PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

October 1, 2025 | Siddesh
PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!
Share Now:

ಕೇಂದ್ರ ಸರಕಾರದಿಂದ ಸ್ವಂತ ಉದ್ದಿಮೆಯ ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆ ಅಡಿಯಲ್ಲಿ ಶೇ 25 ರಿಂದ 35% ಸಹಾಯಧನದಲ್ಲಿ ಕೋಳಿ,ಕುರಿ ಸಾಕಾಣಿಕೆ,ಹೈನುಗಾರಿಕೆ ಎರೆಹುಳು ಗೊಬ್ಬರ ತಯಾರಿಕೆ ಸೇರಿದಂತೆ ವಿವಿಧ ಬಗ್ಗೆಯ ಉದ್ದಿಮೆಯನ್ನು ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪುನಃ ಅವಕಾಶ ನೀಡಲಾಗಿದೆ.

ಕಳೆದ ಎರಡು ತಿಂಗಳಿನಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸ್ಥಿಗಿತಗೊಳಿಸಲಾಗಿತ್ತು ಈಗ್ಅ ಪುನಃ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಆಸಕ್ತ ಅರ್ಜಿದಾರರು ಕೂಡಲೇ ಅಗತ್ಯ ದಾಖಲೆಗಳ ಸಮೇತ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.

ಇದನ್ನೂ ಓದಿ: Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆ ಅಡಿಯಲ್ಲಿ ಸಬ್ಸಿಡಿಯನ್ನು ಪಡೆಯ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳೇನು? ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

ಸಬ್ಸಿಡಿಯಲ್ಲಿ ಯಾವೆಲ್ಲ ಉದ್ದಿಮೆಯನ್ನು ಆರಂಭಿಸಬಹುದು?

ತಮ್ಮದೇ ಅದ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವವರು ಈ ಯೋಜನೆಯಡಿ ಶೇ 25 ರಿಂದ 35% ಸಹಾಯಧನದಲ್ಲಿ ಕೋಳಿ,ಕುರಿ ಸಾಕಾಣಿಕೆ,ಹೈನುಗಾರಿಕೆ ಎರೆಹುಳು ಗೊಬ್ಬರ ತಯಾರಿಕೆ ಸೇರಿದಂತೆ 250ಕ್ಕೂ ಹೆಚ್ಚಿನ ಉದ್ದಿಮೆಯನ್ನು ಆರಂಭಿಸಲು ಅವಕಾಶವಿದ್ದು ಇವುಗಳ ಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ-Click Here

ಇದನ್ನೂ ಓದಿ: Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅರ್ಜಿದಾರರು ಭಾರತೀಯ ನಿವಾಸಿಯಾಗಿರಬೇಕು.
ಗ್ರಾಮೀಣ ಮತ್ತು ನಗರ ಭಾಗದ ಎಲ್ಲಾ ನಾಗರಿಕರು ಅರ್ಜಿ ಸಲ್ಲಿಸಬಹುದು.
ಎಲ್ಲಾ ವರ್ಗದ ಅಭ್ಯರ್ಥಿಗಳು ಸಹ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಸಹಾಯಧನವನ್ನು ಪಡೆಯಬಹುದು.
ಈ ಹಿಂದೆ ಯೋಜನೆ ಅಡಿ ಸಹಾಯಧನವನ್ನು ಪಡೆಯದೇ ಇರುವವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆ ವಿವರ:

ಕೇಂದ್ರ ಸರಕಾರವು 15 ಆಗಸ್ಟ್ 2008 ರಲ್ಲಿ ದೇಶದ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವ-ಉದ್ಯೋಗ ಪ್ರಾರಂಭಿಸಲು, ಅರ್ಥಿಕ ನೆರವು ನೀಡುವುದಕ್ಕಾಗಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(PMEGP)ಯನ್ನು ಜಾರಿಗೊಳಿಸಿದೆ.

ಈ ಯೋಜನೆಯಡಿ ಪಟ್ಟಣ, ನಗರ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 50. ಲಕ್ಷಗಳವರೆಗೆ ಸಾಲವನ್ನು ನೀಡಿ ಗರಿಷ್ಟ ಶೇ 25 ರಿಂದ 35% ವರೆಗೆ ಸಹಾಯಧನವನ್ನು ನೀಡಲಾಗುತ್ತದೆ. ಹಸು, ಕುರಿ, ಮೇಕೆ, ಎಮ್ಮೆ, ಕೋಳಿ, ಬಾತು ಕೋಳಿ, ಟರ್ಕಿ ಕೋಳಿ, ಮೀನು ಸಾಕಾಣಿಕೆ ಹಾಗೂ ಹೋಟೆಲ್ ಮತ್ತು ಇತರೆ 250ಕ್ಕೂ ಅಧಿಕ ಉದ್ದಿಮೆಗಳಿಗೆ ಸಾಲಕ್ಕೆ ಸಹಾಯಧನ ಪಡೆಯಬವುದಾಗಿದೆ.

ಇದನ್ನೂ ಓದಿ: Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

PMEGP application

ಇದನ್ನೂ ಓದಿ: Speed Post-ಅಂಚೆ ಇಲಾಖೆಯಿಂದ ಅಕ್ಟೋಬರ್ 01 ರಿಂದ ಸ್ಪೀಡ್ ಪೋಸ್ಟ್ ನಲ್ಲಿ ಮಹತ್ವದ ಬದಲಾವಣೆ!

ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆ ಅಡಿಯಲ್ಲಿ ಸಹಾಯಧನವನ್ನು ಪಡೆದು ತಮ್ಮದೇ ಅದ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವವರು ನಿಮ್ಮ ಜಿಲ್ಲೆಯ ಜಿಲ್ಲಾ ಕೈಗಾರಿಕ ಕೇಂದ್ರ(DIC) ಕಚೇರಿಯನ್ನು ಭೇಟಿ ಮಾಡಿ ಅಗತ್ಯ ಮಾಹಿತಿಯನ್ನು ಪಡೆದು ಅಲ್ಲೇ ಅರ್ಜಿ ಸಲ್ಲಿಸಬಹುದು. ಅಥವಾ ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

Step-1: ಮೊದಲಿಗೆ ಇಲ್ಲಿ ಕ್ಲಿಕ್ Apply Now ಮಾಡಿ ಅಧಿಕೃತ PMEGP ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ ತೋರಿಸುವ "Application For New Unit" ಬಟನ್ ಮೇಲೆ ಕ್ಲಿಕ್ ಮಾಡಿದರೆ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-3: ಅರ್ಜಿ ನಮೂನೆ ಒಪನ್ ಅದ ಬಳಿಕ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿಡಿಯೋ ನೋಡಲು ಇಲಿ ಕ್ಲಿಕ್ ಮಾಡಿ: Watch Now

Required documents for Pmegp scheme-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು:

  • ಅರ್ಜಿದಾರರ ಪೋಟೋ
  • ಆಧಾರ್ ಕಾರ್ಡ
  • ಗುರುತಿನ ಚೀಟಿ
  • ಬ್ಯಾಂಕ್ ಪಾಸ್ ಬುಕ್
  • ಪಾನ್ ಕಾರ್ಡ
  • ನೀವು ಪ್ರಾರಂಭಿಸಲು ಇಚ್ಚಿಸುವ ಸ್ವ-ಉದ್ಯೋಗದ ಯೋಜನಾ ವರದಿ

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: