Pension Scheme-ಕಾರ್ಮಿಕ ಇಲಾಖೆಯ ವತಿಯಿಂದ ಮಾಸಿಕ ಪಿಂಚಣಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

October 29, 2025 | Siddesh
Pension Scheme-ಕಾರ್ಮಿಕ ಇಲಾಖೆಯ ವತಿಯಿಂದ ಮಾಸಿಕ ಪಿಂಚಣಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!
Share Now:

ಕರ್ನಾಟಕ ಕಟ್ಟದ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕ ಇಲಾಖೆಯ(Pension Application) ಅಡಿಯಲ್ಲಿ 60 ವರ್ಷ ಪೂರ್ಣಗೊಂಡ ನೋಂದಾಯಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಮ್ಮ ದೇಶದಲ್ಲಿ ಕಾರ್ಮಿಕ ಇಲಾಖೆಯಡಿಯಲ್ಲಿ ದುಡಿಯುವ ಕಾರ್ಮಿಕರು ತಮ್ಮ ದುಡಿಮೆಯ ಮೂಲಕ(Government Pension Scheme) ಸಮಾಜದ ಅಭಿವೃದ್ಧಿಗೆ ಶ್ರಮವಹಿಸುತ್ತಾರೆ. ಆದರೆ, ಈ ಕಾರ್ಮಿಕರ ಬಹುತೇಕರು ಅನೌಪಚಾರಿಕ ವಲಯದಲ್ಲಿರುವುದರಿಂದ ವಯಸ್ಕರಾದಾಗ ಆರ್ಥಿಕ ಸುರಕ್ಷತೆಯ ಕೊರತೆ ಎದುರಿಸುತ್ತಾರೆ. ಆದ್ದರಿಂದ ಕಾರ್ಮಿಕರ ನಿವೃತ್ತಿ ನಂತರದ ಜೀವನದ ಆರ್ಥಿಕ ಸ್ಥಿತಿಯನ್ನು ಕಡಿಮೆ ಮಾಡುವ ಉದ್ದೇಶವಾಗಿದೆ.

ಇದನ್ನೂ ಓದಿ: Scholarship Application-ಸಮಾಜ ಕಲ್ಯಾಣ ಇಲಾಖೆಯಿಂದ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ!

ಪ್ರಸ್ತುತ ಈ ಲೇಖನದಲ್ಲಿ ಪ್ರತಿಯೊಬ್ಬ ಕಾರ್ಮಿಕರಿಗೆ ಈ ಪಿಂಚಣಿ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವ ಅವಕಾಶವಿದ್ದು, (Pension Benefits)ಅರ್ಜಿಯನ್ನು ಸಲ್ಲಿಸಲು ಯಾರು ಅರ್ಹರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಸಂಭದಿಸಿದ ಅವಶ್ಯಕ ದಾಖಲಾತಿಗಳಾವುವು? ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Who Can ApplyFor Monthly Pension-ಪಿಂಚಣಿ ಸೌಲಭ್ಯವನ್ನು ಪಡೆಯಲು ಯಾರ‍ೆಲ್ಲ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ?

ಈ ಯೋಜನೆಯ ಅಡಿಯಲ್ಲಿ 60 ವರ್ಷಗಳ ನಂತರ ಪಿಂಚಣಿ ಸೌಲಭ್ಯವನ್ನು ಪಡೆಯಲು ಕೆಳಗೆ ತಿಳಿಸಿರುವ ಮಾನದಂಡಗಳನ್ನು ಹೊಂದಿರಬೇಕು:

1) ಅರ್ಜಿದಾರರ ವಯಸ್ಸು 60 ವರ್ಷ ಅಥವಾ 60 ವರ್ಷಕ್ಕಿಂತ ಹೆಚ್ಚಿನವಾಗಿರಬೇಕು.

2) ಅಭ್ಯರ್ಥಿಯು ಕನಿಷ್ಠ 10 ವರ್ಷಗಳಿಂದ ಕಾರ್ಮಿಕರಾಗಿ ಕಾರ್ಯನಿರ್ವಹಿಸಿರಬೇಕು.

3) ಅರ್ಜಿ ಸಲ್ಲಿಸುವವರು ಸರ್ಕಾರದ ಇತರೆ ಪಿಂಚಣಿ ಯೋಜನೆಗಳಲ್ಲಿ ಸೌಲಭ್ಯವನ್ನುಪಡೆದಿರಬಾರದು.

4) ಅರ್ಜಿದಾರರು ಪಿಂಚಣಿ ಪಡೆಯಲು ಮೂಲ ಆರ್ಥಿಕ ಮಾನದಂಡಗಳನ್ನು ಹೊಂದಿರಬೇಕು.

5) 60 ವರ್ಷ ಪೂರ್ಣಗೊಳ್ಳುವ ಮುನ್ನ ಕನಿಷ್ಟ 3 ವರ್ಷನಿರಂತರವಾಗಿ ಮಂಡಳಿಯ ಸದಸ್ಯತ್ವವನ್ನು ನವೀಕರಿಸಿ ಫಲಾನುಭವಿಯಾಗಿ ಮುಂದುವರೆದಿರಬೇಕು.

ಇದನ್ನೂ ಓದಿ: MSP Purchase-ರೈತರಿಗೆ ಸಿಹಿ ಸುದ್ದಿ! ಇಂದಿನಿಂದ ಬೆಂಬಲ ಬೆಲೆಯಲ್ಲಿ ಸೋಯಾಬಿನ್,ಸೂರ್ಯಕಾಂತಿ,ಹೆಸರು ಕಾಳು ಖರೀದಿ ಆರಂಭ!

Where To Apply For Monthly Pension-ಪಿಂಚಣಿ ಸೌಲಭ್ಯ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು?

ಕಾರ್ಮಿಕ ಇಲಾಖೆಯ ಅಡಿಯಲ್ಲಿ ಮಾಸಿಕ ಪಿಂಚಣಿ ಸೌಲಭ್ಯವನ್ನು ಪಡೆಯಲು ಅರ್ಹರಿರುವ ಫಲಾನುಭವಿಗಳು ನಿಮ್ಮ ಹತ್ತಿರದ ಕಾರ್ಮಿಕ ಪಿಂಚಣಿ ಆಯೋಗ ಅಥವಾ ಸ್ಥಳೀಯ ಕಾರ್ಯಾಲಯಗಳಲ್ಲಿ ಅವಶ್ಯಕ ದಾಖಲಾತಿಗಳ ಸಮೇತ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ಇಲಾಖೆಯು ನಿಗದಿಪಡಿಸಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕವೂ ಅರ್ಜಿಯನ್ನು ಸಲ್ಲಿಸಬಹುದು.

What Are The Required Documents-ಪಿಂಚಣಿ ಪಡೆಯಲು ಒದಗಿಸುವ ದಾಖಲಾತಿಗಳಾವುವು?

  • ಆಧಾರ್ ಕಾರ್ಡ್/Aadhar Card.
  • ಜನನ ಪ್ರಮಾಣಪತ್ರ/Birth Certificate.
  • ಹಿಂದಿನ ಕಾರ್ಮಿಕ ಸಂಸ್ಥೆಯಿಂದ ನೀಡಲ್ಪಟ್ಟ ಸೇವಾ ಪ್ರಮಾಣಪತ್ರ/Service certificate issued by previous agency.
  • ಬ್ಯಾಂಕ್ ಖಾತೆಯ ಪ್ರತಿ/Bank Passbook.
  • ಮೊಬೈಲ್ ನಂಬರ್/Mobile number.

ಇದನ್ನೂ ಓದಿ: RTO Online Servises-ವಾಹನ ಮಾಲೀಕರಿಗೆ ಸಿಹಿ ಸುದ್ದಿ! ಇನ್ಮುಂದೆ RTO ಕಚೇರಿ ಅಲೆದಾಟಕ್ಕೆ ಬೀಳಲಿದೆ ಬ್ರೇಕ್!

pension scheme

ಇದನ್ನೂ ಓದಿ: Kotak Scholarships-ಮಹೀಂದ್ರಾ ಗ್ರೂಪ್ ಕಂಪನಿ ವತಿಯಿಂದ 1.5 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

How To Apply For Pension-ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

ಕಾರ್ಮಿಕ ಇಲಾಖೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಅರ್ಹ ಇರುವ ಆಸಕ್ತ ಅಭ್ಯರ್ಥಿಗಳು ಅವಶ್ಯಕ ದಾಖಲಾತಿಗಳೊಂದಿಗೆ ಕಾರ್ಮಿಕ ಮಂಡಳಿಯ ವೆಬ್ಸೈಟ್ ಅನ್ನು ಭೇಟಿ ಮಾಡಿ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕಾರ್ಮಿಕರು ಅರ್ಜಿಯನ್ನು ಸಲ್ಲಿಸಬಹುದು.

Step-1: ಅರ್ಹ ಅಭ್ಯರ್ಥಿಗಳು ಮೊದಲಿಗೆ ಈ ಲಿಂಕ್ "Apply Now"ಮೇಲೆ ಕ್ಲಿಕ್ ಮಾಡಿ ಕಾರ್ಮಿಕ ಮಂಡಳಿಯ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ತದನಂತರ ಈಗಾಗಲೇ ನೋಂದಣಿಯನ್ನು ಮಾಡಿಕೊಂಡಿರುವವರು ನೇರವಾಗಿ "Login" ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು ಮೊದಲ ಬಾರಿಗೆ ಈ ವೆಬ್ಸೈಟ್ ಭೇಟಿ ಮಾಡುತ್ತಿರುವವರು "Register" ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ನೋಂದಣಿಯನ್ನು ಮಾಡಿಕೊಂಡು ಲಾಗಿನ್ ಅಗಬೇಕು.

Step-3: ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಂಬರ್ ಹಾಗೂ ಅದಕ್ಕೆ ಬರುವ OTP ಅನ್ನು ನಮೂದಿಸಿ ಲಾಗಿನ್ ಅದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ. ನಂತರ ಅಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Bank Loan Interest Subsidy-ಬ್ಯಾಂಕ್ ಸಾಲದ ಮೇಲೆ ಶೇ 3% ಬಡ್ಡಿ ಸಬ್ಸಿಡಿ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ!

More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ: Click here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: