Poultry Shed Subsidy-ಕೋಳಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ₹60,000 ಸಹಾಯಧನ!

January 13, 2026 | Siddesh
Poultry Shed Subsidy-ಕೋಳಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ₹60,000 ಸಹಾಯಧನ!
Share Now:

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ(MGNREGA) ಅಡಿಯಲ್ಲಿ ಗ್ರಾಮೀಣ ಪ್ರದೇಶದ ಕೃಷಿಕರು ಕೋಳಿ ಸಾಕಾಣಿಕೆಯನ್ನು(Poultry Shed Subsidy) ಮಾಡಲು ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿ ಕಚೇರಿ ಮೂಲಕ ನರೇಗಾ ಯೋಜನೆಯಡಿ ರೂ 60,000/- ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ರೈತರು ಅನುಸರಿಸಬೇಕಾದ ಅಗತ್ಯ ಕ್ರಮಗಳ ಬಗ್ಗೆ ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ನಾಟಿ ಕೋಳಿ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆಯು(Poultry Shed Subsidy Application) ಒಂದು ಉತ್ತಮ ಉಪ ಆದಾಯ ತರಬಲ್ಲ ಚಟುವಟಿಕೆಯಾಗಿದ್ದು ಗ್ರಾಮೀಣ ಪ್ರದೇಶದ ಕೃಷಿಕರು ಕೃಷಿ ಬೆಳೆಯನ್ನು ಬೆಳೆಯುವುದರ ಜೊತೆಗೆ ಹೈನುಗಾರಿಕೆ ಮತ್ತು ಕುರಿ, ಕೋಳಿ ಸಾಕಾಣಿಕೆಯನ್ನು ಮಾಡುವುದರಿಂದ ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೋಳಿ ಸಾಕಾಣಿಕೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: New Ration Card-ಹೊಸ ರೇಶನ್ ಕಾರ್ಡ ವಿತರಣೆ ಕುರಿತು ಮಹತ್ವದ ಮಾಹಿತಿ ಪ್ರಕಟ!

ಇಂದಿನ ಅಂಕಣದಲ್ಲಿ ಕೋಳಿ ಸಾಕಾಣಿಕೆಗೆ(Poultry Farming) ಯಾವೆಲ್ಲ ಯೋಜನೆ ಅಡಿಯಲ್ಲಿ ಸಹಾಯಧನವನ್ನು ಪಡೆಯಬಹುದು? ನರೇಗಾ ಯೋಜನೆಯಡಿ ಕೋಳಿ ಶೆಡ್ ನಿರ್ಮಾಣಕ್ಕೆ ಎಷ್ಟು ಆರ್ಥಿಕ ನೆರವನ್ನು ಪಡೆಯಬಹುದು? ಇದಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲಾತಿಗಳು ಯಾವುವು? ಇನ್ನಿತರೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Poultry Farming Subsidy Schemes-ಕೋಳಿ ಸಾಕಾಣಿಕೆಗೆ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

ನಮ್ಮ ರಾಜ್ಯದಲ್ಲಿ ಕೃಷಿಕರು ಕೋಳಿ ಸಾಕಾಣಿಕೆಯನ್ನು ಮಾಡಲು ಅವಶ್ಯವಿರುವ ಶೆಡ್ ಮತ್ತು ಇನ್ನಿತರೆ ಪರಿಕರಗಳನ್ನು ಸಹಾಯಧನದಲ್ಲಿ ಪಡೆದುಕೊಳ್ಳಲು ಈ ಕೆಳಗಿನ ಯೋಜನೆಯಡಿ ಅರ್ಜಿ ಸಲ್ಲಿಸಿ ಪ್ರಯೋಜನವನ್ನು ಪಡೆದುಕೊಳ್ಳಬಹುದು.

1) ನರೇಗಾ ಯೋಜನೆ- ಗ್ರಾಮ ಪಂಚಾಯಿತಿ ಕಚೇರಿಯನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಿ ಕೋಳಿ ಶೆಡ್ ನಿರ್ಮಾಣ ಮಾಡಿಕೊಳ್ಳಲು ಈ ಯೋಜನೆಯಡಿ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದು.

2) PMEGP ಯೋಜನೆ- ಕೇಂದ್ರ ಸರಕಾರದಿಂದ ಈ ಯೋಜನೆಯನ್ನು ಅನುಷ್ಥಾನಗೊಳಿಸಲಾಗುತ್ತಿದ್ದು ಈ ಯೋಜನೆಯಡಿ ಒಟ್ಟೂ ಯೋಜನೆ ವೆಚ್ಚದಲ್ಲಿ ಶೇ 25% ರಿಂದ ಶೇ 35% ರಷ್ಥು ಸಬ್ಸಿಡಿಯನ್ನು ಪಡೆಯಲು ಅವಕಾಶವಿದ್ದು ಕೋಳಿ ಶೆಡ್/ಕೋಳಿ ಆಹಾರ/ಅಗತ್ಯ ಪರಿಕರ ಮತ್ತು ಉಪಕರಣಗಳನ್ನು ಈ ಯೋಜನೆಯಡಿ ಖರೀದಿ ಮಾಡಲು ಅವಕಾಶವಿರುತ್ತದೆ. ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ನಿಮ್ಮ ಜಿಲ್ಲೆಯ ಜಿಲ್ಲಾ ಕೈಗಾರಿಕಾ ಕೇಂದ್ರ(DIC)ದ ಕಚೇರಿಯನ್ನು ಭೇಟಿ ಮಾಡಿ.

ಇದನ್ನೂ ಓದಿ: PM Kisan Amount-ಪಿಎಂ ಕಿಸಾನ್ ಆರ್ಥಿಕ ನೆರವು ಏರಿಕೆ ನಿರೀಕ್ಷೆ!

3) ನಿಗಮ ಯೋಜನೆಯಡಿ- ಒಗ್ಗಲಿಗ/ಲಿಂಗಾಯತ ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ನಿಗಮಗಳಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಶೇ 50% ಸಹಾಯಧನದಲ್ಲಿ ಕೋಳಿ ಸಾಕಾಣೆಕೆಯನ್ನು ಮಾಡಲು ಅವಕಾಶವಿದೆ. ಇದಕ್ಕಾಗಿ ಆನ್ಲೈನ್ ಮೂಲಕ ಪ್ರತಿ ವರ್ಷ ಆಗಸ್ಟ್-ನವೆಂಬರ್ ತಿಂಗಳ ಮಧ್ಯೆ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ.

Who Can Apply For Poultry Shed Subsidy-ನರೇಗಾ ಯೋಜನೆಯಡಿ ಕೋಳಿ ಶೆಡ್ ನಿರ್ಮಾಣಕ್ಕೆ ಸಬ್ಸಿಡಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೋಳಿ ಶೆಡ್ ನಿರ್ಮಾಣಕ್ಕೆ ಸಹಾಯಧನವನ್ನು ಪಡೆಯಲು ಈ ಕೆಳಗಿನ ಪಟ್ಟಿಯಲ್ಲಿರುವ ಅರ್ಹತಾ ಮಾನದಂಡಗಳನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು ಗ್ರಾಮೀಣ ಭಾಗದ ನಿವಾಸಿಯಾಗಿರಬೇಕು.
ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅರ್ಜಿದಾರ ಅಭ್ಯರ್ಥಿಗಳು ಗ್ರಾಮ ಪಂಚಾಯತಿ ಕಚೇರಿಯಲ್ಲಿ ತಮ್ಮ ಕುಟುಂಬದ ಸದಸ್ಯರ ಹೆಸರ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಜಾಬ್ ಕಾರ್ಡ ಪಡೆದುಕೊಳ್ಳಬೇಕು.
ಅರ್ಜಿದಾರರು ಕೋಳಿ ಶೆಡ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಹೊಂದಿರಬೇಕು.

ಇದನ್ನೂ ಓದಿ: Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

Poultry Shed Subsidy Application

ಇದನ್ನೂ ಓದಿ: Dairy Shed Subsidy-ಗ್ರಾಮ ಪಂಚಾಯಿತಿಯಿಂದ ದನದ ಶೆಡ್ ನಿರ್ಮಾಣಕ್ಕೆ ರೂ 57,000 ಪಡೆಯುವುದು ಹೇಗೆ!

Poultry Shed Subsidy Amount-ಕೋಳಿ ಶೆಡ್ ನಿರ್ಮಾಣಕ್ಕೆ ಎಷ್ಟು ಸಹಾಯಧನ ನೀಡಲಾಗುತ್ತದೆ?

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೋಳಿ ಸಾಕಾಣಿಕೆಗೆ ಶೆಡ್ ಅನ್ನು ಕಟ್ಟಿಕೊಳ್ಳಲು/ನಿರ್ಮಾಣ ಮಾಡಿಕೊಳ್ಳಲು ಕೂಲಿ ವೆಚ್ಚ ಮತ್ತು ಸಮಾಗ್ರಿ ವೆಚ್ಚ ಸೇರಿ ಒಟ್ಟು ರೂ 60,000/ ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ.

Narega Poultry Shed Application-ಎಲ್ಲಿ ಅರ್ಜಿ ಸಲ್ಲಿಸಬೇಕು?

ಕೋಳಿ ಶೆಡ್ ನಿರ್ಮಾಣಕ್ಕೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಜಿದಾರರು ಈ ಅಂಕಣದಲ್ಲಿ ತಿಳಿಸಿರುವ ಅವಶ್ಯವಿರುವ ದಾಖಲೆಗಳನ್ನು ತೆಗೆದುಕೊಂದು ನಿಮ್ಮ ಗ್ರಾಮ ಪಂಚಾಯಿತಿ ಕಚೇರಿಯನ್ನು ಭೇಟಿ ಮಾಡಿ ಮುಂದಿನ ವರ್ಷದ ಕ್ರಿಯಾ ಯೋಜನೆಯಲ್ಲಿ ನಿಮ್ಮ ಹೆಸರು ಹಾಗೂ ಕಾಮಗಾರಿಯನ್ನು ಸೇರಿಸಲು ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: Kuri Shed Subsidy-ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಾಣಕ್ಕೆ ರೂ 70,000 ಪಡೆಯುವುದು ಹೇಗೆ!

Required Documents For Poultry Shed Subsidy Application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಕೋಳಿ ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಬೇಕಾಗುವ ದಾಖಲೆಗಳ ಪಟ್ಟಿ ಹೀಗಿದೆ:

ಆಧಾರ್ ಕಾರ್ಡ/Aadhar
ನರೇಗಾ ಜಾಬ್ ಕಾರ್ಡ/Job Card
ಅರ್ಜಿದಾರರ ಪೋಟೋ/Photo
ಆಧಾರ್ ಲಿಂಕ್ ಅಗಿರುವ ಬ್ಯಾಂಕ್ ಪಾಸ್ ಬುಕ್/Bank Pass Book
ಕುಟುಂಬದ ರೇಶನ್ ಕಾರ್ಡ/Ration Card
ಪಹಣಿ/ಉತಾರ್/RTC
ಪಶು ವೈದ್ಯಾಧಿಕಾರಿಯಿಂದ ಕೋಳಿ ಸಾಕಾಣಿಕೆ ದೃಡೀಕರಣ ಪ್ರಮಾಣ ಪತ್ರ(ಕ್ರಿಯಾ ಯೋಜನೆಯ ಅನುಮೋದನೆ ಬಳಿಕ ಬೇಕಾಗುತ್ತದೆ)

ಇದನ್ನೂ ಓದಿ: Free Pumpset Repair-ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Poultry Shed Subsidy Applicaion Process-ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗೆ ಮಾಡಲಾಗುತ್ತದೆ?

ಸಾರ್ವಜನಿಕರು ಗ್ರಾಮ ಪಂಚಾಯಿತಿ ಕಚೇರಿಯನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಿದ ಬಳಿಕ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿಮ್ಮ ಹೆಸರು ಮತ್ತು ಕಾಮಗಾರಿಯನ್ನು ಅನುಮೋದನೆ ಮಾಡಿ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆ ಮಾಡಲು ತಾಲ್ಲೂಕಿ ಕಚೇರಿಗೆ ರವಾನಿಸಲಾಗುತ್ತದೆ ಅನುಮೋದನೆ ಪಡೆದುಕೊಂಡ ಬಳಿಕ ಅರ್ಜಿದಾರರಿಗೆ ಕಾಮಗಾರಿಯನ್ನು ಪ್ರಾರಂಭಿಸಲು ಮಂಜೂರಿ ಆದೇಶವನ್ನು ನೀಡಲಾಗುತ್ತದೆ. ನಂತರ ಅರ್ಜಿದಾರರು ಕಾಮಗಾರಿಯನ್ನು ಪ್ರಾರಂಭ ಮಾಡಬೇಕು ಕಾಮಗಾರಿ ಪೂರ್ಣಗೊಳಿಸಿದ ಬಳಿಕ ಈ ಯೋಜನೆಯಡಿ ಲಭ್ಯವಿರುವ ಕೂಲಿ ವೆಚ್ಚ ವನ್ನು ಜಾಬ್ ಕಾರ್ಡ ಸಲ್ಲಿಸಿರುವವ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಸಾಮಾಗ್ರಿ ವೆಚ್ಚವನ್ನು ಅರ್ಜಿದಾರ ಫಲಾನುಭವಿಯ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.

For More Information- ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಉಪಯುಕ್ತ ಮಾಹಿತಿ:

Helpline-ಸಹಾಯವಾಣಿ ಸಂಖ್ಯೆ- 8277506000
Website-ಯೋಜನೆ ವೆಬ್ಸೈಟ್- Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: