Online E-Khata-ಇನ್ಮುಂದೆ ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಬಹುದು!

December 20, 2025 | Siddesh
Online E-Khata-ಇನ್ಮುಂದೆ ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಬಹುದು!
Share Now:

ನಗರ ವ್ಯಾಪ್ತಿಯಲ್ಲಿ ಆಸ್ತಿಯನ್ನು ಹೊಂದಿರುವ ನಾಗರಿಕರು ಇನ್ಮುಂಡೆ ಮನೆಯಿಂದಲ್ಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಇ-ಖಾತಾವನ್ನು(E-Khata) ಪಡೆದಿಕೊಳ್ಳಲು ಪೌರಾಡಳಿತ ಇಲಾಖೆಯಿಂದ ನೂತನ ವೆಬ್ಸೈಟ್ ಅನ್ನು ಬಿಡುಗಡೆ ಮಾಡಲಾಗಿದ್ದು, ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಸಚಿವರುಗಳು ಪೌರಾಡಳಿತ ಇಲಾಖೆಯಿಂದ ನೂತನವಾಗಿ ಜಾರಿಗೆ ತಂದಿರುವ ಇ-ಖಾತಾ(E-Khata Online Application) ಯೋಜನೆಗೆ ಸುವರ್ಣಸೌಧದಲ್ಲಿ 2025 ನೇ ಡಿಸೆಂಬರ್ 18 ರಂದು ಅಧಿಕೃತವಾಗಿ ಚಾಲನೆ ನೀಡಿದ್ದು, ಏನಿದು ಇ-ಖಾತಾ? ಈ ವೆಬ್ಸೈಟ್ ಮೂಲಕ ದಾಖಲೆಯನ್ನು ಪಡೆಯುವುದು ಹೇಗೆ? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: BPL Card News-ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ

ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳನ್ನು(e-Khata Website) ಪಡೆದುಕೊಳ್ಳಲು ಸರಕಾರಿ ಕಚೇರಿಗಳ ಅಲೆದಾಟಕ್ಕೆ ಬ್ರೇಕ್ ಹಾಕಲು ಮತ್ತು ಡಿಜಿಟಲ್ ವ್ಯವಸ್ಥೆಯನ್ನು ಸಂಪರ್ಕವಾಗಿ ಬಳಕೆ ಮಾಡಿಕೊಂಡು ಜನ ಸ್ನೇಹಿ ಆಡಳಿತವನ್ನು ಒದಗಿಸುವ ನಿಟ್ಟಿನಲ್ಲಿ ಪ್ರಸ್ತುತ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರದ ಅನೇಕ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಅಗತ್ಯ ಸೌಲಭ್ಯವನ್ನು ಪಡೆಯುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

What Is e-Khatha: ಇ-ಖಾತಾ (e-Khata) ಎಂದರೆ ಏನು?

ಇ-ಖಾತಾ ಎಂದರೆ ನಗರ/ಪಟ್ಟಣ ಸ್ಥಳೀಯ ಸಂಸ್ಥೆಗಳು (BBMP, ಪುರಸಭೆ, ನಗರಸಭೆ) ಆಸ್ತಿ ಮಾಲೀಕರ ವಿವರಗಳನ್ನು ಆನ್‌ಲೈನ್‌ (ಡಿಜಿಟಲ್) ರೂಪದಲ್ಲಿ ದಾಖಲಿಸಿ ಸರಕಾರದಿಂದ ವಿತರಣೆ ಮಾಡುವ ಅಧಿಕೃತ ದಾಖಲೆ ಇದಾಗಿದೆ.

ಇ-ಖಾತಾ ದಾಖಲೆಯಲ್ಲಿ ಆಸ್ತಿಯ ಮಾಲೀಕನ ಹೆಸರು, ಆಸ್ತಿ ಸಂಖ್ಯೆ, ವಿಳಾಸ, ಆಸ್ತಿಯ ವಿಸ್ತೀರ್ಣ, ತೆರಿಗೆ ವಿವರಗಳನ್ನು ನಮೂದಿಸಿರಲಾಗುತ್ತದೆ.

ಇದನ್ನೂ ಓದಿ: Udyam Certificate-ಬ್ಯಾಂಕ್ ಸಾಲ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ! ಈ ದಾಖಲೆ ಪಡೆಯುವುದು ಹೇಗೆ!

e-Khata Importance-ಇ-ಖಾತಾ ಪಡೆಯುವುದು ಏಕೆ ಮುಖ್ಯ?

ಆಸ್ತಿ ತೆರಿಗೆ ಪಾವತಿ ಮಾಡಲು.

ಆಸ್ತಿಯ ಮೇಲೆ ಬ್ಯಾಂಕ್ ಮೂಲಕ ಸಾಲವನ್ನು ಪಡೆಯಲು.

ಮಾರಾಟ/ಖರೀದಿ ನೋಂದಣಿಗೆ.

ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿದ ಸೇವೆಗಳನ್ನು ಮತ್ತು ಯೋಜನೆಗಳ ಪ್ರಯೋಜನವನ್ನು ಪಡೆಯಲು ಇ-ಖಾತಾ ದಾಖಲೆ ಅವಶ್ಯಕ.

ಇದನ್ನೂ ಓದಿ: PM-Kisan ID-ಕೇಂದ್ರ ಸರಕಾರದಿಂದ ಪಿಎಂ ಕಿಸಾನ್ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಐಡಿ!

e khata Online Application-ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಯಾವೆಲ್ಲ ಸೇವೆ ಪಡೆಯಬಹುದು?

ನಗರ ವ್ಯಾಪ್ತಿಯಲ್ಲಿ ಆಸ್ತಿಯನ್ನು ಹೊಂದಿರುವ ಸಾರ್ವಜನಿಕರು www.eaasthi.karnataka.gov.in ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಯಾವೆಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎನ್ನುವ ವಿವರ ಈ ಕೆಳಗಿನಂತಿವೆ:

  • ನಗರ ನಿವಾಸಿಗಳ 45 ಲಕ್ಷಕ್ಕೂ ಹೆಚ್ಚು ಕರಡು ಆಸ್ತಿ ದಾಖಲೆ ಇ-ಆಸ್ತಿ ತಂತ್ರಾಂಶದಲ್ಲಿ ಪ್ರಕಟಿಸಲಾಗಿದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ದಾಖಲೆಗಳನ್ನು ಪಡೆದುಕೊಳ್ಳಬಹುದು.
  • ನಾಗರಿಕರು ತಮ್ಮ ಮೊಬೈಲ್ ಮೂಲಕವೇ ಆನ್ಲೈನ್ ನಲ್ಲಿ www.eaasthi.karnataka.gov.in ವೆಬ್ಸೈಟ್ ಅನ್ನು ಪ್ರವೇಸ ಮಾಡಿ ನಿಮ್ಮ ಆಸ್ತಿ ದಾಖಲೆ ಪರಿಶೀಲಿಸಬಹುದು.
  • ಅಗತ್ಯವಿದ್ದಲ್ಲಿ ದಾಖಲೆ ನೀಡಿ ತಿದ್ದುಪಡಿ/ತಕರಾರು ಅರ್ಜಿ ಸಲ್ಲಿಸಬಹುದು.
  • ಆನ್‌ಲೈನ್‌ನಲ್ಲೇ ಶುಲ್ಕ ಪಾವತಿಸಿ ದಾಖಲೆ ಸಲ್ಲಿಸಿ ಅನುಮೋದಿತ ಅಧಿಕೃತ ಇ-ಖಾತೆ ಪಡೆಯಬಹುದು.
  • K-1 ಕೇಂದ್ರಗಳಲ್ಲೂ ಸಹ ನಾಗರಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು.
  • ಇ-ಖಾತಾ ಪಡೆಯುವ ಮೂಲಕ ಸರಳವಾಗಿ ಆಸ್ತಿ ತೆರಿಗೆಯನ್ನು ಆನ್‌ಲೈನ್‌ ಮುಖಾಂತರ ಪಾವತಿಸಬಹುದು.

ಇದನ್ನೂ ಓದಿ: Free Drone Training-ಕ್ರಿಶ್ಚಿಯನ್ ನಿಗಮದಿಂದ ಉಚಿತ 15 ದಿನಗಳ ಡ್ರೋನ್ ತರಬೇತಿ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Required Documents For e-Khata-ಇ-ಖಾತಾಕ್ಕಾಗಿ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

ಸಾರ್ವಜನಿಕರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಇ-ಖಾತಾವನ್ನು ಪಡೆಯಲು ಅವಶ್ಯವಿರುವ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

1) ಮಾಲೀಕರ ಭಾವಚಿತ್ರ ಮತ್ತು ಆಧಾರ್

2) ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ

3) ಸ್ವತ್ತಿನ ಕ್ರಯ / ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಶದಿಂದ ವಿದ್ಯುನ್ಮಾನವಾಗಿ ಪಡೆದುಕೊಳ್ಳುವುದು)

4) ವಿದ್ಯುತ್ ಆರ್ ಆ‌ರ್ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ)

5) ಸ್ವತ್ತಿನ ಛಾಯಾಚಿತ್ರ

6) EC: 15/16

7) ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳು

ಇದನ್ನೂ ಓದಿ: Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ 18,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ವಿವರ!

Online e-khatha Application- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ನಗರ ವ್ಯಾಪ್ತಿಯಲ್ಲಿ ಆಸ್ತಿಯನ್ನು ಹೊಂದಿರುವ ನಾಗರಿಕರು ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಅಧಿಕೃತ www.eaasthi.karnataka.gov.in ಜಾಲತಾಣವನ್ನು ಪ್ರವೇಶ ಮಾಡಿ ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಇ-ಖಾತಾವನ್ನು ಪಡೆದುಕೊಳ್ಳಬಹುದು.

Step-1: ಮೊದಲಿಗೆ ಈ "Online e-khatha Application" ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ https://eaasthi.karnataka.gov.in ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Online E-Khata Application

ಇದನ್ನೂ ಓದಿ: Pension Application-ಸಂದ್ಯ ಸುರಕ್ಷಾ ಯೋಜನೆಯಡಿ ಪ್ರತಿ ತಿಂಗಳು ರೂ 1200/- ಪಿಂಚಣಿ ಪಡೆಯುವುದು ಹೇಗೆ?

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಕಾಣುವ "eKhata" ಆಯ್ಕೆಯ ಮೇಲೆ ಕ್ಲಿಕ್ ಮಾಡಿ "Existing Khata" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ನಂತರ ಅಧಿಕೃತ ಇ-ಆಸ್ತಿ ಜಾಲತಾಣ ತೆರೆದುಕೊಳ್ಳುತ್ತದೆ ಇಲ್ಲಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಮತ್ತು OTP ಅನ್ನು ನಮೂದಿಸಿ ಲಾಗಿನ್ ಅದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಇ-ಖಾತಾವನ್ನು ಪಡೆದುಕೊಳ್ಳಬಹುದು.

E-Khatha Helpline-ಹೆಚ್ಚಿನ ಮಾಹಿತಿ ಪಡೆಯಲು ಸಹಾಯವಾಣಿ- 7259585959
e-Khata Website-ಇ-ಖಾತಾ ವೆಬ್ಸೈಟ್- Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: