NMMS ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

July 1, 2026 | Siddesh
NMMS ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!
Share Now:

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರವು 2026-27ನೇ ಸಾಲಿನ NMMS ವಿದ್ಯಾರ್ಥಿವೇತನ(NMMS Scholarship) ಯೋಜನೆ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರತಿಷ್ಠಿತ ವಿದ್ಯಾರ್ಥಿವೇತನ ಯೋಜನೆಯು ಆರ್ಥಿಕವಾಗಿ ಹಿಂದುಳಿದಿರುವ ಆದರೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣವನ್ನು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಸಲು ಉತ್ತಮ ಆಸರೆಯಾಗಲಿದೆ. ಈಗಾಗಲೇ NMMS ಪರೀಕ್ಷೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಪ್ರಸಕ್ತ ಸಾಲಿನಲ್ಲಿ NMMS ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುವ 9, 10, 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ಮಾತ್ರ ಈ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ(NMMS Scholarship Application) ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯು ಪ್ರತಿಭಾವಂತ ಗ್ರಾಮೀಣ ಹಾಗೂ ನಗರ ಪ್ರದೇಶದ ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳ ಶಿಕ್ಷಣ ಕುಂಠಿತಗೊಳ್ಳುವುದನ್ನು ತಪ್ಪಿಸುವ ಉದ್ದೇಶ ಹೊಂದಿದೆ.

ಇದನ್ನೂ ಓದಿ: Voter list-2026: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ತಪ್ಪದೇ ಈ ಮಾಹಿತಿ ತಿಳಿಯಿರಿ!

ಅರ್ಜಿ ಸಲ್ಲಿಸಲು ಅಧಿಕೃತ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (NSP) ವೆಬ್‌ಸೈಟ್ ಆದ www.scholarships.gov.in ಗೆ ಭೇಟಿ ನೀಡಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 31-08-2026 ಕೊನೆಯ ದಿನಾಂಕವಾಗಿದ್ದು, ಕೊನೆಯ ಕ್ಷಣದಲ್ಲಿ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ವಿದ್ಯಾರ್ಥಿಗಳು(NMMS Scholarship Scheme) ಹಾಗೂ ಪೋಷಕರು ಆದಷ್ಟು ಬೇಗ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸುವಂತೆ ಇಲಾಖೆಯ ಅಧಿಕೃತ ಪ್ರಕಟಣೆಯಲ್ಲಿ ಸೂಚಿಸಲಾಗಿದ್ದು ಈ ಯೋಜನೆಯ ಬಗ್ಗೆ ಇನ್ನಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಆನ್‌ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ www.scholarships.gov.in ಅರ್ಜಿ ಸಲ್ಲಿಸಲು ಆಗಸ್ಟ್ 31, 2026 ಕೊನೆಯ ದಿನಾಂಕವಾಗಿದೆ.

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • NMMS ಗೆ ಆಯ್ಕೆಯಾದ 9,10,11 ಮತ್ತು 12ನೇ ತರಗತಿಯ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಮಾರ್ಗಸೂಚಿ ಪ್ರಕಾರ ಅರ್ಹರಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: District Ministers-ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ!

NMMS Scholarship Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ತಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು.

Step-1: ಅರ್ಜಿದಾರ ವಿದ್ಯಾರ್ಥಿಯು ಮೊದಲಿಗೆ Apply Now ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

NMMS Scholarship

Step-2: ಇದಾದ ಬಳಿಕ ಹೊಸ ಬಳಕೆದಾರರಾಗಿದ್ದರೇ? New User ಆಯ್ಕೆಯ ಮುಂದೆ ಇರುವ "Register Yourself" ಬಟನ್ ಮೇಲೆ ಕ್ಲಿಕ್ ಮಾಡಿ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಬಳಕೆದಾರ ಐಡಿಯನ್ನು ಸಕ್ರಿಯಗೊಳಿಸಿಕೊಂಡು ಬಳಿಕ ಲಾಗಿನ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

Step-3: ಲಾಗಿನ್ ಆದ ನಂತರ ಇಲ್ಲಿ ಲಭ್ಯವಿರುವ ಎಲ್ಲಾ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Dairy Farmers App-ರೈತರು ಪ್ರತಿ ನಿತ್ಯ ಡೈರಿಗೆ ಹಾಕುವ ಹಾಲಿನ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ನಲ್ಲೇ ಪಡೆಯಬಹುದು!

Documents For NMMS Scholarship-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

NMMS ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

  • ಅರ್ಜಿದಾರ ವಿದ್ಯಾರ್ಥಿಯ ಆಧಾರ್ ಕಾರ್ಡ.
  • ಜಾತಿ ಪ್ರಮಾಣ ಪತ್ರ.
  • ನವೀಕೃತ ಆದಾಯ ಪ್ರಮಾಣ ಪತ್ರ.
  • ಆಧಾರ್ ಕಾರ್ಡಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್ ಬುಕ್.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: