HomeNew postsPM-kisan village list-ಪಿ ಎಂ ಕಿಸಾನ್ ಯೋಜನೆಯಡಿ ಹಣ ಪಡೆಯಲು ಅರ್ಹ ರೈತರ ಹಳ್ಳಿವಾರು ಪಟ್ಟಿ...

PM-kisan village list-ಪಿ ಎಂ ಕಿಸಾನ್ ಯೋಜನೆಯಡಿ ಹಣ ಪಡೆಯಲು ಅರ್ಹ ರೈತರ ಹಳ್ಳಿವಾರು ಪಟ್ಟಿ ಬಿಡುಗಡೆ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೂ ಹಣ ಪಡೆಯಲು ಅರ್ಹರಿರುವ ಹಳ್ಳಿವಾರು ರೈತರ ಪಟ್ಟಿಯನ್ನು(PM-kisan village list-2024)ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಅರ್ಜಿದಾರ ರೈತರು ಕೃಷಿ ಇಲಾಖೆ ಈ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ತಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಹಳ್ಳಿಯ ಪಿ ಎಂ ಕಿಸಾನ್ ಯೋಜನೆಯ ಅರ್ಹ ರೈತರ ಪಟ್ಟಿಯನ್ನು ನೋಡಬಹುದು.

ಒಂದೊಮ್ಮೆ ನೀವು ಅರ್ಜಿ ಸಲ್ಲಿಸಿಯು ಈ ಪಟ್ಟಿಯಲ್ಲಿ ನಿಮ್ಮ ಹೆಸರು ತೋರಿಸದೆ ಇದ್ದಲ್ಲಿ ಯಾವ ಕ್ರಮ ಅನುಸರಿಸಬೇಕು? ಇತ್ಯಾದಿ ಸಂಪೂರ್ಣ ವಿವರವಾದ ಮಾಹಿತಿಯನ್ನು  ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Crop Insurance- ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

PM kisan application-ಈ ಯೋಜನೆಗೆ ಹೊಸ ಅರ್ಜಿ ಸಲ್ಲಿಸಲು ಅವಕಾಶವಿದೇ?

2019 ಕ್ಕೂ ಮೊದಲು ಅರ್ಜಿದಾರರ ಹೆಸರಿನಲ್ಲಿ ಕೃಷಿ ಜಮೀನು ಹೊಂದಿದ್ದವರು ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಈ ವರ್ಷದ ನಂತರ ಪಿತಾರ್ಜಿತ ಆಸ್ತಿ ಅರ್ಜಿದಾರರ ಹೆಸರಿಗೆ ವರ್ಗಾವಣೆ ಅಗಿದ್ದರೆ ಇಂತಹವರು ಅರ್ಜಿ ಸಲ್ಲಿಸಬಹುದು.

ಅದರೆ 2019ರ ಬಳಿಕ ಕೃಷಿ ಜಮೀನನ್ನು ಖರೀದಿ ಮಾಡಿ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದರೆ ಇವರು ಅರ್ಜಿ ಸಲ್ಲಿಸಲು ಬರುವುದಿಲ್ಲ.

ಇದನ್ನೂ ಓದಿ: MSP Price-2024: ದೇಶದ ರೈತರಿಗೆ ಗುಡ್ ನ್ಯೂಸ್ ಭತ್ತ,ರಾಗಿ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಏರಿಕೆ!

Required Documents for application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

1) ಅರ್ಜಿದಾರರ ಅಧಾರ್ ಕಾರ್ಡ.
2) ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ.
3) ಪೋಟೋ
4) ಜಮೀನಿನ ಪಹಣಿ.

ಇದನ್ನೂ ಓದಿ: karnataka dam water level-2024: ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಮತ್ತು ಸಂಗ್ರಹಣೆ ಮತ್ತು ಒಳ ಮತ್ತು ಹೊರ ಹರಿವು ಮಾಹಿತಿ ಹೀಗಿದೆ!

PM-kisan village list-2024: ಪಿ ಎಂ ಕಿಸಾನ್ ಯೋಜನೆಯ ಹಳ್ಳಿವಾರು ಅರ್ಹ ರೈತರ ಪಟ್ಟಿ ನೋಡುವ ವಿಧಾನ:

ರೈತರು ಕೃಷಿ ಇಲಾಖೆಯ ಅಧಿಕೃತ ಈ fruitspmk.karnataka.gov.in ವೆಬ್ಸೈಟ್ ಭೇಟಿ ಮಾಡಿ ನಿಮ್ಮ ಹಳ್ಳಿಯ ಅರ್ಹ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಇಲ್ಲವಾ? ಎಂದು ಚೆಕ್ ಮಾಡಿಕೊಳ್ಳಬಹುದು.

Step-1: ಪ್ರಥಮದಲ್ಲಿ ಈ PM-kisan village list-2024 ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು ಇದಾದ ಬಳಿಕ ಇಲ್ಲಿ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮದ ಹೆಸರನ್ನು ಆಯ್ಕೆ ಮಾಡಿಕೊಂಡು “ವೀಕ್ಷಿಸು” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ತದನಂತರ ಈ ಪೇಜ್ ನಲ್ಲಿ ನಿಮ್ಮ ಹಳ್ಳಿ ರೈತರ ಪಟ್ಟಿ ತೋರಿಸುತ್ತದೆ ಪಟ್ಟಿಯಲ್ಲಿ ಪಿಎಂಕೆಐಡಿ, ರೈತರ ಹೆಸರು, ಅರ್ಜಿ ಸ್ಥಿತಿ ವಿವರವನ್ನು ತೋರಿಸುತ್ತದೆ.

Most Popular

Latest Articles

Related Articles