Prize Money-2025-26ನೇ ಸಾಲಿನ ಮೆಟ್ರಿಕ್ ನಂತರದ ಮತ್ತು SSLC ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

January 20, 2026 | Siddesh
Prize Money-2025-26ನೇ ಸಾಲಿನ ಮೆಟ್ರಿಕ್ ನಂತರದ ಮತ್ತು SSLC ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!
Share Now:

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನ ಮೆಟ್ರಿಕ್ ನಂತರದ (Post-Metric) ಮತ್ತು SSLC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (Prize Money) ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪ್ರೋತ್ಸಾಹಧನ ಯೋಜನೆಯಡಿ(Prize Money Scheme) ಒದಗಿಸುವ ಆರ್ಥಿಕ ನೆರವನ್ನು ವಿದ್ಯಾರ್ಥಿಗಳು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

ಈ ಲೇಖನದಲ್ಲಿ ವಿದ್ಯಾರ್ಥಿಗಳು ಪ್ರೋತ್ಸಾಹಧನವನ್ನು ಪಡೆಯಲು ಇಲಾಖೆಯಿಂದ(Prize Money Scheme Application) ನಿಗದಿಪಡಿಸಿರುವ ಅರ್ಹತಾ ಮಾನದಂಡಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಸೇರಿದಂತೆ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

ತರಗತಿವಾರು ಪ್ರೋತ್ಸಾಹಧನ ವಿವರ:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಪ್ರೋತ್ಸಾಹಧನದ ವಿವರ ಈ ಕೆಳಗಿನಂತಿದೆ:

ಕೋರ್ಸ್ ವಿವರಪ್ರೋತ್ಸಾಹಧನ
SSLC₹7,000
II PUC / Diploma (3 years)₹20,000
Any Degree (B.A., B.Com, B.Sc, etc.)₹25,000
Any Post-Graduation (M.A., M.Sc, etc.)₹30,000
Professional Courses (Engg, Medical, Agri, Veterinary)₹35,000

ಇದನ್ನೂ ಓದಿ: Anabe Krishi Subsidy-ಅಣಬೆ ಕೃಷಿಯನ್ನು ಪ್ರಾರಂಭಿಸಲು ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

Prize Money Scheme Eligibility Criteria-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು:

ಕರ್ನಾಟಕ ಸರ್ಕಾರದಡಿ ಕಾರ್ಯನಿರ್ವಹಿಸುವ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನ ಯೋಜನೆ ಅಡಿಯಲ್ಲಿ ಆರ್ಥಿಕ ನೆರವನ್ನು ಪಡೆಯಲು ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಹೊಂದಿರಬೇಕಾದ ಅರ್ಹತಾ ಮಾನದಂಡಗಳ ಪಟ್ಟಿ ಈ ಕೆಳಗಿನಂತಿದೆ:

ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು ಕಡ್ಡಾಯವಾಗಿ ಪರಿಶಿಷ್ಟ ಜಾತಿ (SC) ವರ್ಗಕ್ಕೆ ಸೇರಿದವರಾಗಿರಬೇಕು.

ಆಯಾ ಕೋರ್ಸ್‌ಗಳನ್ನು ಪ್ರಥಮ ಪ್ರಯತ್ನದಲ್ಲಿ (First Attempt) ಹಾಗೂ ಪ್ರಥಮ ದರ್ಜೆಯಲ್ಲಿ (First Class - 60% ಕ್ಕಿಂತ ಹೆಚ್ಚು) ಉತ್ತೀರ್ಣರಾಗಿರಬೇಕು.

ವಿದ್ಯಾಭ್ಯಾಸದ ನಡುವೆ ಯಾವುದೇ ವರ್ಷಗಳ ಗ್ಯಾಪ್ (Gap year) ಇರಬಾರದು.

Prize Money Scheme Application Last Date-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 31 ಜನವರಿ 2026

ಇದನ್ನೂ ಓದಿ: Free Neurology Treatment-ನರಮಂಡಲ ರೋಗಿಗಳಿಗೆ ಸರ್ಕಾರದಿಂದ 2 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ!

Prize Money Scheme

ಇದನ್ನೂ ಓದಿ: Vasati Yojane-ರಾಜೀವ ಗಾಂಧಿ ವಸತಿ ನಿಗಮದಿಂದ ಕೇವಲ 9.7 ಲಕ್ಷಕ್ಕೆ 1BHK ಫ್ಲಾಟ್ ಪಡೆಯಲು ಅರ್ಜಿ ಆಹ್ವಾನ!

Prize Money Scheme Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅರ್ಜಿದಾರ ವಿದ್ಯಾರ್ಥಿಯು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಅಗತ್ಯ ದಾಖಲೆಗಳ ಸಮೇತ ಈ ಕೆಳಗಿನ ಹಂತಗಳನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಮನೆಯಲೇ ಕುಳಿತು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಇಲಾಖೆಯಿಂದ ಅವಕಾಶ ನೀಡಲಾಗಿದೆ.

Step-1: ವಿದ್ಯಾರ್ಥಿಗಳು ಮೊದಲ ಹಂತದಲ್ಲಿ ಈ ಲಿಂಕ್ "Prize Money Online Application" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಕಾಣಿಸುವ "Aadhar Details" ಬಟನ್ ಮೇಲೆ ಕ್ಲಿಕ್ ಮಾಡಿ ನೀವು ಅರ್ಹರಿರುವ ಯೋಜನೆಯ ಮೇಲೆ ಕ್ಲಿಕ್ ಮಾಡಿ "Validate Aadhar" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮುಂದಿನ ಪೇಜ್ ಪ್ರವೇಶ ಮಾಡಿ.

Step-3: ಈ ಪುಟದಲ್ಲಿ ವಿದ್ಯಾರ್ಥಿಯ ಆಧಾರ್ ಕಾರ್ಡ ನಂಬರ್ ಮತ್ತು OTP ಅನ್ನು ಪಡೆದು ನಮೂದಿಸಿದರೆ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: Re-Marriage Assistance-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ₹3.0 ಲಕ್ಷ ಆರ್ಥಿಕ ನೆರವು!

Documents Required For Prize Money Scheme-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗೆ ತಿಳಿಸಿರುವ ಅವಶ್ಯವಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಿದ್ಧವಾಗಿಟ್ಟುಕೊಳ್ಳಿ:

ಆಧಾರ್ ಕಾರ್ಡ್ (ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು).

ಜಾತಿ ಮತ್ತು ಆದಾಯ ಪ್ರಮಾಣಪತ್ರ (RD ಸಂಖ್ಯೆ ಹೊಂದಿರಬೇಕು).

ಅಂಕಪಟ್ಟಿ (Marks Card) SSLC ಅಥವಾ ಪದವಿ/ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ಅಂಕಪಟ್ಟಿ.

ಬ್ಯಾಂಕ್ ಪಾಸ್‌ಬುಕ್ ಪ್ರತಿ.

ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ (Passport size photo)

ಇದನ್ನೂ ಓದಿ: JK Tyre Scholarship-ಜೆಕೆ ಟೈರ್ & ಇಂಡಸ್ಟ್ರೀಸ್ ಲಿಮಿಟೆಡ್‌ನ ವತಿಯಿಂದ 25,000 ವಿದ್ಯಾರ್ಥಿವೇತನಕ್ಕೆ ಅರ್ಜಿ!

ವಿದ್ಯಾರ್ಥಿಗಳ ಗಮನಕ್ಕೆ:

ವಿದ್ಯಾರ್ಥಿಯ ಆಧಾರ್ ಕಾರ್ಡ್‌ಗೆ ಬ್ಯಾಂಕ್ ಖಾತೆ ಕಡ್ಡಾಯವಾಗಿ ಮ್ಯಾಪಿಂಗ್ ಆಗಿರಬೇಕು. ಹಣವು ನೇರವಾಗಿ DBT (Direct Benefit Transfer) ಮೂಲಕ ನಿಮ್ಮ ಬ್ಯಾಂಕ್ ಖಾತೆಗೆ ಜಮ ಅಗುವುದರಿಂದ ಈ ನಿಯಮ ಪಾಲನೆ ಕಡ್ಡಾಯವಾಗಿದೆ.

ತಪ್ಪದೇ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಮತ್ತು ಅರ್ಹ ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪಡೆಯಲು ಸಹಾಯಕವಾಗುತ್ತದೆ.

Helpline Number-ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಹಾಯವಾಣಿ ಸಂಖ್ಯೆ- 9482300400

Department Website-ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್- Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: