in/

6. ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ(ನಿ): https://kssd.karnataka.gov.in/

7. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ(ನಿ): https://ambigaradevelopment.karnataka.gov.in/

8. ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ(ನಿ): https://kmmd.karnataka.gov.in/

9. ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮ(ನಿ): https://bcwd.karnataka.gov.in/#

10. ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ(ನಿ): https://kvcdcl.karnataka.gov.in/

ಇದನ್ನೂ ಓದಿ: Solar pumpset subsidy- ಸೋಲಾರ್ ಪಂಪ್ ಸೆಟ್‌ಗೆ ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬವುದು? 

How to apply for swabhimani sarati yojana- ಎಲ್ಲಿ ಅರ್ಜಿ ಸಲ್ಲಿಸಬೇಕು:

ಈ ಮೇಲ್ಕಂಡ ನಿಗಮಗಳ ಆಯಾ ಸಮುದಾಯದವರು ಯೋಜನಾವಾರು ಸೌಲಭ್ಯ ಕೋರಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ https://sevasindhu.karnataka.gov.in ಗ್ರಾಮ ಒನ್, ಕರ್ನಾಟಕಒನ್, ಬೆಂಗಳೂರುಒನ್, ಸೇವಾ ಕೇಂದ್ರಗಳಲ್ಲಿ ಕೊನೆಯ ದಿನಾಂಕದ ಒಳಗಾಗಿ(10 ನವೆಂಬರ್ 2023) ಅಗತ್ಯ ದಾಖಲೆಗಳ ಸಮೇತ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.

ಯಾವೆಲ್ಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ:

  • ಗಂಗಾ ಕಲ್ಯಾಣ ಯೋಜನೆ.
  • ಶೈಕ್ಷಣಿಕ ಸಾಲ ಯೋಜನೆಗಳು.
  • ನಾಲ್ಕು ಚಕ್ರದ ವಾಹನ ಖರೀದಿಗೆ ಸಬ್ಸಿಡಿ ಪಡೆಯಲು ಸ್ವಾವಲಂಬಿ ಸಾರಥಿ ಯೋಜನೆ.
  • ಸ್ವ-ಉದ್ಯೋಗ ಸಾಲ ಮತ್ತು ಸಹಾಯಧನ.
  • ಭೂ ಒಡೆತನ ಯೋಜನೆ.

ಈ ಯೋಜನೆಗಳ ಕುರಿತು ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತ ಅರ್ಜಿದಾರರು ನಿಮ್ಮ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ರವರ ಕಚೇರಿಯವರನ್ನು ಸಂಪರ್ಕಿಸಿ.

ನಿಗಮದ ಯೋಜನೆಯ ಕುರಿತು ನಮ್ಮ ಪುಟದ ಇತರೆ ಅಂಕಣಗಳು:

Lingayatha nigama Yojana-2023: ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೆ 6 ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

VOKKALIGA COMMUNITY DEVELOPMENT SCHEME: ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಗಂಗ ಕಲ್ಯಾಣ ಯೋಜನೆ ಸೇರಿ ಇತರೆ 6 ಯೋಜನೆಗಳಿಗೆ ಅರ್ಜಿ ಆಹ್ವಾನ!

Ganga kalyana yojane- ಯಾವೆಲ್ಲ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಸಹಾಯಧನ ಪಡೆಯಬವುದು?

Vehicle subsidy scheme-2023: ವಾಹನ ಖರೀದಿಸಲು ಸಹಾಯಧನಕ್ಕೆ ಅರ್ಜಿ ಅಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬವುದು?

Ganga kalyana yojane-2023: ಬೋರ್ವೆಲ್ ಗೆ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ! ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ.