Prabanda Sparde-2025: ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ!ಪ್ರಥಮ ಬಹುಮಾನ 31,000 ರೂ!

August 30, 2025 | Siddesh
Prabanda Sparde-2025: ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ!ಪ್ರಥಮ ಬಹುಮಾನ 31,000 ರೂ!
Share Now:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ(Department of Information and Public Relations) ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ.

ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳು ಈ ಸ್ಪರ್ದೆಯಲ್ಲಿ ಭಾಗವಹಿಸುವುದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: SSP Scholarship Aadhar Link-ವಿದ್ಯಾರ್ಥಿವೇತನ ಪಡೆಯಲು ಆಧಾರ್ ಸೀಡಿಂಗ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ. ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಿದೆ.

Prabanda Sparde Prize Money Details-ಬಹುಮಾನ ಮೊತ್ತದ ವಿವರ:

  • ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ 31,000/-, ದ್ವಿತೀಯ ಬಹುಮಾನ 21,000/-, ತೃತೀಯ ಬಹುಮಾನ 11,000/- ರೂ.
  • ಜಿಲ್ಲಾಮಟ್ಟದಲ್ಲಿ ಪ್ರಥಮ ಬಹುಮಾನ 3,000/- ರೂ, ದ್ವಿತೀಯ ಬಹುಮಾನ 2,000/- ರೂ, ಮತ್ತು ತೃತೀಯ ಬಹುಮಾನ 1,000/- ರೂ ಬಹುಮಾನ ನೀಡಲಾಗುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿದೆ.

ಇದನ್ನೂ ಓದಿ: NextGen Edu Scholarship-ಪಿಯುಸಿ ವಿದ್ಯಾರ್ಥಿಗಳಿಗೆ ನೆಕ್ಸ್ಟ್‌ಜೆನ್ 15,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

High School-ಪ್ರೌಢ ಶಾಲಾ ವಿಭಾಗದಲ್ಲಿ:

1) ಸ್ವಚ್ಚತೆಯ ಪಾಠ - ಗಾಂಧೀಜಿಯವರ ಸಂದೇಶ,
2) ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ.
3) ಗಾಂಧೀಜಿಯವರ ಸ್ವಾತಂತ್ರ್ಯದ ಕನಸು - ನನ್ನ ಕಲ್ಪನೆ. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

Pre-Graduate Education-ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ:

1) ಅಸ್ಪೃಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ,
2) ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ,
3) ಬದಲಾವಣೆ ನನ್ನಿಂದಲೇ ಆರಂಭ - ಗಾಂಧೀಜಿಯವರ ಪಾಠ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 900 ರಿಂದ 1000 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಇದನ್ನೂ ಓದಿ: Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

prabanda sparde

Undergraduate And Postgraduate-ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ:

1) ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ,
2) ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ - ತತ್ವಗಳ ಹೋಲಿಕೆ,
3) ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ - ಯುವಕರಿಗೆ ಗಾಂಧೀಜಿಯವರ ಪಾಠ. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 1400 ರಿಂದ 1500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಜಿಲ್ಲಾ ಕಚೇರಿಗಳು ರೊಳಗಾಗಿ ಜಿಲ್ಲಾಡಳಿತದ ಸಹಯೋಗದೊಂದಿಗೆ ದಿನಾಂಕ : 06-09-2025 ರೊಳಗಾಗಿ ಸ್ಪರ್ಧೆ ಏರ್ಪಡಿಸಿ ನಂತರ ಮೌಲ್ಯಮಾಪನ ಮಾಡಿ ದಿನಾಂಕ : 12-09-2025 ಒಳಗಾಗಿ ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಬೇಕು. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ. ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.

ಇದನ್ನೂ ಓದಿ: Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

ವಿಜೇತರಿಗೆ ಗೌರವ:

ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು (3) ಪ್ರಬಂಧಗಳಿಗೆ ಅಕ್ಟೋಬರ್ 02 ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Prabanda Sparde Rules-ಅರ್ಜಿ ಸಲ್ಲಿಸಲು ನಿಬಂಧನೆಗಳು :

  • ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು.
  • ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು.
  • ಅಕರವಾಗಿ ಬಳಸಿದ ಪರಾಮರ್ಶನ / ಅಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು.
  • ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಆಧಾರ ಗ್ರಂಥಗಳು / ಮೊಬೈಲ್ ಗಳ ಬಳಕೆಗೆ ಅವಕಾಶವಿರುವುದಿಲ್ಲ.
  • ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು.
  • ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು.
  • ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾಯ್ದಿರಿಸಿಕೊಂಡಿರುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Drone Pilot Training-ಉಚಿತ ಡ್ರೋನ್ ಪೈಲೆಟ್ ತರಬೇತಿಗೆ ಅರ್ಜಿ ಆಹ್ವಾನ!

More information-ಹೆಚ್ಚಿನ ಮಾಹಿತಿಗಾಗಿ ಮತ್ತು ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಕೂಡಲೇ ನಿಮ್ಮ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆಯಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: