Parivartan Scholarship-ಪರಿವರ್ತನ್ ಯೋಜನೆಯಡಿ ಪದವಿ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

December 23, 2025 | Siddesh
Parivartan Scholarship-ಪರಿವರ್ತನ್ ಯೋಜನೆಯಡಿ ಪದವಿ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!
Share Now:

ಪರಿವರ್ತನ್ ಶೈಕ್ಷಣಿಕ ಬಿಕ್ಕಟ್ಟು ವಿದ್ಯಾರ್ಥಿವೇತನ ಬೆಂಬಲ (ECSS) ಯೋಜನೆಯ ಅಡಿಯಲ್ಲಿ 2025-2026 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ ವಿದ್ಯಾರ್ಥಿಗಳಿಗೆ (Parivartan ECSS Scholarship) ECSS ಕಾರ್ಯಕ್ರಮದ ಅಡಿಯಲ್ಲಿ ₹30,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನವು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳ ಮುಂದಿನ ಉನ್ನತ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯವನ್ನು ಮಾಡಲು HDFC ಬ್ಯಾಂಕಿನಿಂದ ಪರಿವರ್ತನ್(HDFC Bank Parivartan Scholarship) ವಿದ್ಯಾರ್ಥಿವೇತನವನನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Veterinary Subsidy Schemes-ಪಶುಪಾಲನಾ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಸಬ್ಸಿಡಿ ಯೋಜನೆಗಳಾವುವು?

ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರ‍ೆಲ್ಲ ವಿದ್ಯಾರ್ಥಿಗಳು ಅರ್ಹರು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಹೇಗೆ ಸಲ್ಲಿಸಬಹುದು? ಅರ್ಜಿಗೆ ಸಂಬಂದಿಸಿದ ಅವಶ್ಯಕ ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಈ ಕಾರ್ಯಕ್ರಮದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಬಹುದು?

2025-2026 ನೇ ಸಾಲಿನ ಪರಿವರ್ತನ್ ECSS ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸಲು ಮುಕ್ತಾಯದ ದಿನಾಂಕ: 31 ಡಿಸೆಂಬರ್ 2025

ಇದನ್ನೂ ಓದಿ: PM Surya Ghar Scheme-PM ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್! ಕೂಡಲೇ ಅರ್ಜಿ ಸಲ್ಲಿಸಿ!

ಅರ್ಜಿಯನ್ನು ಸಲ್ಲಿಸಲು ಯಾರ‍ೆಲ್ಲ ಅರ್ಹರು?

ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

1ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳು,ITI,ಡಿಪ್ಲೋಮಾ ವಿದ್ಯಾರ್ಥಿಗಳು,ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ (Classes 1 to 12, or pursuing diploma, ITI, and polytechnic courses in private, government, or government-aided schools.M.Com,M.A, M.Tech, M.B.A,B.Com., B.Sc., B.A., B.C.A., etc., and professional courses such as B.Tech., M.B.B.S., L.L.B., B.Arch., Nursing) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಿದ್ಯಾರ್ಥಿಯು ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ₹2.5 ಲಕ್ಷದ ಒಳಗಿರಬೇಕು.

ಇದನ್ನೂ ಓದಿ: RTC Crop Name-ಪಹಣಿಯಲ್ಲಿ ಬೆಳೆ ಮಾಹಿತಿ ತಪ್ಪಾಗಿದ್ದರೆ ಸರಿಪಡಿಸಿಕೊಳ್ಳುವುದು ಹೇಗೆ?

ಶೈಕ್ಷಣಿಕ ವೆಚ್ಚವನ್ನು ಭರಿಸಲು ಕಷ್ಟಪಟ್ಟು ಶಾಲೆ ಅಥವಾ ಕಾಲೇಜು ತೊರೆಯುವ ಪರಿಸ್ಥಿತಿಗೆ ತಲುಪಿರುವ ವಿದ್ಯಾರ್ಥಿಗಳಿಗೆ ಈ ಯೋಜನೆದಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ಸ್ಪಷ್ಟಪಡಿಸುತ್ತದೆ.

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು/ಕಾಲೇಜುಗಳಲ್ಲಿ ಓದುತ್ತಿರುವ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

UGC ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಗೆ ಅರ್ಹರಾಗಿರುತ್ತಾರೆ.

ಇದನ್ನೂ ಓದಿ: Dairy Equipment Subsidy-ಹಸು ಸಾಕಾಣಿಕೆಗೆ ಪೂರಕ ಯಂತ್ರ ಮತ್ತು ಕೊಟ್ಟಿ ನಿರ್ಮಾಣಕ್ಕೆ ಸಬ್ಸಿಡಿ ಪಡೆಯುವುದು ಹೇಗೆ?

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ್/Aadhar card
  • ಪ್ರಸ್ತುತ ವರ್ಷದ ಶುಲ್ಕ ರಶೀದಿ/Current year fee receipt
  • ಹಿಂದಿನ ತರಗತಿ ಅಂಕಪಟ್ಟಿ/Marks Card
  • ಆದಾಯ ಪ್ರಮಾಣ ಪತ್ರ/Income Certificate
  • ಜಾತಿ ಪ್ರಮಾಣ ಪತ್ರ/Caste Certificate
  • ಬ್ಯಾಂಕ್ ಪಾಸ್ ಪುಸ್ತಕ/Bank Passbook
  • ಫೋಟೊ/Photocopy

ಇದನ್ನೂ ಓದಿ: Digital e-Stamp -ಛಾಪಾ ಕಾಗದ ವಹಿವಾಟಿಗೆ ಸ್ಟ್ಯಾಂಪ್ ಪೇಪರ್ ಬದಲಿಗೆ ಇ-ಸ್ಟ್ಯಾಂಪ್: ಸಚಿವ ಕೃಷ್ಣಬೈರೇಗೌಡ!

ಇದನ್ನೂ ಓದಿ: Free Drone Training-ಕ್ರಿಶ್ಚಿಯನ್ ನಿಗಮದಿಂದ ಉಚಿತ 15 ದಿನಗಳ ಡ್ರೋನ್ ತರಬೇತಿ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

ಅರ್ಜಿಯನ್ನು ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ:

ಪರಿವರ್ತನ್ ECSS ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು.

Step-1: ಆಸಕ್ತ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "Click Here" ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Ganga Kalyana Yojana-ಬೋರ್ವೆಲ್ ಕೊರೆಸಲು ₹4.0 ಲಕ್ಷ ಸಹಾಯಧನ! ಇಲ್ಲಿದೆ ಸಂಪೂರ್ಣ ವಿವರ!

For More Information-ಈ ವಿದ್ಯಾರ್ಥಿವೇತನದ ಬಗ್ಗೆ ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: