HomeGovt SchemesPM Usha Scholarship- ಹೆಚ್ಚು ಅಂಕ ಪಡೆದು ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರೂ ₹20,000...

PM Usha Scholarship- ಹೆಚ್ಚು ಅಂಕ ಪಡೆದು ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರೂ ₹20,000 ವಿದ್ಯಾರ್ಥಿ ವೇತನ!

ಕೇಂದ್ರ ಸರಕಾರದ PM USHA ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನದ(Scholarship application) ಕುರಿತು ಈ ಅಂಕಣದಲ್ಲಿ ವಿವರಿಸಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಪ್ರತಿ ವರ್ಷವು ಸಹ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅರ್ಥಿಕ ನೆರವು(PM Usha Scholarship) ನೀಡಲು ವಿವಿಧ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಇದನ್ನೂ ಓದಿ: Kuri sakanike yojane- ಕುರಿ ಸಾಕಾಣಿಕೆ ಮಾಡಲು 1.75 ಲಕ್ಷ ನೆರವು! ಇಲ್ಲಿದೆ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ!

PM USHA ಯೋಜನೆಯಡಿ ಅರ್ಜಿ ಸಲ್ಲಿಸಿ ಯಾರೆಲ್ಲ ವಿದ್ಯಾರ್ಥಿ ವೇತನ ಪಡೆಯಬಹುದು? ಅರ್ಜಿಯನ್ನು ಪ್ರತಿ ವರ್ಷ ಯಾವ ಸಮಯದಲ್ಲಿ ಕರೆಯಲಾಗುತ್ತದೆ? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಈ ಕುರಿತು ಒಂದಿಷ್ಟು ಮಾಹಿತಿಯನ್ನು ಸಹ ತಿಳಿಸಲಾಗಿದೆ.

PM-USHA ಯೋಜನೆಯಡಿ ಎಷ್ಟು ಆರ್ಥಿಕ ನೆರವು ಪಡೆಯಬಹುದು?

ಕೇಂದ ಸರಕಾರದ ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಅಭಿಯಾನ(PM-USHA) ಯೋಜನೆಯಡಿ ನೀಡುವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ 80 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 3 ವರ್ಷದ ಪದವಿ ಶಿಕ್ಷಣವನ್ನು ಪಡೆಯಲು ಮೊದಲ ವರ್ಷ ರೂ 12,000 ಉಳಿದ ಎರಡು ವರ್ಷ ತಲಾ ರೂ 20,000 ಸಾವಿರ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಇದನ್ನೂ ಓದಿ: Today Gold rate- ಇಳಿಕೆಯತ್ತ ಚಿನ್ನದ ದರ! ಇಲ್ಲಿದೆ ದೇಶದ ಪ್ರಮುಖ ನಗರಗಳ ಚಿನ್ನದ ದರ!

PM Usha Scholarship scheme documents-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಅರ್ಹ ವಿದ್ಯಾರ್ಥಿಗಳು ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಈ ಕೆಳಗಿನ ದಾಖಲೆಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

1) ವಿದ್ಯಾರ್ಥಿಯ ಆಧಾರ್ ಕಾರ್ಡ ಪ್ರತಿ
2) ಬ್ಯಾಂಕ್ ಪಾಸ್ ಬುಕ್
3) ದ್ವಿತೀಯ ಪಿಯುಸಿ ಮತ್ತು SSLC ಅಂಕಪಟ್ಟಿ
4) ಪದವಿ ವ್ಯಾಸಂಗಕ್ಕೆ ಪ್ರವೇಶ ಪಡೆದಿದ್ದಕೆ ಅಧಿಕೃತ ದಾಖಲೆ ಪ್ರತಿ
5) ಪೋಟೋ
6) ಮೊಬೈಲ್ ನಂಬರ್

ಇದನ್ನೂ ಓದಿ: Gruhalakshmi DBT amount-ಬಿಪಿಎಲ್ ಕಾರ್ಡ ರದ್ದಾದ್ರೆ ಗೃಹಲಕ್ಷ್ಮಿ ಹಣ ಜಮಾ ಆಗಲ್ಲವಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ!

Scholarship

Online application for PM Usha Scholarship- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಮನೆಯಲ್ಲಿ ಕುಳಿತುಕೊಂಡು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Step-1: PM Usha Scholarship application ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.
https://scholarships.gov.in/otrapplication/#/login-page

Step-2: ಇದಾದ ಬಳಿಕ ಇಲ್ಲಿ “Register yourself” ಬಟನ್ ಮೇಲೆ ಕ್ಲಿಕ್ ಮಾಡಿ “I agree to the following” ಎರಡು ಆಯ್ಕೆಯ ಮೇಲೆ ಟಿಕ್ ಮಾಡಿ “Next” ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ OTP ಅನ್ನು ಪಡೆದು ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ “Verify” ಬಟನ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.

ಇದನ್ನೂ ಓದಿ: Aadhaar Card- ಆಧಾರ್ ಕಾರ್ಡ ಹೊಂದಿರುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

Online application for PM Usha Scholarship,

Step-3: ತದನಂತರ “eEKY” ವಿಭಾಗದಲ್ಲಿ ಕೇಳಿರುವ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯಲ್ಲಿ Submit ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: ಮೇಲಿನ ಹಂತವನ್ನು ಪೂರ್ಣಗೊಳಿಸಿದ ನಂತರ login ಬಟನ್ ಮೇಲೆ ಕ್ಲಿಕ್ ಮಾಡಿ Enter OTR (One Time Registration) no.* ನಲ್ಲಿ Registration ನಂಬರ್ ಹಾಕಿ ಪಾಸ್ವರ್ಡ್ ಅನ್ನು ನಮೂದಿಸಿ ಕ್ಯಾಪ್ಚ್ ಕೋಡ್ ಹಾಕಿ Login ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-5: ಲಾಗಿನ್ ಅದ ಬಳಿಕ ಇಲ್ಲಿ ವಿದ್ಯಾರ್ಥಿಯ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Helpline-ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ:

Helpline number: 0120-6619540
Mail: helpdesk@nsp.gov.in

Most Popular

Latest Articles

Related Articles