Pension Application-ಸಂದ್ಯ ಸುರಕ್ಷಾ ಯೋಜನೆಯಡಿ ಪ್ರತಿ ತಿಂಗಳು ರೂ 1200/- ಪಿಂಚಣಿ ಪಡೆಯುವುದು ಹೇಗೆ?

December 18, 2025 | Siddesh
Pension Application-ಸಂದ್ಯ ಸುರಕ್ಷಾ ಯೋಜನೆಯಡಿ ಪ್ರತಿ ತಿಂಗಳು ರೂ 1200/- ಪಿಂಚಣಿ ಪಡೆಯುವುದು ಹೇಗೆ?
Share Now:

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಹಿರಿಯ ನಾಗರಿಕರಿಗೆ ತಮ್ಮ ದೈನಂದಿನ ಖರ್ಚು-ವೆಚ್ಚವನ್ನು ನಿಭಾಯಿಸಲು ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ ಪಿಂಚಣಿ ನಿರ್ದೇಶನಾಲಯದಿಂದ(Pension Online Application) ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಅನೇಕ ಸಾರ್ವಜನಿಕರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯ(Pension Scheme) ಸೌಲಭ್ಯವನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಇದಕ್ಕಾಗಿ ಅನುಸರಿಸಬೇಕಾದ ಕ್ರಮಗಳು ಯಾವುವು ಎನ್ನುವ ಅಗತ್ಯ ಮಾಹಿತಿಯ ಕೊರತೆ ಇರುವುದರಿಂದ ನಮ್ಮ ಪುಟದಿಂದ ಕಾಲ ಕಾಲಕ್ಕೆ ಸರಕಾರಿ ಯೋಜನೆಗಳ ಸೌಲಭ್ಯ ಪಡೆಯುವುದು ಹೇಗೆ ಎನ್ನುವ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇಂದಿನ ಲೇಖನದಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯಡಿ ಪ್ರತಿ ತಿಂಗಳು ರೂ 1200/- ಪಿಂಚಣಿ ಪಡೆಯುವುದು ಹೇಗೆ? ಎನ್ನುವ ಮಾಹಿತಿಯನ್ನು ವಿವರಿಸಲಾಗಿದೆ.

ಇದನ್ನೂ ಓದಿ: Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ 18,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ವಿವರ!

ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು(Pinchani Yojana) ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಯಾವೆಲ್ಲ ಮಾನದಂಡಗಳನ್ನು ಅನುಸರಿಸಲಾಗುತ್ತದೆ? ಅರ್ಜಿ ಸಲ್ಲಿಸಲು ಬೇಕಾಗುವ ಅವಶ್ಯಕ ದಾಖಲೆಗಳು ಯಾವುವು? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ಪ್ರಕಟಿಸಲಾಗಿದೆ.

Pension Scheme Eligibility Criteria-ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳು:

ಕಂದಾಯ ಇಲಾಖೆಯ ಪಿಂಚಣಿ ನಿರ್ದೇಶನಾಲಯದಿಂದ ಹಿರಿಯ ನಾಗರಿಕರಿಗೆ ಆರ್ಥಿಕ ನೆರವನ್ನು ಒದಗಿಸಲು ಜಾರಿಯಲ್ಲಿರುವ ಪಿಂಚಣಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ವಿವರ ಈ ಕೆಳಗಿನಂತಿವೆ:

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆ ಅರ್ಜಿದಾರ ಅಭ್ಯರ್ಥಿಗೆ 60 ವರ್ಷ ಭರ್ತಿಯಾಗಿರಬೇಕು.
ಸಂಧ್ಯಾ ಸುರಕ್ಷಾ ಯೋಜನೆಗೆ ಅರ್ಜಿದಾರ ಅಭ್ಯರ್ಥಿಗೆ 65 ವರ್ಷ ಭರ್ತಿಯಾಗಿರಬೇಕು.
ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ರಾಜ್ಯ ಮತ್ತು ಕೇಂದ್ರ ಸರಕಾರಿ ನೌಕರಿಯಲ್ಲಿದ್ದು ನಿವೃತ್ತಿ ಹೊಂದಿರುವವರು ಹಾಗೂ ಸರಕಾರಿ ಉದ್ಯೋಗದಲ್ಲಿರುವ ಕುಟುಂಬದ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: NLM Subsidy Yojana-NLM ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಉದ್ದಿಮೆ ಪ್ರಾರಂಭಿಸಲು ಅವಕಾಶ!

Karnataka Pension Scheme List-ನಿರ್ದೇಶನಾಲಯದ ಪಿಂಚಣಿ ಯೋಜನೆಗಳು:

ಕಂದಾಯ ಇಲಾಖೆಯ ಪಿಂಚಣಿ ನಿರ್ದೇಶನಾಲಯದಿಂದ ಪ್ರಸ್ತುತ ಜಾರಿಯಲ್ಲಿರುವ ಪಿಂಚಣಿ ಯೋಜನೆಗಳ ಪಟ್ಟಿ ಈ ಕೆಳಗಿನಂದೆ:

  • ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆ
  • ವಿಧವಾ ಪಿಂಚಣಿ ಯೋಜನೆ
  • ಅಂಗವಿಕಲ ಪಿಂಚಣಿ ಯೋಜನೆ
  • ಸಂಧ್ಯಾ ಸುರಕ್ಷಾ ಯೋಜನೆ
  • ಮನಸ್ವಿನಿ ಯೋಜನೆ
  • ಮೈತ್ರಿ ಯೋಜನೆ
  • ಸಾಲದ ಭಾದೆಯಿಂದ ಸಂಕಷ್ಟಕ್ಕೆ ಒಳಗಾಗಿ ಆತ್ಮಹತ್ಯ ಮಾಡಿಕೊಂಡ ರೈತರ ಪತ್ನಿಗೆ ಪಿಂಚಣಿ ಯೋಜನೆ
  • ಆಸಿಡ್‌ ದಾಳಿಗೆ ಒಳಗಾದ ಮಹಿಳೆಯರಿಗೆ ಪಿಂಚಣಿ ಯೋಜನೆ
  • ಎಂಡೋಸಲ್ಫಾನ್‌ ಸಂತ್ರಸ್ಥರಿಗೆ ಮಾಸಿಕ ಪಿಂಚಣಿ ಯೋಜನೆ
  • ಮಾಜಿ ದೇವದಾಸಿ ಮಾಸಾಶನ ಯೋಜನೆ
  • ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಹಾಗೂ ಕುಟುಂಬ ಪಿಂಚಣಿ
  • ಗೋವಾ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಹಾಗೂ ಕುಟುಂಬ ಪಿಂಚಣಿ

ಇದನ್ನೂ ಓದಿ: Women SHG Subsidy-ಮಹಿಳೆಯರಿಗೆ ಗುಡ್ ನ್ಯೂಸ್! ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

How To Apply For Pension Scheme-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ಮಾಹಿತಿಯನ್ನು ಪಡೆದು ಇಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹೋಬಳಿ ಮಟ್ಟದ ನಾಡಕಚೇರಿಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಜೊತೆಗೆ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರದ ಮೂಲಕವು ಸಹ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Required Documents For Pension Scheme-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು ಯಾವುವು?

ಪ್ರತಿ ತಿಂಗಳು ಪಿಂಚಣಿಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಒದಗಿಸಬೇಕಾದ ಅಗತ್ಯ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

  • ಅರ್ಜಿದಾರರ ಆಧಾರ್ ಕಾರ್ಡ್
  • ಅರ್ಜಿದಾರರ ರೇಶನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್
  • ಅಭ್ಯರ್ಥಿಯ ಪೋಟೋ
  • ಮೊಬೈಲ್ ನಂಬರ್

ಇದನ್ನೂ ಓದಿ: PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

Pension Application Status-ನಿಮ್ಮ ಮೊಬೈಲ್ ನಲ್ಲೇ ಅರ್ಜಿ ಸ್ಥಿತಿ ಚೆಕ್ ಮಾಡಬಹುದು:

ಒಮ್ಮೆ ಅರ್ಜಿದಾರರು ಅಗತ್ಯ ದಾಖಲೆಗಳ ಸಮೇತ ನಾಡಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿದ ಬಳಿಕ ನಿಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಈ ಕೆಳಗಿನ ಹಂತಗಳನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಅರ್ಜಿ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು.

Step-1: ಮೊದಲಿಗೆ ಇಲ್ಲಿ ಕ್ಲಿಕ್ "Pension Online Application Status" ಮಾಡಿ ಅಧಿಕೃತ ನಾಡಕಚೇರಿ ವೆಬ್ಸೈಟ್ ಅನ್ನು ಪ್ರವೇಶ ಮಾಡಿ.

Pension Application status

Step-2: ಬಳಿಕ ಈ ಪೇಜ್ ನಲ್ಲಿ ನಿಮ್ಮ ಅರ್ಜಿ ಸ್ವೀಕೃತಿ ಸಂಖ್ಯೆಯನ್ನು ನಮೂದಿಸಿ ನಿಮ್ಮ ಪಿಂಚಣಿ ಅರ್ಜಿಯು ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಚೆಕ್ ಮಾಡಿಕೊಳ್ಳಿ.

ವಿಶೇಷ ಸೂಚನೆ: ಗ್ರಾಮ ಒನ್ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಿದವರು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂದು ತಿಳಿಯಬಹುದು.

For More Information-ಹೆಚ್ಚಿನ ಮಾಹಿತಿಗಾಗಿ:

Pension Department Website-ಪಿಂಚಣಿ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್- Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: