Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

August 5, 2025 | Siddesh
Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!
Share Now:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ(Post Matric Scholarship) ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಒಟ್ಟು ಮೂರು ಯೋಜನೆಯಡಿ ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು(Post Matric Scholarship Application)ಸಲ್ಲಿಸಲು ಅವಕಾಶವಿದ್ದು, ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Registered Post-ಅಂಚೆ ಇಲಾಖೆಯಲ್ಲಿ ಇನ್ನುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಬಂದ್!

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ(Post Matric Scholarship), ಶಾಲಾ ಶುಲ್ಕ ಮರುಪಾವತಿ(Fee Reimbusement) ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಯೋಜನೆಯಡಿಯಲ್ಲಿ(Vidyasiri Meal and Housing Assistance Scheme) ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Who Can Apply-ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಹತಾ ಮಾನದಂಡಗಳು:

  • ಅರ್ಜಿದಾರ ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ವಿದ್ಯಾರ್ಥಿಯು ಪ್ರಸ್ತುತ ಮೆಟ್ರಿಕ್ ನಂತರದ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
  • ವಿದ್ಯಾರ್ಥಿಯು ಪವರ್ಗ-1,ಹಿಂದುಲಿದ ವರ್ಗ ಮತ್ತು ಅಲೆಮಾರಿ/ಅರೆಅಲೆಮಾರಿ ವರ್ಗಕ್ಕೆ ಸೇರಿದವರಾಗಿರಬೇಕು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 30 ಸೆಪ್ಟೆಂಬರ್ 2025

ಇದನ್ನೂ ಓದಿ: PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

Scheme Wise Information-ಯಾವೆಲ್ಲ ಯೋಜನೆಯಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ?

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಒಟ್ಟು ಮೂರು ಯೋಜನೆಯಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇವುಗಳ ವಿವರ ಹೀಗಿದೆ:

1) ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ(Post Matric Scholarship): ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಆಯ್ಕೆಯಾದ ಪಿಯುಸಿ,ಡಿಪ್ಲೋಮಾ,ಪದವಿ,ಸ್ನಾತಕೋತ್ತರ ಹಾಗೂ ಮೆಟ್ರಿಕ್ ನಂತರದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಅನ್ನು ನೀಡಲಾಗುತ್ತದೆ.

2) ಶುಲ್ಕ ಮರುಪಾವತಿ(Fee Reimbusement): ಅರ್ಹ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಪಾವತಿ ಮಾಡಿರುವ ಶುಲ್ಕವನ್ನು ಮರು ಪಾವತಿ ಪಡೆಯಲು ಈ ಯೋಜನೆಯಡಿ ಅವಕಾಶವಿರುತ್ತದೆ.

3) ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ(Vidyasiri Meal and Housing Assistance Scheme): ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಈ ಯೋಜನೆಯಡಿ ಶಿಕ್ಷಣಕ್ಕೆ ನೆರವಾಗಲು ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಇದನ್ನೂ ಓದಿ: PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

Scholarship

ಇದನ್ನೂ ಓದಿ: Muskaan Scholarship-ಮುಸ್ಕಾನ್ ಸ್ಕಾಲರ್‌ಶಿಪ್ ಯೋಜನೆಯಡಿ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

How To Apply-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Step-1: ಮೊದಲಿಗೆ ಇಲ್ಲಿ ಕ್ಲಿಕ್ "Post Matric Scholarship Online Application" ಮಾಡಿ ಅಧಿಕೃತ ವಿದ್ಯಾರ್ಥಿವೇತನದ SSP ತಂತ್ರಾಂಶವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

Scholarship Application

Step-2: ಬಳಿಕ ಇಲ್ಲಿ ಮುಖಪುಟದಲ್ಲಿ ಕಾಣುವ 2025-26ನೇ ಸಾಲಿನ "ಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ" ಬಟನ್ ಮೇಲೆ ಕ್ಲಿಕ್ ಮಾಡಿ ನಂತರ ವಿದ್ಯಾರ್ಥಿಗಳ ಲಾಗಿ ಐಡಿ ಮತ್ತು ಪಾರ್ವಡ್ ಅನ್ನು ಹಾಕಿ ಕೆಳಗೆ ಕಾಣುವ ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ "STUDENT LOGIN" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

Step-3: ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ವಿಶೇಷ ಸೂಚನೆ: ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಪ್ರವೇಶ ಮಾಡುತ್ತಿರುವ ಫಲಾನುಭವಿಗಳು ಮುಖಪುಟದಲ್ಲಿ ಕಾಣುವ "ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ರಚನೆ ಮಾಡಿಕೊಳ್ಳಬೇಕು.

ಇದನ್ನೂ ಓದಿ: DL and RC Card- ವಾಹನ ಚಾಲಕರಿಗೆ ಸಿಹಿ ಸುದ್ದಿ! DL ಮತ್ತು RC ಡೆಲಿವರಿ ಈಗ ಮತ್ತಷ್ಟು ಬೇಗ! ಬಂದಿದೆ ಸ್ಮಾರ್ಟ್ ಕಾರ್ಡ್?

Required Documents For Post Matric Scholarship-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಶ್ಯವಾಗಿ ಒದಗಿಸಬೇಕಾದ ದಾಖಲಾತಿಗಳ ಪಟ್ಟಿ ಈ ಕೆಳಗಿನಂತಿವೆ:

  • ಅರ್ಜಿದಾರ ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar.
  • ಪೋಟೋ/Photo.
  • ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Passbook.
  • ವ್ಯಾಸಂಗ ಪ್ರಮಾಣ ಪತ್ರ/Stady Certificate.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
  • ಮೊಬೈಲ್ ನಂಬರ್ ಮತ್ತು ಮೇಲ್ ಐಡಿ.

Helpline Number-ಸಹಾಯವಾಣಿ-8050770005
Mail Id-ಮೇಲ್ ವಿಳಾಸ-[email protected] ಇಲಾಖೆಯ ಅಧಿಕೃತ ವೆಬ್ಸೈಟ್-Apply Now ಅಧಿಕೃತ ಪ್ರಕಟಣೆ ಪ್ರತಿ-Download Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: