Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeNew postsAIIMS Nursing Officer job- 4,000 ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ!

AIIMS Nursing Officer job- 4,000 ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ!

ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೇಶದ ಎಲ್ಲಾ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (AIIMS) ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ(Nursing Officer Recruitment ) ಮಾಡಿಕೊಳ್ಳಲು ದೆಹಲಿ ಏಮ್ಸ್ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಿದೆ.

ದೇಶಾದ್ಯಂತ ಇರುವ ವಿವಿಧ ಏಮ್ಸ್ ಸಂಸ್ಥೆಗಳಲ್ಲಿ ಒಟ್ಟು ನಿರೀಕ್ಷಿತ 3,500 ದಿಂದ 4,000 ಹುದ್ದೆಗಳನ್ನು ನೇಮಕಾತಿ(Nursing job) ಮಾಡಿಕೊಳ್ಳಲು ಏಮ್ಸ್ ಸಂಸ್ಥೆಯು ಮುಂದಾಗಿದೆ. 

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆಯಾದವರೆಗೆ ಸಿಗುವ ವೇತನ ಹಾಗೂ ಈ ನೇಮಕಾತಿಯ ಇನ್ನಿತರೆ  ಮಾಹಿತಿಗಳನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದ್ದು ನರ್ಸಿಂಗ್ ಪದವಿ ಮುಗಿಸಿರುವವರು ಇದರ ಸದ್ಬಳಕೆ ಮಾಡಿಕೊಳ್ಳಿ.

ಇದನ್ನೂ ಓದಿ: IBPS Banking Jobs-2024: 5,351 ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ! ದೇಶದ ಒಟ್ಟು 11 ವಿವಿಧ ಬ್ಯಾಂಕ್ ಗಳಲ್ಲಿ ಉದ್ಯೋಗವಕಾಶ!

Nursing Officer Recruitment details- ನೇಮಕಾತಿ ವಿವರ : 

• ನೇಮಕಾತಿ ಸಂಸ್ಥೆ – All India Institute of Medical Science, Delhi 
• ಹುದ್ದೆಗಳ ಸಂಖ್ಯೆ – 4,000
• ನೇಮಕಾತಿ ಸ್ಥಳ – All India

ಹುದ್ದೆಗಳ ವಿವರ: ನೇಮಕಾತಿ ಮಾಡಿಕೊಳ್ಳುತ್ತಿರುವ 4000 ಹುದ್ದೆಗಳಲ್ಲಿ ಶೇಕಡ 80% ರಷ್ಟು ಹುದ್ದೆಗಳನ್ನು ಅರ್ಹತೆ ಇರುವ ಮಹಿಳೆಯರಿಗಾಗಿ ಮೀಸಲಿಡಲಾಗಿದ್ದು, ಉಳಿದ ಶೇಕಡ 20ರಷ್ಟು ಹುದ್ದೆಗಳನ್ನು ಪುರುಷರಿಗಾಗಿ ಮೀಸಲಿಡಲಾಗಿದೆ.

Education qualification-ನರ್ಸಿಂಗ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳು : 

B. Sc Nursing ಪದವಿ, PB B. Sc ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯಾ ರಾಜ್ಯ ಅಥವಾ ಭಾರತೀಯ ನರ್ಸಿಂಗ್ ಕೌನ್ಸಿಲ್ ನಿಂದ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿರುತ್ತದೆ.

ಇದನ್ನೂ ಓದಿ: Business loan application-ಸ್ವ-ಉದ್ಯೋಗ ಮಾಡಲು ಶೇ 4ರ ಬಡ್ಡಿದರದಲ್ಲಿ 2.0 ಲಕ್ಷ ಸಾಲ ಮತ್ತು ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Age limit-ವಯೋಮಿತಿ- ಕನಿಷ್ಠ 18ರಿಂದ ಗರಿಷ್ಠ 30 ವರ್ಷದ ವಯೋಮಿತಿ ನಿಗದಿಪಡಿಸಲಾಗಿದ್ದು ಮೀಸಲಾತಿ ವರ್ಗಗಳ ಅಡಿಯಲ್ಲಿ ಬರುವವರಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನಿಗದಿಪಡಿಸಲಾಗಿದೆ.

AIIMS Nursing Officer Recruitment 2024 – ಆಯ್ಕೆಯಾಗುವ ನರ್ಸಿಂಗ್ ಅಧಿಕಾರಿಗಳಿಗೆ ಸಿಗುವ ವೇತನ – ₹34,800 ರೂ. ವರೆಗೆ 
ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು?

ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಸಾಮಾನ್ಯ ಅರ್ಹತಾ ಪರೀಕ್ಷೆಯನ್ನು  (NORCET), ಕಂಪ್ಯೂಟರ್ ಆಧರಿತ ಪರೀಕ್ಷೆ ಮುಖಾಂತರ ಎರಡು ಹಂತದಲ್ಲಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಪರೀಕ್ಷೆಯ ಪ್ರಮುಖ ದಿನಾಂಕಗಳು ಈ ಕೆಳಗಿನಂತಿರುತ್ತದೆ.

• ಪೂರ್ವಭಾವಿ ಪರೀಕ್ಷೆ – 15 ಸೆಪ್ಟೆಂಬರ್ 2024
• ಮುಖ್ಯ ಪರೀಕ್ಷೆ – 04 ಅಕ್ಟೋಬರ್ 2024

ಇದನ್ನೂ ಓದಿ: Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

Application fee-ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು :

• ಸಾಮಾನ್ಯ ವರ್ಗದ ಅಭ್ಯರ್ಥಿಗಳು ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ₹3,000 ರೂ. ಅರ್ಜಿ ಶುಲ್ಕ ಪಾವತಿಸಬೇಕು.
• ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದವರು ₹2,400 ರೂ. ಪಾವತಿಸಬೇಕು.
• ಅಂಗವಿಕಲ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.

Last date for online application-ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು : 

• ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ – 01 ಆಗಸ್ಟ್ 2024
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – 21 ಆಗಸ್ಟ್ 2024

ಇದನ್ನೂ ಓದಿ: Borewell Subsidy- ಬೋರ್ವೆಲ್ ಕೊರೆಸಲು ರೂ 4.25 ಲಕ್ಷ ಸಬ್ಸಿಡಿ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನ!

Usefull website links-ನೇಮಕಾತಿಯ ಪ್ರಮುಖ ಲಿಂಕುಗಳು : 

• ಅರ್ಜಿ ಸಲ್ಲಿಸುವ ಲಿಂಕ್ – Click here
• ಅಧಿಸೂಚನೆ – Download Now

Most Popular

Latest Articles

- Advertisment -

Related Articles